ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ

| Published : Dec 16 2023, 02:00 AM IST

ಸಾರಾಂಶ

ಕುಷ್ಟಗಿ ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2023-24ನೇ ಸಾಲಿನ ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಕುಷ್ಟಗಿ

ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2023-24ನೇ ಸಾಲಿನ ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಸಲಾಯಿತು.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಸಾಪ ತಾಲೂಕು ಅಧ್ಯಕ್ಷ ವೀರೇಶ ಬಂಗಾರಶೆಟ್ಟರ ಕಾರ್ಯಕ್ರಮ ಉದ್ಘಾಟಿಸಿದರು.ಕಾಲೇಜಿನ ಪ್ರಭಾರ ಪ್ರಾಚಾರ್ಯ ಎಸ್.ಸಿ. ಕೋಚಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಉಪನ್ಯಾಸವನ್ನು ಕಾಲೇಜಿನ ಅತಿಥಿ ಉಪನ್ಯಾಸಕರಾದ ಕೆ.ಎಸ್. ನಂಜುಂಡ ನಡೆಸಿಕೊಟ್ಟರು. ಕಾರ್ಯಕ್ರಮದ ಮುಖ್ಯಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಕಾಲೇಜಿನ ಉಪನ್ಯಾಸಕರಾದ ಶರಣಪ್ಪ ಬಿ.ತೊನಸಿಹಾಳ, ವಿ.ಎಸ್. ಚಿಮ್ಮಲಗಿ, ಮುರಳೀಧರ, ಬಸವರಾಜ ಕೆ.ಪಿ., ಮಂಜುನಾಥ ತಟ್ಟಿ, ವೆಂಕಟೇಶ ಹೊಸಮನಿ ಉಪಸ್ಥಿತರಿದ್ದರು.ಇದೇ ಸಂದರ್ಭ ಅಂಬೇಡ್ಕರ್ ಕುರಿತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಐವರು ವಿಧ್ಯಾರ್ಥಿಗಳಿಗೆ ಪುಸ್ತಕ ಬಹುಮಾನ ವಿತರಿಸಲಾಯಿತು.