ಅಂಬೇಡ್ಕರ್‌ ಅಪಮಾನ ಘಟನೆ ಗಂಭೀರವಾಗಿ ಪರಿಗಣನೆ: ನಗರ ಪೊಲೀಸ್‌ ಆಯುಕ್ತ ಚೇತನ್‌

| Published : Jan 24 2024, 02:03 AM IST

ಅಂಬೇಡ್ಕರ್‌ ಅಪಮಾನ ಘಟನೆ ಗಂಭೀರವಾಗಿ ಪರಿಗಣನೆ: ನಗರ ಪೊಲೀಸ್‌ ಆಯುಕ್ತ ಚೇತನ್‌
Share this Article
  • FB
  • TW
  • Linkdin
  • Email

ಸಾರಾಂಶ

ಕಲಬುರಗಿ ನಗರದ ಕೋಟನೂರು ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸದರಿ ಘಟನೆಗೆ ಸಂಬಂಧಪಟ್ಟಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಪ್ರಕರಣವನ್ನು ಆದಷ್ಟು ಬೇಗನೆ ತ್ವರಿತಗತಿಯಲ್ಲಿ ತನಿಖೆ ನಡೆಸಿ ಅಪರಾಧಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಆರ್‌. ಚೇತನ್‌ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ನಗರದ ಕೋಟನೂರು ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸದರಿ ಘಟನೆಗೆ ಸಂಬಂಧಪಟ್ಟಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣವನ್ನು ಆದಷ್ಟು ಬೇಗನೆ ತ್ವರಿತಗತಿಯಲ್ಲಿ ತನಿಖೆ ನಡೆಸಿ ಅಪರಾಧಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಆರ್‌. ಚೇತನ್‌ ಹೇಳಿದ್ದಾರೆ.

ಸಮಾನತೆಗಾಗಿ ತಮ್ಮ ಜೀವನವನ್ನೇ ಸವೆಸಿ ಇಡೀ ದೇಶದ ಶೋಷಿತ ಸಮುದಾಯಗಳಿಗೆ ಬದುಕುವ ಹಕ್ಕನ್ನು ಕೊಟ್ಟ ಮಹಾತ್ಮನಿಗೂ ಅಪಮಾನ ಮಾಡಿದವರಿಗೆ ತಕ್ಕ ಶಿಕ್ಷೆ ನೀಡುವ ಕೆಲಸವನ್ನು ನಾವು ಖಂಡಿತ ಮಾಡಲಿದ್ದೇವೆ.

ಸಾರ್ವಜನಿಕರು ಉದ್ವೇಗಕ್ಕೆ ಒಳಗಾಗದೇ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ಕಲಬುರಗಿ ನಗರ ಪೊಲೀಸ್ ವತಿಯಿಂದ ಕೋರಲಾಗುವುದು ಎಂದು ಆರ್‌ ಚೇತನ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಲಬುರಗಿ ನಗರದಾದ್ಯಂತ ಮದ್ಯ‌ ಮಾರಾಟ ನಿಷೇಧ:

ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜ.23ರ ಸಂಜೆ 6ರಿಂದ ಜ.24ರ‌ ಮದ್ಯರಾತ್ರಿ 12 ಗಂಟೆ ವರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರಂತೆ ಕಲಬುರಗಿ ನಗರಕ್ಕೆ ಸೀಮಿತವಾಗಿ ಎಲ್ಲಾ ತರಹದ ಮಧ್ಯ ತಯಾರಿಕಾ ಘಟಕಗಳನ್ನು, ಮದ್ಯಪಾನ, ಸರಾಯಿ, ಶೇಂಧಿ, ಸ್ವದೇಶಿ ಹಾಗೂ ವಿದೇಶಿ ಮಧ್ಯಪಾನ ಮತ್ತು ಮಾದಕ ವಸ್ತುಗಳ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಆದೇಶಿಸಿದ್ದಾರೆ. ಇದಲ್ಲದೆ ಬಾರ್ ಮತ್ತು ರೆಸ್ಟೋರೆಂಟ್ ಅಂಗಡಿಗಳನ್ನು ಸಹ ಮುಚ್ಚುವಂತೆ ಆದೇಶದಲ್ಲಿ ತಿಳಿಸಲಾಗಿದೆ.