ಡಾ.ಬಿ.ಆರ್. ಅಂಬೇಡ್ಕರ್ ಅವರು ಒಂದು ಜಾತಿ, ವರ್ಗಕ್ಕೆ ಮಾತ್ರ ಸೀಮಿತವಾಗದೆ ಪ್ರತಿಯೊಬ್ಬರಿಗೂ ನ್ಯಾಯ ಸಮಾನತೆ ಕೊಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಮಹಾನ್ ವ್ಯಕ್ತಿ ಎಂದು ಹೇಳಿದರು.
ಸಂವಿಧಾನ ಸಂರಕ್ಷಣಾ ಪಡೆಯಿಂದ ವಿಶೇಷ ಉಪನ್ಯಾಸ, ಸನ್ಮಾನ ಕಾರ್ಯಕ್ರಮದಲ್ಲಿ ಡಾ.ಬಿ.ಎನ್.ನಾಗಭೂಷಣ್ ಅಭಿಮತ
ಕನ್ನಡಪ್ರಭ ವಾರ್ತೆ ಗುಬ್ಬಿಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತದ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿ ದೇಶದ ಪ್ರತಿಯೊಬ್ಬ ಪ್ರಜೆಯೂ ಗೌರವದಿಂದ ಬದುಕಲು ಬೇಕಾದ ಕಾನೂನಾತ್ಮಕ ಚೌಕಟ್ಟನ್ನು ರೂಪಿಸಿದರು ಎಂದು ಚಾಲುಕ್ಯ ಆಸ್ಪತ್ರೆ ಸಿಇಒ ಡಾ.ಬಿ.ಎನ್.ನಾಗಭೂಷಣ್ ತಿಳಿಸಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಹಾಗೂ ಸಂವಿಧಾನ ಸಂರಕ್ಷಣಾ ಪಡೆ ತಾಲೂಕು ಘಟಕದ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಅವರು ಒಂದು ಜಾತಿ, ವರ್ಗಕ್ಕೆ ಮಾತ್ರ ಸೀಮಿತವಾಗದೆ ಪ್ರತಿಯೊಬ್ಬರಿಗೂ ನ್ಯಾಯ ಸಮಾನತೆ ಕೊಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಮಹಾನ್ ವ್ಯಕ್ತಿ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಪ್ರಸನ್ನ ಮಾತನಾಡಿ, ಶಿಕ್ಷಣವು ಪ್ರತಿಯೊಬ್ಬ ವ್ಯಕ್ತಿಯ ಮೂಲಭೂತ ಹಕ್ಕು ಮತ್ತು ಅದು ವಿಮೋಚನೆಯ ದಾರಿಯಾಗಿದೆ. ಶಿಕ್ಷಣ ಪಡೆದುಕೊಳ್ಳುವ ಮೂಲಕ ಪ್ರತಿಯೊಬ್ಬರೂ ಉತ್ತಮ ಶಿಕ್ಷಣ ಪಡೆದುಕೊಂಡು ಸಮಾಜದಲ್ಲಿ ಸಮಾನತೆಯನ್ನು ರೂಪಿಸಬೇಕು ಎಂದರು.ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಡಾ.