ಅಂಬೇಡ್ಕರ್‌ ಚಿಂತನೆ ಮೈಗೂಡಿಸಿಕೊಂಡರೆ ಉತ್ತಮ ವ್ಯಕ್ತಿತ್ವ ಶಾಸಕ ಎ.ಆರ್.ಕೃಷ್ಣಮೂರ್ತಿ

| Published : May 11 2025, 11:47 PM IST

ಅಂಬೇಡ್ಕರ್‌ ಚಿಂತನೆ ಮೈಗೂಡಿಸಿಕೊಂಡರೆ ಉತ್ತಮ ವ್ಯಕ್ತಿತ್ವ ಶಾಸಕ ಎ.ಆರ್.ಕೃಷ್ಣಮೂರ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿಯೊಬ್ಬರು ತಮ್ಮ ಜನಾಂಗವನ್ನು ಬಿಡುವುದಿಲ್ಲ. ನಮ್ಮ ಜನಾಂಗದವರು ಸಹ ಒಗ್ಗಟಿನಿಂದ ನಡೆದರೆ ಹೋರಾಟಗಳನ್ನು ಮಾಡಬಹುದು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಡಾ.ಬಿ.ಆರ್‌. ಅಂಬೇಡ್ಕರ್ ಚಿಂತನೆ ಮೈಗೂಡಿಸಿಕೊಂಡರೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬಹುದು ಎಂದು ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.

ನಗರದ ಹೌಸಿಂಗ್ ಬೋರ್ಡ್ ಪಾರ್ಕ್‌ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಹಾಗೂ ಡಾ.ಭೀಮ್ ರಾವ್ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರು ತಮ್ಮ ಜನಾಂಗವನ್ನು ಬಿಡುವುದಿಲ್ಲ. ನಮ್ಮ ಜನಾಂಗದವರು ಸಹ ಒಗ್ಗಟಿನಿಂದ ನಡೆದರೆ ಹೋರಾಟಗಳನ್ನು ಮಾಡಬಹುದು. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ಕೆಲವು ರಾಜ್ಯಗಳಲ್ಲಿ ಎಸ್ಸಿ ಮೀಸಲಾತಿಗಳಲ್ಲಿ ವ್ಯತ್ಯಾಸವಿದೆ. ಕರ್ನಾಟಕದ ಪರಿಶಿಷ್ಟರಿಗೆ ಅನಾನುಕೂಲವಾಗಿದೆ ಎಂದು ಹೇಳಿದರು.

ಮೈಸೂರಿನ ಕೆ.ಆರ್.ಎಸ್ ನಿರ್ಮಾಣ ಮಾಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್.ಎಂ. ವಿಶ್ವೇಶ್ವರಯ್ಯ ಅವರನ್ನು ಮಂಡ್ಯ ಹಾಗೂ ಮೈಸೂರಿನ ಜನರು ನೆನೆಯುತ್ತಾರೆ. ಅದರೆ ಚಾಮರಾಜನಗರ ಜಿಲ್ಲೆಯ ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯದ ನಿರ್ಮಾಣಕ್ಕೆ ಕಾರಣರಾದ ಮಾಜಿ ರಾಜ್ಯಪಾಲ ದಿವಂಗತ ಬಿ.ರಾಚಯ್ಯ ಅವರನ್ನು ನೆನೆಯಲೆಬೇಕು. ಜಲಾಶಯ ನಿರ್ಮಾಣದಿಂದ ಚಾಮರಾಜನಗರ ಜಿಲ್ಲೆಯ ಯಳಂದೂರು, ಕೊಳ್ಳೇಗಾಲ ಮತ್ತು ಚಾಮರಾಜನಗರ ತಾಲೂಕಿನ ಜನರಿಗೆ ಅನುಕೂಲವಾಗಿದೆ ಎಂದು ಹೇಳಿದರು.

ನಾನು ಸಹ ಹೌಸಿಂಗ್ ಬೋಡ್ ಕಾಲೋನಿ ನಿವಾಸಿ. ಪಾರ್ಕಿನ ಅಭಿವೃದ್ಧಿಗೆ ಸರ್ಕಾರದ ಅನುದಾನದಿಂದ ಯೋಜನೆಗಳನ್ನು ರೂಪಿಸಲು ಹಣವನ್ನು ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.

