ನವದೆಹಲಿಯಲ್ಲಿ ನಡೆದ ಕೇಂದ್ರ ದಲಿತ ಸಾಹಿತ್ಯ ಆಕಾಡೆಮಿಯ ರಾಷ್ಟ್ರೀಯ ಸಮ್ಮೇಳನದಲ್ಲಿ ದಲಿತ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಎಸ್.ಪಿ. ಸುಮನಾಕ್ಷರ್ ಅವರು ಚನ್ನಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಕನ್ನಡಪ್ರಭ ವಾರ್ತೆ ಯಲಹಂಕ
ಯಲಹಂಕದ ರೈಲ್ವೆ ಗಾಲಿ ಕಾರ್ಖಾನೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಂಘದ ಮಾಜಿ ಕಾರ್ಯದರ್ಶಿ, ಹಿರಿಯ ದಲಿತ ಹೋರಾಟಗಾರ ಚನ್ನಪ್ಪ ಅವರಿಗೆ ನವದೆಹಲಿಯ ಪ್ರತಿಷ್ಠಿತ ಭಾರತೀಯ ಕೇಂದ್ರ ದಲಿತ ಸಾಹಿತ್ಯ ಅಕಾಡೆಮಿ ವತಿಯಿಂದ 2025ನೇ ಸಾಲಿನ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ನವದೆಹಲಿಯಲ್ಲಿ ಇತ್ತೀಚೆಗೆ ನಡೆದ 41ನೇ ಭಾರತೀಯ ಕೇಂದ್ರ ದಲಿತ ಸಾಹಿತ್ಯ ಆಕಾಡೆಮಿಯ ರಾಷ್ಟ್ರೀಯ ಸಮ್ಮೇಳನದಲ್ಲಿ ದಲಿತ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ.ಎಸ್.ಪಿ. ಸುಮನಾಕ್ಷರ್ ಅವರು ಚನ್ನಪ್ಪ ನವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಹರಿಯಾಣದ ಮಾಜಿ ಆರೋಗ್ಯ ಸಚಿವ ಡಾ.ಎಂ.ಎಲ್. ರಂಗ, ಕೇಂದ್ರ ಮಾಜಿ ಸಚಿವ ಡಾ.ಸತ್ಯನಾರಾಯಣ ಜತಿಯಾ, ಕಾಶಿ ವಿದ್ಯಾಪೀಠದ ಡಾ.ಪೀತಾಂಬರ್ ದಾಸ್, ಭಾರತೀಯ ಕೇಂದ್ರ ದಲಿತ ಸಾಹಿತ್ಯ ಅಕಾಡೆಮಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಬಿ. ಸಂಪತ್ ಮತ್ತಿತರರು ಇದ್ದರು.ಚನ್ನಪ್ಪ ನವರು ಕಳೆದ ಹತ್ತಾರು ವರ್ಷಗಳಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮುದಾಯದ ಜೊತೆಗೆ ಎಲ್ಲಾ ಜಾತಿ ಜನಾಂಗದವರಿಗೆ, ಅನಾಥ ಮಕ್ಕಳಿಗೆ, ವೃದ್ಧಾಶ್ರಮಗಳಿಗೆ ಮತ್ತು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಉತ್ತೇಜನ ನೀಡುತ್ತಾ ಬಂದಿದ್ದು, ಪ್ರಸ್ತುತ ರಾಷ್ಟ್ರೀಯ ಪ.ಜಾ.ಪ.ಪಂ.ಗಳ ಕಲ್ಯಾಣ ಸಂಸ್ಥೆಗಳ ಪರಿಷತ್‌ನ ರಾಜ್ಯಾಧ್ಯಕ್ಷ ರಾಗಿ ಹಲವು ಹೋರಾಟಗಳಲ್ಲಿ ಪಾಲ್ಗೊಳ್ಳುತ್ತಾ, ಸಂವಿಧಾನಾತ್ಮಕ ಹಕ್ಕುಗಳನ್ನು ಕೊಡಿಸುವುದರ ಜೊತೆಗೆ ಹಲವಾರು ಸಂಘ ಸಂಸ್ಥೆಗಳೊಂದಿಗೆ ದೇಶಾದ್ಯಂತ ದಲಿತ ಚಳವಳಿಗಳಲ್ಲಿ ಪಾಲ್ಗೊಂಡು ಜಾಗೃತಿ ಮೂಡಿಸುವ ಕಾರ್ಯಗಳನ್ನು ಮಾಡುತ್ತಿದ್ದಾರೆ.