ಹೊಸಕೋಟೆ: ದೇಶಕ್ಕೆ ಸಂವಿಧಾನದಂತಹ ಮಹತ್ತರ ಕೊಡುಗೆ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಕೇವಲ ದಲಿತ ಸಮುದಾಯಕ್ಕೆ ಸೀಮಿತರಲ್ಲ, ಸರ್ವರಿಗೂ ಸಲ್ಲುವ ಮಹನೀಯರು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು

ಹೊಸಕೋಟೆ: ದೇಶಕ್ಕೆ ಸಂವಿಧಾನದಂತಹ ಮಹತ್ತರ ಕೊಡುಗೆ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಕೇವಲ ದಲಿತ ಸಮುದಾಯಕ್ಕೆ ಸೀಮಿತರಲ್ಲ, ಸರ್ವರಿಗೂ ಸಲ್ಲುವ ಮಹನೀಯರು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ‍್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ರಚನೆ ಮಾಡುವ ಮೂಲಕ ಅಂಬೇಡ್ಕರ್ ಅವರು ಸರ್ವರಿಗೂ ಸಮಾನತೆಯ ಬದುಕಿನ ಹಕ್ಕನ್ನು ಕೊಟ್ಟಿದ್ದಾರೆ. ಪ್ರಮುಖವಾಗಿ ಮಹಿಳಾ ಮೀಸಲಾತಿ ನೀಡಿದ್ದಾರೆ. ಅಂಬೇಡ್ಕರ್ ಅವರನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತ ಮಾಡುವುದು ಬೇಡ. ಅವರು ಅನುಭವಿಸಿದ ಅಸೃಶ್ಯತೆ ವಿರುದ್ದ ಹೋರಾಡಿ ಜಾತಿರಹಿತ ಸಮಾಜ ನಿರ್ಮಾಣದ ದೃಡ ಸಂಕಲ್ಪ ಹೊತ್ತವರು. ಆದ್ದರಿಂದ ಅಂಬೇಡ್ಕರ್ ಆಶಯ ಈಡೇರಿಸಲು ನಾವು ಅವರ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.ಅಂಬೇಡ್ಕರ್ ಹೆಸರಲ್ಲಿ ರಂಗಮಂದಿರ:

ಹೊಸಕೋಟೆ ನಗರದಲ್ಲಿ ಸುಸಜ್ಜಿತ ರಂಗಮಂದಿರ ನಿರ್ಮಾಣ ಮಾಡಿ, ಆ ರಂಗಮಂದಿರಕ್ಕೆ ಅಂಬೇಡ್ಕರ್ ಹೆಸರಿಡಲಾಗುವುದು. ಇದರಿಂದ ಮತ್ತಷ್ಟು ಗೌರವ ಅಂಬೇಡ್ಕರ್ ಅವರಿಗೆ ಧಕ್ಕುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಜಿಪಂ ಮಾಜಿ ಸದಸ್ಯ ವೈಎಸ್‌ಎಂ ಮಂಜುನಾಥ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅಂಬೇಡ್ಕರ್ ಜಯಂತಿ ಹಾಗೂ ಜಗಜೀವನ್ ರಾಮ್ ಜಯಂತಿ ಪ್ರತ್ಯೇಕ ಆಚರಣೆ ವಿಚಾರಣವಾಗಿ ನಡೆದ ಚರ್ಚೆಗಳ ವಿಚಾರ ರಾಜಕೀಯ ಸ್ವರೂಪ ಪಡೆದುಕೊಂಡು ಶಾಸಕರ ಹೆಸರನ್ನು ತಳಕು ಹಾಕುವ ಕೆಲಸ ಮಾಡಲಾಗುತ್ತಿದೆ. ಆದರೆ ಶಾಸಕ ಶರತ್ ಬಚ್ಚೇಗೌಡರು ಎಲ್ಲರಿಗೂ ಸಮಾನತೆಯನ್ನೇ ಕಲ್ಪಿಸುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸೋಮಶೇಖರ್, ಇಒ ಮುನಿಯಪ್ಪ, ಪೌರಾಯುಕ್ತ ನೀಲಲೋಚನ ಪ್ರಭು, ಬಮುಲ್ ನಿರ್ದೇಶಕ ಬಿ.ವಿ.ಸತೀಶ್‌ಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ವಿ.ರಾಜಶೇಖರ್‌ಗೌಡ, ಟೌನ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಭೈರೇಗೌಡ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದರಾಜು, ಬಿಎಂಆರ್‌ಡಿಎ ಸದಸ್ಯ ಸುಬ್ಬರಾಜು, ಜಿಪಂ ಮಾಜಿ ಸದಸ್ಯ ವೈಎಸ್‌ಎಂ ಮಂಜುನಾಥ್, ದಲಿತ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಚಿನ್ನಸ್ವಾಮಿ, ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ಹಾಜರಿದ್ದರು.

ಫೋಟೋ: 14 ಹೆಚ್‌ಎಸ್‌ಕೆ 1

ಹೊಸಕೋಟೆ ತಾಲೂಕು ಆಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಕಾರ‍್ಯಕ್ರಮದಲ್ಲಿ ಶಾಸಕ ಶರತ್ ಬಚ್ಚೇಗೌಡ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.