ಸಿಂಧನೂರು ತಾಲೂಕಾಡಳಿತ ವತಿಯಿಂದ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ

| Published : Apr 15 2024, 01:24 AM IST

ಸಿಂಧನೂರು ತಾಲೂಕಾಡಳಿತ ವತಿಯಿಂದ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ
Share this Article
  • FB
  • TW
  • Linkdin
  • Email

ಸಾರಾಂಶ

ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯಲ್ಲಿ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಅರುಣ್ ದೇಸಾಯಿ ಸಂವಿಧಾನ ಪೀಠಿಕೆ ಬೋಧಿಸಿದರು.ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯಲ್ಲಿ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಅರುಣ್ ದೇಸಾಯಿ ಸಂವಿಧಾನ ಪೀಠಿಕೆ ಬೋಧಿಸಿದರು.

ಸಿಂಧನೂರು: ಸ್ಥಳೀಯ ಮಿನಿವಿಧಾನಸೌಧ ಕಚೇರಿಯಲ್ಲಿ ತಾಲೂಕಾಡಳಿತ ವತಿಯಿಂದ ಭಾನುವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿವನ್ನು ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.

ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಯನ್ನು ಜಯಂತಿ ಅಂಗವಾಗಿ ಹೂವುಗಳಿಂದ ಸಿಂಗಾರ ಮಾಡಲಾಗಿತ್ತು. ತಾಲೂಕುಮಟ್ಟದ ಅಧಿಕಾರಿಗಳು, ರಾಜಕೀಯ ಪಕ್ಷಗಳ ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ವೃತ್ತಕ್ಕೆ ಬಂದು ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು. ತಹಸೀಲ್ದಾರ್ ಅರುಣ್ ಎಚ್.ದೇಸಾಯಿ ಅವರು ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.

ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಶಾಸಕ ವೆಂಕಟರಾವ್ ನಾಡಗೌಡ, ಆರ್ಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಪನಗೌಡ ಬಾದರ್ಲಿ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ಡಿವೈಎಸ್ಪಿ ಬಿ.ಎಸ್.ತಳವಾರ, ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸುಧೀರಕುಮಾರ ಬೆಂಕಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಿಂಗಪ್ಪ ಅಂಗಡಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಮುಖಂಡರಾದ ಆರ್.ಅಂಬ್ರೂಸ್, ರಾಮಣ್ಣ ಗೋನವಾರ, ಖಾಜಿಮಲಿಕ್ ವಕೀಲ, ವೆಂಕೋಬ ನಾಯಕ ರಾಮತ್ನಾಳ, ಅಲ್ಲಮಪ್ರಭು ಪೂಜಾರ್, ಹನುಮಂತಪ್ಪ ಗೋಮರ್ಸಿ, ಜೆ.ರಾಯಪ್ಪ ವಕೀಲ ಇದ್ದರು.