ಸಾರಾಂಶ
ಜಿಲ್ಲಾ ಕಸಾಪ ವತಿಯಿಂದ ಕಲಬುರಗಿ ಕನ್ನಡ ಭವನದಲ್ಲಿ ಹಮ್ಮಿಕೊಂಡ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಶಿವರಾಜ ಅಂಡಗಿ, ಡಾ. ರೆಹಮಾನ್ ಪಟೇಲ್ ಇದ್ದರು.
ಕನ್ನಡಪ್ರಭ ವಾರ್ತೆ ಕಲಬುರಗಿ:
ಬಹು ಸಂಸ್ಕೃತಿ ಮತ್ತು ಸರ್ವ ಜನರ ಹಿತ ಕಾಪಾಡುವ ನಿಟ್ಟಿನಲ್ಲಿ ನಮ್ಮ ದೇಶಕ್ಕೆ ಅಮೂಲ್ಯವಾದ ಸಂವಿಧಾನ ರಚಿಸಿದ ಡಾ.ಬಾಬಾಸಾಹೇಬ ಅಂಬೇಡ್ಕರ್ ರವರ ತ್ಯಾಗ ಸದಾ ಸ್ಮರಣೀಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ನಗರದ ಕನ್ನಡ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯಲ್ಲಿ ಡಾ.ಅಂಬೇಡ್ಕರ್ ರವರ ಸಂವಿಧಾನದ ಆಶಯಗಳಡಿ ನುಡಿ ಸೇವೆ ಮಾಡುತ್ತಾ ಬರುತ್ತಿದೆ. ಸಾಮಾಜಿಕ ನ್ಯಾಯ ಹಾಗೂ ಜಾತ್ಯತೀತ ಪರಿಕಲ್ಪನೆಯಲ್ಲಿ ಕನ್ನಡ ಕಟ್ಟುವ ಕೆಲಸ ನಿರಂತರವಾಗಿ ನಡೆದಿವೆ. ಬುದ್ಧ, ಬಸವ, ಡಾ.ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಪರಿಷತ್ತು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಎಸ್ ಅಂಡಗಿ, ಪ್ರಮುಖರಾದ ಡಾ. ರೆಹಮಾನ್ ಪಟೇಲ್, ರವೀಂದ್ರಕುಮಾರ ಭಂಟನಳ್ಳಿ, ರಾಜೇಂದ್ರ ಮಾಡಬೂಳ, ರೇವಣಸಿದ್ದಪ್ಪ ಜೀವಣಗಿ, ಪದ್ಮಾವತಿ ನಾಯಕ್ , ಎಂ ಎನ್ ಸುಗಂಧಿ, ಆರ್.ವಿ. ಕುಲಕರ್ಣೀ, ಜೆ.ಎನ ಜಾನಕರ್, ಜಯಮಿತ್ರ, ಶಾಂತಕುಮಾರ ಸ್ವಾಮಿ, ಮಲ್ಲಿಕಾರ್ಜುನ ಸ್ವಾಮಿ ಇದ್ದರು.