ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿಕೃಷ್ಣಪ್ಪ ಸ್ಥಾಪಿತ)ಯಿಂದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಪ್ರೊ.ಬಿ. ಕೃಷ್ಣಪ್ಪನವರ ಜಯಂತಿ ನಿಮಿತ್ತ ಜೂ.9 ರಂದು ಆಯೋಜಿಸಿರುವ ಅಂಬೇಡ್ಕರ್ ಹಬ್ಬದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕರಿಸಲಾಗುವುದು ಎಂದು ಕ.ದ.ಸಂ.ಸ. ಹರಿಹರ ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಹೇಳಿದ್ದಾರೆ.
ಹರಿಹರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿಕೃಷ್ಣಪ್ಪ ಸ್ಥಾಪಿತ)ಯಿಂದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಪ್ರೊ.ಬಿ. ಕೃಷ್ಣಪ್ಪನವರ ಜಯಂತಿ ನಿಮಿತ್ತ ಜೂ.9 ರಂದು ಆಯೋಜಿಸಿರುವ ಅಂಬೇಡ್ಕರ್ ಹಬ್ಬದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕರಿಸಲಾಗುವುದು ಎಂದು ಕ.ದ.ಸಂ.ಸ. ಹರಿಹರ ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಇಬ್ಬರು ಮಹನೀಯರ ಜಯಂತಿ ಕಾರ್ಯಕ್ರಮದಲ್ಲಿ ತಾಲೂಕಿನ ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕರಿಸಲಾಗವುದು. ಆಸಕ್ತ ವಿದ್ಯಾರ್ಥಿಗಳು 2025-26ನೆ ಸಾಲಿನ ತಮ್ಮಅಂಕಪಟ್ಟಿ, ಆಧಾರ್ ಕಾರ್ಡ್, ಒಂದು ಪಾಸ್ ಪೋರ್ಟ್ ಅಳತೆ ಫೋಟೋ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ: 99001- 94567 ಇಲ್ಲಿಗೆ ಸಂಪರ್ಕಿಸಲು ಕೋರಿದರು.ಬೈಪಾಸ್ ರಸ್ತೆಯ ಮೈತ್ರಿವನದ ಸಭಾಂಗಣದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ನಾಡಿನ ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಉದ್ಘಾಟಿಸುವರು. ಕೋಡಿಹಳ್ಳಿ ಆದಿಜಾಂಬವ ಪೀಠದ ಷಡಕ್ಷರಮುನಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕದಸಂಸ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಪಿ.ಜೆ. ಮಹಾಂತೇಶ್ ಅಧ್ಯಕ್ಷತೆ ವಹಿಸುವರು.
ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹಾಗೂ ಕ.ದ.ಸಂ.ಸ. ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ ನೋಟ್ ಬುಕ್ ವಿತರಿಸುವರು. ಶಾಸಕ ಬಿ.ಪಿ. ಹರೀಶ್ ಹಾಗೂ ಮಾಜಿ ಶಾಸಕ ಎಸ್. ರಾಮಪ್ಪ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್, ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ.ಎ.ಬಿ. ರಾಮಚಂದ್ರಪ್ಪ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕರಿಸುವರು. ಇನ್ ಸೈಟ್ಸ್ ಐಎಎಸ್ ಸಂಸ್ಥೆ ಸ್ಥಾಪಕ ಜಿ.ಬಿ. ವಿನಯ್ ಕುಮಾರ್ ಅವರು ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪ್ರೊ.ಬಿ.ಕೃಷ್ಣಪ್ಪ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು ಎಂದರು.ಸಭೆಯಲ್ಲಿ ಸಮಿತಿ ಪದಾಧಿಕಾರಿಗಳಾದ ಸುರೇಶ್ ಡಿ. ಕೆಂಚನಹಳ್ಳಿ, ತಿಮ್ಮಣ್ಣ ಕಡ್ಲೆಗೊಂದಿ, ಚೌಡಪ್ಪ ಸಿ. ಭಾನುವಳ್ಳಿ, ಗುಡದಪ್ಪ ಮಲ್ಲನಾಯಕನಹಳ್ಳಿ, ಬೆಣ್ಣೆ ರಾಜಪ್ಪ, ಶಂಕರ್, ಚಂದ್ರಶೇಖರ್, ರವಿ, ಚಂದ್ರಪ್ಪ, ಮುರುಳಿ, ಹಳದೇಶ ಹಾಗೂ ಇತರರು ಉಪಸ್ಥಿತರಿದ್ದರು.
- - --26HRR.01:
ಹರಿಹರದ ಪ್ರವಾಸಿ ಮಂದಿರದಲ್ಲಿ ಕ.ದ.ಸಂ.ಸ.ನಿಂದ ಅಂಬೇಡ್ಕರ್ ಹಬ್ಬ ಪೋಸ್ಟರ್ ಬಿಡುಗಡೆ ಮಾಡಲಾಯಿತು.