ಕನ್ನಡಪ್ರಭ ವಾರ್ತೆ ಹುಕ್ಕೇರಿ ಜಗತ್ತಿಗೆ ಶಿಕ್ಷಣದಿಂದ ಏನನ್ನಾದರೂ ಸಾಧನೆ ಮಾಡಬಹುದು ಎಂದು ತೋರಿಸಿಕೊಟ್ಟವರು ಡಾ.ಬಿ.ಆರ್.ಅಂಬೇಡ್ಕರ. ಅವರು ಹಿಮಾಲಯ ಪರ್ವತವಿದ್ದಂತೆ. ಎಂದೆಂದಿಗೂ ಕರಗದ ಜ್ಞಾನ ಶಿಖರ ಎಂದು ಧಾರವಾಡದ ಅಂಬೇಡ್ಕರ ಸಮುದಾಯ ಪ್ರಗತಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರೊ.ಲಕ್ಷ್ಮಣ ಬಕ್ಕಾಯಿ ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ಹುಕ್ಕೇರಿ
ಜಗತ್ತಿಗೆ ಶಿಕ್ಷಣದಿಂದ ಏನನ್ನಾದರೂ ಸಾಧನೆ ಮಾಡಬಹುದು ಎಂದು ತೋರಿಸಿಕೊಟ್ಟವರು ಡಾ.ಬಿ.ಆರ್.ಅಂಬೇಡ್ಕರ. ಅವರು ಹಿಮಾಲಯ ಪರ್ವತವಿದ್ದಂತೆ. ಎಂದೆಂದಿಗೂ ಕರಗದ ಜ್ಞಾನ ಶಿಖರ ಎಂದು ಧಾರವಾಡದ ಅಂಬೇಡ್ಕರ ಸಮುದಾಯ ಪ್ರಗತಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರೊ.ಲಕ್ಷ್ಮಣ ಬಕ್ಕಾಯಿ ಅಭಿಪ್ರಾಯಪಟ್ಟರು.ಪಟ್ಟಣದಲ್ಲಿ ಮಂಗಳವಾರ ತಾಲೂಕಾಡಳಿತ, ತಾಲೂಕು ಪಂಚಾಯತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 135ನೇ ಜನ್ಮ ದಿನಾಚರಣೆಯಲ್ಲಿ ಉಪನ್ಯಾಸ ನೀಡಿದರು. ಪ್ರಭುದ್ಧ ಭಾರತ ನಿರ್ಮಾಣಕ್ಕೆ ಅಂಬೇಡ್ಕರ ಅವರು ತಮ್ಮನ್ನು ತಾವು ತೊಡಗಿಸಿಕೊಂಡವರು. ಅವರ ಚಿಂತನೆಗಳು ಇಂದಿಗೂ ಪ್ರಸ್ತುತ. ಸಮಾನತೆ, ಮೀಸಲಾತಿ ಮತ್ತು ಜನರ ಹಕ್ಕುಗಳ ಬಗ್ಗೆ ಪ್ರತಿಪಾದಿಸಿದ ಅಂಬೇಡ್ಕರ ಜಯಂತಿ ಆಚರಣೆಗಷ್ಟೇ ಸೀಮಿತವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ನಿಡಸೋಸಿ ಸಿದ್ಧಸಂಸ್ಥಾನ ಮಠದ ನಿಜಲಿಂಗೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ತಹಸೀಲ್ದಾರ್ ಬಲರಾಮ ಕಟ್ಟಿಮನಿ, ತಾಪಂ ಇಒ ಟಿ.ಆರ್.ಮಲ್ಲಾಡದ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಶಾನೂಲ್ ತಹಶೀಲ್ದಾರ, ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅವಿನಾಶ ಹೊಳೆಪ್ಪಗೋಳ, ಮುಖಂಡರಾದ ಉದಯ ಹುಕ್ಕೇರಿ, ಮಲ್ಲಿಕಾರ್ಜುನ ರಾಶಿಂಗೆ, ಬಸವರಾಜ ತಳವಾರ, ಕರೆಪ್ಪ ಗುಡೆನ್ನವರ, ಮಹಾಂತೇಶ ತಳವಾರ, ಸದಾಶಿವ ಕಾಂಬಳೆ, ರಮೇಶ ಹುಂಜಿ, ಕೆಂಪಣ್ಣಾ ಶಿರಹಟ್ಟಿ, ಸುನೀಲ ಬೈರಣ್ಣವರ, ಪ್ರಕಾಶ ಮೈಲಾಖೆ, ಸತೀಶ ದಿನ್ನಿಮನಿ, ಕಿರಣ ಬಾಗೇವಾಡಿ, ಸಮಾಜ ಕಲ್ಯಾಣ ಇಲಾಖೆಯ ಎಲ್.ಬಿ.ಮಾಲದಾರ, ಶ್ರೀಧರ ನಡುಮನಿ, ರಾಜಶ್ರೀ ಪಾಟೀಲ, ಹೇಮಲತಾ ಬಸಲಿಂಗಗೋಳ ಮತ್ತಿತರರು ಉಪಸ್ಥಿತರಿದ್ದರು.ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗುರುಶಾಂತ ಪಾವಟೆ ಸ್ವಾಗತಿಸಿದರು. ದೈಹಿಕ ಶಿಕ್ಷಣಾಧಿಕಾರಿ ಎ.ಕೆ.ಕೋಟೀವಾಲೆ ಸಂವಿಧಾನ ಪೀಠಿಕೆ ಬೋಧಿಸಿದರು. ಶಿಕ್ಷಕ ಎಸ್.ಆರ್.ಗಸ್ತಿ ನಿರೂಪಿಸಿದರು. ಎಸ್.ಎಂ.ಶೆಟ್ಟೆನ್ನವರ ವಂದಿಸಿದರು. ವಿವಿಧ ಸಾಧಕರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ವೇಳೆ ಅಡವಿಸಿದ್ದೇಶ್ವರ ಮಠದಿಂದ ಅಂಬೇಡ್ಕರ ಭಾವಚಿತ್ರವನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.