ಮಹಿಳೆಯರ ಸ್ವಾತಂತ್ರ್ಯ ಸಮಾನತೆಗೆ ಅಂಬೇಡ್ಕರ್ ಕೊಡುಗೆ ಅಪಾರ

| Published : May 01 2025, 12:47 AM IST

ಮಹಿಳೆಯರ ಸ್ವಾತಂತ್ರ್ಯ ಸಮಾನತೆಗೆ ಅಂಬೇಡ್ಕರ್ ಕೊಡುಗೆ ಅಪಾರ
Share this Article
  • FB
  • TW
  • Linkdin
  • Email

ಸಾರಾಂಶ

ದೇಶದ ಮೂಲೆಮೂಲೆಯಲ್ಲಿರುವ ಮಹಿಳೆಯರಿಗೆ ಶಿಕ್ಷಣ ಹಕ್ಕು, ಆಸ್ತಿಯ ಹಕ್ಕು, ಹೀಗೆ ಹಲವಾರು ಹಕ್ಕುಗಳನ್ನು ಸಂವಿಧಾನದ ಮೂಲಕ ಅಂಬೇಡ್ಕರ್‌ ಅವರು ಕಲ್ಪಿಸಿಕೊಟ್ಟಿದ್ದಾರೆ. ಅವರ ಕನಸು ನನಸಾಗಬೇಕೆಂದರೆ ಈ ಎಲ್ಲ ಹಕ್ಕುಗಳು ಪ್ರತಿ ಮಹಿಳೆಯನ್ನು ತಲುಪಬೇಕು. ಮಹಿಳಾ ಸಬಲೀಕರಣಕ್ಕೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕೊಡುಗೆ ಅಪಾರ, ಹೆಣ್ಣು ಇವತ್ತು ಇಷ್ಟರ ಮಟ್ಟಿಗೆ ಶಿಕ್ಷಣವನ್ನು ಪಡೆಯುತ್ತಿದ್ದಾಳೆ, ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾಳೆ ಎಂದರೆ ಅದಕ್ಕೆ ಮೂಲ ಕಾರಣ ಅಂಬೇಡ್ಕರ್‌‌, ಅವರನ್ನು ಜೀವನಪೂರ್ತಿ ಸ್ಮರಿಸುತ್ತೇನೆ ಎಂದು ಸುಮ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೇಲೂರು

ಸಮಾಜದಲ್ಲಿನ ಸಂಕೋಲೆಗಳಿಂದ ಮಹಿಳೆಯರನ್ನು ಬಿಡುಗಡೆಗೊಳಿಸಿ ಸ್ವಾತಂತ್ರ್ಯ, ಸಮಾನತೆಯ ತತ್ವಗಳನ್ನು ಸಂವಿಧಾನಾತ್ಮಕವಾಗಿ ದೊರಕಿಸಿಕೊಡುವಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್ ಅವರು ನೀಡಿರುವ ಕೊಡುಗೆಗಳನ್ನು ಪ್ರತಿಯೊಬ್ಬ ಮಹಿಳೆಯೂ ಸ್ಮರಿಸಬೇಕು ಎಂದು ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಮ ತಿಳಿಸಿದರು.

