ಸಾರಾಂಶ
ರಾಮನಗರ: ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ, ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ನಮ್ಮೆಲ್ಲರ ಹೆಮ್ಮೆ. ಬಾಬಾ ಸಾಹೇಬರ ಚಿಂತನೆಗಳು ಇಂದಿಗೂ ಯುವಜನತೆಗೆ ಸ್ಫೂರ್ತಿಯಾಗಿದೆ ಎಂದು ಉಪನ್ಯಾಸಕ ಬಿ.ಶಿವಣ್ಣ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ, ಮಹಾಮಾನವತಾವಾದಿ, ವಿಶ್ವಜ್ಞಾನಿ ಡಾ. ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಭೌದ್ದಧರ್ಮದಗುರು ಬೌದಿಪಾಲ ಬಂತೇಜು ಬೌದ್ದ ದರ್ಮದ ಉಪನ್ಯಾಸ ಮತ್ತು ಆಶೀರ್ವಚನ ನೀಡಿದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಹಾಗೂ ಸಮುದಾಯದ ಮುಖಂಡರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಎಸ್ಪಿ ಕಾರ್ತೀಕ್ ರೆಡ್ಡಿ ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದವರಿಗೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಸಾಗಿತು.ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸರೋಜ ದೇವಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ಉಪ ನಿರ್ದೇಶಕ ಶಿವಕುಮಾರ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ದಲಿತ ಸಮುದಾಯದ ಮುಖಂಡರಾದ ಶಿವಕುಮಾರ್ ಸ್ವಾಮಿ, ಚಲುವರಾಜು, ಶಿವಲಿಂಗಯ್ಯ, ಶಿವಶಂಕರ್, ಡಾ.ಗೋವಿಂದಯ್ಯ, ಮಾಗಡಿ ಜಯರಾಮಯ್ಯ, ಗೋಪಿ, ಕಿರಣ್, ಗೋವಿಂದರಾಜು, ಕೊತ್ತಿಪುರ ಗೋವಿಂದರಾಜು, ರೈಡ್ ನಾಗರಾಜು, ಶಿವಪ್ರಕಾಶ್, ಅಂಜನಾಪುರ ವಾಸು, ಗುರುಮೂರ್ತಿ, ಹನುಮಯ್ಯ, ಕೋಟೆ ಕುಮಾರ್, ಜಗದೀಶ್, ಹರೀಶ್ ಬಾಲು, ಕೃಷ್ಣಪ್ಪ, ಪುನೀತ್, ರಮೇಶ್ ಉಪಸ್ಥಿತರಿದ್ದರು.
14ಕೆಆರ್ ಎಂಎನ್ 3.ಜೆಪಿಜಿರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ 133ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅತಿಥಿಗಳು ಉದ್ಘಾಟಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))