ಕುಶಾಲನಗರ: ಸಂವಿಧಾನದ ಮೂಲಕ ಸಮಾನತೆ, ಸಹೋದರತ್ವ ಮತ್ತು ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸಿದ ಮಹಾನ್ ಮಾನವತಾವಾದಿ ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ.ಜಮೀರ್ ಅಹಮದ್ ಹೇಳಿದರು.ಕುಶಾಲನಗರ ಟ್ರಸ್ಟ್ ಕ್ಲಬ್ ಟ್ರಸ್ಟ್ ಆಶ್ರಯದಲ್ಲಿ ಕುಶಲನಗರ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಮತ್ತು ಡಾ ಬಾಬು ಜಗಜೀವನ್ ರಾಮ್ ಅವರ ಜಯಂತಿ ಅಂಗವಾಗಿ ನಡೆದ ಸಾಮಾಜಿಕ ಕ್ರಾಂತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮುಖ್ಯ ಭಾಷಣ ಮಾಡಿದರು.ಬಾಬು ಹಸಿರು ಕ್ರಾಂತಿ ಹರಿಕಾರ: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರು, ಸುದೀರ್ಘ ಕಾಲದವರೆಗೆ ಕೇಂದ್ರದ ಸಚಿವರಾಗಿ ಸೇವೆ ಸಲ್ಲಿಸಿದವರು. ಜಾತ್ಯತೀತತೆ, ಸಾಮಾಜಿಕ ಸಾಮರಸ್ಯ, ಕೃಷಿ, ಅರ್ಥಶಾಸ್ತ್ರ, ಆಹಾರ ಉತ್ಪಾದನೆ, ರಕ್ಷಣಾ ನಿರ್ವಹಣೆ, ಕಾರ್ಮಿಕ ಕಲ್ಯಾಣ, ಮಹಿಳಾ ಸಬಲೀಕರಣಕ್ಕೆ ಅವರ ಕೊಡಗು ಶ್ಲಾಘನೀಯ ಎಂದರು.
ತಹಸೀಲ್ದಾರ್ ಕಿರಣ್ ಜಿ ಗೌರಯ್ಯ ಉದ್ಘಾಟಿಸಿ ಮಾತನಾಡಿದರು. ಕುಶಾಲನಗರ ಟ್ರಸ್ಟ್ ಕ್ಲಬ್ ಟ್ರಸ್ಟ್ ಅಧ್ಯಕ್ಷರಾದ ಎಚ್ ಎಂ ರಘು ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಸಾಹಿತಿ ಭಾರದ್ವಾಜ್ ಕೆ ಆನಂದ ತೀರ್ಥ ಸಮಾಜ ಸೇವಕ ಬಿ ಎಸ್ ಸದಾಶಿವ ಶೆಟ್ಟಿ ಕಿರುತೆರೆ ಕಲಾವಿದೆ ಹೆಚ್ ಎಂ ಮೀನಾಕ್ಷಿ, ಸಂಗೊಳ್ಳಿ ರಾಯಣ್ಣ ಕುರುಬರ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರು ಡಿ ಆರ್ ಪ್ರಭಾಕರ್, ಕೂಡು ಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಟಿ ಜಿ ಪ್ರೇಮ್ ಕುಮಾರ್ ಮಾತನಾಡಿದರು. ಕಾರ್ಯಕ್ರಮ ಆಯೋಜಕರಾದ ಹೆಚ್ ಎಂ ರಘು ಪ್ರಾಸ್ತಾವಿಕ ನುಡಿಗಳನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರಮುಖರನ್ನು ಸನ್ಮಾನಿಸಿ ಗೌರವಿಸಲಾಯಿತು. 2025 26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಅಸಹಾಯಕರ ಧ್ವನಿಯಾಗಿದ್ದ ಬಾಬಾ ಸಾಹೇಬ್ ಅಂಬೇಡ್ಕರ್: ಡಾ.ಜಮೀರ್
ಕುಶಾಲನಗರ ಟ್ರಸ್ಟ್ ಕ್ಲಬ್ ಟ್ರಸ್ಟ್ ಆಶ್ರಯದಲ್ಲಿ ಕುಶಲನಗರ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಮತ್ತು ಡಾ ಬಾಬು ಜಗಜೀವನ್ ರಾಮ್ ಅವರ ಜಯಂತಿ ಅಂಗವಾಗಿ ನಡೆದ ಸಾಮಾಜಿಕ ಕ್ರಾಂತಿ ಪ್ರಶಸ್ತಿ ಪ್ರದಾನ ಸಮಾರಂಭ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.