ಬೇಲೂರು ತಾಲೂಕಿನ ಬಂಟೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಗೆಲುವು ಸಾಧಿಸಿದ ನಂತರ ಮಾತನಾಡಿ, ದೇಶದ ಮೂಲೆಮೂಲೆಯಲ್ಲಿರುವ ಮಹಿಳೆಯರಿಗೆ ಶಿಕ್ಷಣ ಹಕ್ಕು, ಆಸ್ತಿಯ ಹಕ್ಕು, ಹೀಗೆ ಹಲವಾರು ಹಕ್ಕುಗಳನ್ನು ಸಂವಿಧಾನದ ಮೂಲಕ ಅಂಬೇಡ್ಕರ್‌ ಅವರು ಕಲ್ಪಿಸಿಕೊಟ್ಟಿದ್ದಾರೆ. ಅವರ ಕನಸು ನನಸಾಗಬೇಕೆಂದರೆ ಈ ಎಲ್ಲ ಹಕ್ಕುಗಳು ಪ್ರತಿ ಮಹಿಳೆಯನ್ನು ತಲುಪಬೇಕು. ಮಹಿಳಾ ಸಬಲೀಕರಣಕ್ಕೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕೊಡುಗೆ ಅಪಾರ, ಹೆಣ್ಣು ಇವತ್ತು ಇಷ್ಟರ ಮಟ್ಟಿಗೆ ಶಿಕ್ಷಣವನ್ನು ಪಡೆಯುತ್ತಿದ್ದಾಳೆ, ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾಳೆ ಎಂದರೆ ಅದಕ್ಕೆ ಮೂಲ ಕಾರಣ ಅಂಬೇಡ್ಕರ್‌‌, ಅವರನ್ನು ಜೀವನಪೂರ್ತಿ ಸ್ಮರಿಸುತ್ತೇನೆ, ನನಗೆ ರಾಜಕೀಯ ಕ್ಷೇತ್ರದಲ್ಲಿ ಅವಕಾಶ ದೊರೆತು ಬಂಟೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸದಸ್ಯೆ ಆಗಿ ಇಂದು ಉಪಾಧ್ಯಕ್ಷೆ ಸ್ಥಾನ ಅಲಂಕರಿಸಿದ್ದೇನೆ ಎಂದರೆ ಅದಕ್ಕೆ ಮೂಲಕ ಕಾರಣ ಬಾಬಾ ಸಾಹೇಬರು. ಅವರ ಆದರ್ಶಗಳ ಹಾದಿಯಲ್ಲಿ ಪ್ರಾಮಾಣಿಕವಾಗಿ ನನಗೆ ಸಿಕ್ಕಿರುವ ಅವಕಾಶವನ್ನು ಹಾಗೂ ಜವಾಬ್ದಾರಿಯಲ್ಲಿ ಅಚ್ಚುಕಟ್ಟಾಗಿ ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ನನ್ನ ಮೇಲೆ ಭರವಸೆ ಇಟ್ಟು ಈ ಸ್ಥಾನಕ್ಕೆ ಮತ ಹಾಕಿ ಕಳುಹಿಸಿರುವ ಪ್ರತಿಯೊಬ್ಬ ಮತದಾರರ ಪರವಾಗಿ ಅಭಿವೃದ್ಧಿಯ ಕೆಲಸ ಮಾಡುತ್ತೇನೆ ಎಂದು ಹೇಳಿದರು.ಗ್ರಾಮ ಪಂಚಾಯತಿ ಅಧ್ಯಕ್ಷ ಧನಂಜಯ್ ಮಾತನಾಡಿ, ಬಂಟೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಾರ್ವಜನಿಕರಿಗೆ ವಿದ್ಯುತ್, ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಒದಗಿಸುವ ನಿಟ್ಟಿನಲ್ಲಿ ಕೆಲಸ ನಾನು ಸೇರಿದಂತೆ ಪಂಚಾಯಿತಿ ಸಿಬ್ಬಂದಿ, ಸದಸ್ಯರು, ಉಪಾಧ್ಯಕ್ಷರು ಮಾಡುತ್ತಿದ್ದೇವೆ. ಕಸ ವಿಲೇವಾರಿ ಮಾಡಲು ರಸ್ತೆ ಸಮಸ್ಯೆ ಇದ್ದು ಈಗಾಗಲೇ ಶಾಸಕರಿಗೆ ಹಾಗು ಸಂಭಂದಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಕಸ ವಿಲೇವಾರಿ ರಸ್ತೆ ಸಮಸ್ಯೆಗಳನ್ನು ಆದಷ್ಟು ಬೇಗನೆ ಬಗೆಹರಿಸಲಾಗುವುದು ಮತ್ತು ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರತಿ ಗ್ರಾಮಗಳಿಗೂ ರಸ್ತೆ, ಕುಡಿಯುವ ನೀರು, ವಿದ್ಯುತ್, ಸೇರಿದಂತೆ ಮೂಲಭೂತ ಸೌಕರ್ಯ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಸುಧಾ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಸದಸ್ಯರಾದ, ಮಹಮ್ಮದ್ ರಫೀಕ್, ಕೃಷ್ಣಮೂರ್ತಿ, ಮೀನಾಕ್ಷಮ್ಮ, ಶಿವಮ್ಮ, ದಾಸಪ್ಪ, ಪುಟ್ಟಸ್ವಾಮಿ, ಜಯಮ್ಮ, ಜಿಯಾಹುಲ್ಲ, ಅಕ್ತರ್ ಬಾನು, ರೇಷ್ಮಾ, ಮೋಹನ್ ರಾಜ್, ರಂಜಿತ ಮತ್ತಿತರರು ಹಾಜರಿದ್ದರು.