ಸ್ವತಂತ್ರ ಭಾರತದ ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಸರ್ವರಿಗೂ ಸಮಾನತೆ ನೀಡಿದವರು ಡಾ.ಬಿ.ಆರ್. ಅಂಬೇಡ್ಕರ್ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ತರೀಕೆರೆ ಎನ್.ವೆಂಕಟೇಶ್ ಹೇಳಿದರು

ಕನ್ನಡಪ್ರಭ ವಾರ್ತೆ ತರೀಕೆರೆ

ಸ್ವತಂತ್ರ ಭಾರತದ ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಸರ್ವರಿಗೂ ಸಮಾನತೆ ನೀಡಿದವರು ಡಾ.ಬಿ.ಆರ್. ಅಂಬೇಡ್ಕರ್ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ತರೀಕೆರೆ ಎನ್.ವೆಂಕಟೇಶ್ ಹೇಳಿದರು

ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಏರ್ಪಡಿಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69 ನೆ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಪಟ್ಟಣದ ತಾಲೂಕು ಆಡಳಿತ ಸೌದ ಎದುರು ಇರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಈ ದೇಶದ ಮಹಿಳೆಯರಿಗೆ ಸಮಾನತೆ ಮತ್ತು ಶಿಕ್ಷಣ ಮತದಾನದ ಹಕ್ಕು ನೀಡಿದವರು ಡಾ.ಬಿ.ಆರ್.ಅಂಬೇಡ್ಕರ್, ನೀಡಿದ ಸಂವಿಧಾನ. ಎಲ್ಲಾ ಧರ್ಮ, ಜಾತಿಯ ಸರ್ವರಿಗೂ ಸಮಾನತೆ ಹಕ್ಕುಗಳನ್ನು ನೀಡಿದ್ದಾರೆ. ಅವರು ಅಸ್ಪೃಶ್ಯತೆಯ ನೋವು ಅನುಭವಿಸಿ ಈ ದೇಶದಲ್ಲಿ ಅಸ್ಪೃಶ್ಯತೆ ಅಸಮಾನತೆ ಹೋಗಲಾಡಿಸಲು ಜೀವನಪೂರ್ತಿ ಹೋರಾಟ ಮಾಡಿದ್ದಾರೆ. ಆದರೆ ಇಂದಿಗೂ ಅಸ್ಪೃಶ್ಯತೆ ಜಾತಿ ಪದ್ಧತಿ ನಿರ್ಮೂಲನೆಯಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ದಲಿತ ಮುಖಂಡರಾದ ಹಾದಿಕೆರೆ ರಾಜು ಅವರು ಮಾತನಾಡಿ ಅಂಬೇಡ್ಕರ್ ನೀಡಿದ ಸಂವಿಧಾನ ಪ್ರಪಂಚದಲ್ಲಿಯೇ ಶ್ರೇಷ್ಠ ಸಂವಿಧಾನ. ಅವರು ನಿಧನರಾದ ಈ ದಿನ 64 ರಾಷ್ಟ್ರಗಳು ತಮ್ಮ ಧ್ವಜವನ್ನು ಅರ್ಧಕ್ಕೆ ಇಳಿಸಿ ಗೌರವ ಸಂತಾಪ ಸೂಚಿಸುತ್ತವೆ ಎಂದರು.

ದಲಿತ ಮುಖಂಡರಾದ ಎಸ್.ಎನ್.ಸಿದ್ದರಾಮಪ್ಪ ಮಾತನಾಡಿ, ಅಂಬೇಡ್ಕರ್ ಶೋಷಿತರ ಧ್ವನಿಯಾಗಿ ಮಹಿಳೆಯರಿಗೆ ಉದ್ಯೋಗ ಮತ್ತು ರಾಜಕೀಯ ಮೀಸಲಾತಿಯನ್ನು ನೀಡಿದ್ದಾರೆ ಎಂದು ಹೇಳಿದರು

ಉಪ ನೋಂದಣಿ ಅಧಿಕಾರಿ ವೆಂಕಟೇಶ್, ಪುರಸಭಾ ಮುಖ್ಯ ಅಧಿಕಾರಿ ರಂಜಿತ್, ತಾಲೂಕು ಪಂಚಾಯಿತಿ ವ್ಯವಸ್ಥಾಪಕರಾದ ಚಂದ್ರಶೇಖರ್, ಸಿಡಿಪಿಒ ಚರಣ್ ರಾಜ್, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್ ಮಂಜುನಾಥ್‌, ಇಲಾಖೆ ಸಿಬ್ಬಂದಿ ಹಾಜರಿದ್ದರು.