ಭೋಗಾಪುರ ಸರ್ಕಾರಿ ವಸತಿಯುತ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಪಿ. ದೇವರಾಜು ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರತಿಯೊಬ್ಬರ ಆಶಾಕಿರಣ. ಅವರನ್ನು ಒಂದೇ ಪಂಗಡಗಳಿಗೆ ಸಿಮೀತ ಮಾಡಬಾರದು. ಅವರನ್ನು ವಿದೇಶಗಳಲ್ಲಿಯು ನೆನೆಯುತ್ತಾರೆ. ಅವರ ಜೀವನದಲ್ಲಿ ನಡೆದ ಘಟನೆಗಳು ದೀನ ದಲಿತರು ನೆನೆಯಲೇಬೇಕು. ನಮ್ಮ ದೇಶಕ್ಕೆ ಉತ್ತಮವಾದ ಸಂವಿಧಾನವನ್ನು ನೀಡಿ, ಕಾನೂನು ಪ್ರತಿಯೊಬ್ಬರಿಗೂ ಒಂದೇ ಎಂದು ತಿಳಿಸಿದರು. ಅವರನ್ನು ವರ್ಷಕೊಮ್ಮೆ ಪೂಜಿಸುವ ಬದಲು ಪ್ರತಿದಿನವು ಪೂಜಿಸಬೇಕು. ಅವರ ಮಾರ್ಗ ದರ್ಶನದಲ್ಲಿ ನಡೆದರೆ ಉತ್ತಮ ವ್ಯಕ್ತಿಯಾಗಬಹುದು ಎಂದು ಹೇಳಿದರು.

ನಮ್ಮ ರಾಜ್ಯದಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಜಯಂತಿಯನ್ನು ಪ್ರತಿಯೊಂದು ಗ್ರಾಮ, ಪಟ್ಟಣಗಳಲ್ಲಿ ಹಬ್ಬದ ರೀತಿಯಲ್ಲಿ ಆಚರಣೆ ಮಾಡುತ್ತಾರೆ ಎಂದು ಹೇಳಿದರು.

ಸಾಹಿತಿ ಚೌಡಯ್ಯ ಕಟ್ನವಾಡಿ ಅವರು ಮಾತನಾಡಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಮ್ಮ ಜೀವನದಲ್ಲಿ ಕಷ್ಟಗಳನ್ನು ಸಹಿಸಿ ಬಡವರಿಗಾಗಿಯೇ ದಾರೆ ಎರೆದರು.ಅಂತಹ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರು ನೆನೆಯಲೇ ಬೇಕು. ಶಿಕ್ಷಣದಿಂದ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಶಿಕ್ಷಣ ಪ್ರತಿಯೊಬ್ಬರ ಹಕ್ಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ನಗರಸಭಾ ಸದಸ್ಯರಾದ ಕುಮುದಾ ಮಾತನಾಡಿ, ಬಿ.ಆರ್.ಅಂಬೇಡ್ಕರ್ ಅವರು ನಮ್ಮ ಪಾಲಿಗೆ ಆಶಾಕಿರಣ ದಿನದಲಿತರ ಅಭಿವೃದ್ಧಿಗೆ ಅವರು ಸಂವಿಧಾನದ ಮೂಲಕ ನೀಡಿರುವ ಕೊಡುಗೆ ಅಪಾರ ಎಂದರು.

ವೇದಿಕೆಯಲ್ಲಿ ಜಿಲ್ಲಾ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಡಾ.ರೇಣುಕಾದೇವಿ, ಬುದ್ದನಗರ ನಾಗರೀಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಸ್.ಮಹದೇವಯ್ಯ ಇದ್ದರು.

ಕಾರ್ಯಕ್ರಮದಲ್ಲಿ ಡಾ.ಭೀಮ್ ರಾವ್ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿ.ಮಹದೇವಯ್ಯ ಸಾವಿತ್ರಿ ಬಾಫುಲೇ ಸಂಘದ ಭಾವನಿದೇವಿ, ಹಾಗೂ ಅಂಬೇಡ್ಕರ್ ಕ್ಷೇಮಾಭಿವೃದ್ದಿ ಸಂಘದ ಪದಾಧಿಕಾರಿಗಳಾದ ಕೃಷ್ಣರಾಜು, ಯಶೋಧರ.ಪಿ, ಶಿವಕುಮಾರ್, ಮೋಹನಾಂಭ, ಪ್ರಧಾನ ಕಾರ್ಯದರ್ಶಿ ಆರ್.ಶಿವಮೂರ್ತಿ, ಶಿವನಾಗಯ್ಯ.ಕೆ, ದೊರೆಸ್ವಾಮಿ, ಕೃಷ್ಣಮೂರ್ತಿ, ಪವನ್‌ಕುಮಾರ್, ಮಲ್ಲಿಕಾರ್ಜುನಸ್ವಾಮಿ, ರವಿ ಅರಸು, ಕಲ್ಯಾಣಮ್ಮ, ಯತೀಶ.ಎಚ್.ವಿ, ಪ್ರಕಾಶ್, ಪ್ರತಾಪ್, ನಾಗೇಂದ್ರ ಉಮೇಶ್ ಹಾಗೂ ಹೌಸಿಂಗ್ ಬೋರ್ಡ್ ಕಾಲೋನಿಯ ನಿವಾಸಿಗಳು ಹಾಜರಿದ್ದರು.

-------

11ಸಿಎಚ್ಎನ್‌11

ಚಾಮರಾಜನಗರದ ಹೌಸಿಂಗ್ ಬೋರ್ಡ್ ಪಾರ್ಕ್‌ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಹಾಗೂ ಡಾ.ಭೀಮ್ ರಾವ್ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಉದ್ಘಾಟಿಸಿದರು.