ಎಚ್. ಲಕ್ಷ್ಮೀನಾರಾಯಣಸ್ವಾಮಿ ಮಾತನಾಡಿ, ಭಾರತದ ಕೋಟ್ಯಂತರ ಜನರಿಗೆ ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಪಾತ್ರ ಮುಖ್ಯವಾದ್ದು, ಅಂಬೇಡ್ಕರ್ ಅವರು ಕೇವಲ ದಲಿತರ ಪರವಾಗಿ ಮಾತ್ರವಲ್ಲದೆ, ಇಡೀ ಭಾರತೀಯ ಮಹಿಳಾ ಸಂಕುಲದ ಏಳಿಗೆಗಾಗಿ ಶ್ರಮಿಸಿದವರು. ಹಿಂದೂ ಕೋಡ್ ಬಿಲ್ ಮೂಲಕ ಮಹಿಳೆಯರಿಗೆ ಆಸ್ತಿ ಹಕ್ಕು, ವಿಚ್ಛೇದನದ ಹಕ್ಕು ಮತ್ತು ಸಮಾನತೆಯ ಹಕ್ಕುಗಳನ್ನು ದೊರಕಿಸಿಕೊಡಲು ಅವರು ತಮ್ಮ ಸಚಿವ ಸ್ಥಾನಕ್ಕೇ ರಾಜೀನಾಮೆ ನೀಡಿದ್ದರು. ಇಂದು ಭಾರತದ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದರೆ, ಅದಕ್ಕೆ ಅಂಬೇಡ್ಕರ್ ಹಾಕಿಕೊಟ್ಟ ಬುನಾದಿಯೇ ಕಾರಣವಾಗಿದೆ ಎಂದು ತಿಳಿಸಿದರು.ನಿವೃತ್ತ ಪ್ರಾಂಶುಪಾಲರಾದ ಎನ್.ಇಂದಿರಮ್ಮ ಮಾತನಾಡಿ, ಒಬ್ಬ ಮಹಿಳೆ ಕಲಿತರೆ ಇಡೀ ಕುಟುಂಬವೇ ಸುಧಾರಿಸುತ್ತದೆ ಎಂಬುದು ಅಂಬೇಡ್ಕರ್ ಅವರ ನಂಬಿಕೆಯಾಗಿತ್ತು. ಮಹಿಳೆಯರು ಶಿಕ್ಷಣ ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಅವರು ಸದಾ ಪ್ರೋತ್ಸಾಹಿಸುತ್ತಿದ್ದರು ಎಂದು ತಿಳಿಸಿದರು.ಹೋರಾಟಗಾರ ರಾಮಕೃಷ್ಣಪ್ಪ, ಛಲವಾದಿ ಮಹಾಸಭಾ ಅಧ್ಯಕ್ಷ ಟಿ.ಇ.ಈರಣ್ಣ, ಕಾಲೇಜು ಶೈಕ್ಷಣಿಕ ಡೀನ್ ಡಾ. ಜಿ. ನಾಗರಾಜು, ಲೆಫ್ಟಿನೆಂಟ್ ಡಾ. ಸುಮುಖ್, ವಾಣಿಜ್ಯ ಶಾಸ್ತ್ರದ ಉಪನ್ಯಾಸಕ ಹಾಗೂ ಸಾಂಸ್ಕೃತಿಕ ಸಂಚಾಲಕ ಜಿ.ಗಂಗಾಧರಯ್ಯ, ಅರುಣ್ ಕುಮಾರಿ, ಉಪನ್ಯಾಸಕರಾದ ತಿಮ್ಮಣ್ಣ, ಕಾಳಪ್ಪ, ವನಜ, ತಿಮ್ಮೇಗೌಡ, ಅರ್ಪಿತ, ತಿಮ್ಮನಾಯಕ್, ಡಾ. ದರ್ಶನ, ಅಶೋಕ್, ಮಲ್ಲಿಕಾರ್ಜುನ್ ಪ್ರಭು, ಸಂವಿಧಾನ ರಕ್ಷಣಾಪಡೆಯ ಸಂಚಾಲಕ ಮರಿಯಾಂಬಿ, ಬಿ.ಟಿ. ಗಿರೀಶ್ ಕುಮಾರ್, ಮಂಜುನಾಥ್ ಪ್ರಭು, ಡಿ.ಲೋಕೇಶ್ ಉಪಸ್ಥಿತರಿದ್ದರು.30 ಜಿ ಯು ಬಿ 6
ಗುಬ್ಬಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು(ಸ್ವಾಯತ್ತ) ಹಾಗೂ ಸಂವಿಧಾನ ಸಂರಕ್ಷಣಾ ಪಡೆ ತಾಲೂಕು ಘಟಕದ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಚಾಲುಕ್ಯ ಆಸ್ಪತ್ರೆ ಸಿಇಒ ಡಾ.ಬಿ.ಎನ್.ನಾಗಭೂಷಣ್ ಉದ್ಘಾಟಿಸಿದರು.