ದಲಿತರಿಗೆ ವಿಮೋಚನಾ ಹಾದಿ ತೋರಿದ ಅಂಬೇಡ್ಕರ್

| Published : Dec 07 2024, 12:31 AM IST

ಸಾರಾಂಶ

ಹೊಸಕೋಟೆ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿ ಸಮಾಜದಲ್ಲಿ ಮನುಸ್ಮೃತಿಯ ಸಂಕೋಲೆಗಳಲ್ಲಿ ಸಿಲುಕಿದ್ದ ದಲಿತರಿಗೆ ವಿಮೋಚನೆಯ ಹಾದಿ ತೋರಿದವರು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಹೊಸಕೋಟೆ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿ ಸಮಾಜದಲ್ಲಿ ಮನುಸ್ಮೃತಿಯ ಸಂಕೋಲೆಗಳಲ್ಲಿ ಸಿಲುಕಿದ್ದ ದಲಿತರಿಗೆ ವಿಮೋಚನೆಯ ಹಾದಿ ತೋರಿದವರು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ಏರ್ಪಡಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್‌ ಅವರ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ಅಂಬೇಡ್ಕರ್ ಅವರು ರಚಿಸಿರು ಸಂವಿಧಾನ ದೇಶಕ್ಕೆ ಬಹುದೊಡ್ಡ ಕೊಡುಗೆ. ಅವರ ಕೊಡುಗೆಯಿಂದ ಪ್ರತಿಯೊಬ್ಬರು ಸಮಾಜದಲ್ಲಿ ಬದುಕುವ ಹಕ್ಕನ್ನು ಪಡೆದಿದ್ದಾರೆ. ಅವರ ಕೊಡುಗೆಯನ್ನು ಇಡೀ ಮನುಕುಲ ಮರೆಯುವಂತಿಲ್ಲ. ಇಂದಿನ ಯುವ ಪೀಳಿಗೆಗೆ ಅಂಬೇಡ್ಕರ್ ಆಶಯ ತಿಳಿಸುವ ದೃಷ್ಟಿಯಿಂದ ದಲಿತಪರ ಸಂಘಟನೆಗಳು ಸಂಪನ್ಮೂಲ ವ್ಯಕ್ತಿಗಳ ಮೂಲಕ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಬಿಎಂಆರ್‌ಡಿಎ ಸದಸ್ಯ ಡಾ. ಎಚ್.ಎಂ.ಸುಬ್ಬರಾಜು ಮಾತನಾಡಿ, ಅಂಬೇಡ್ಕರ್ ಅವರ ಜಯಂತಿ, ಪರಿನಿರ್ವಾಣ ದಿನ, ಸಂವಿಧಾನ ಸಮರ್ಪಣ ದಿನವನ್ನು ಕೇವಲ ಅಂಬೇಡ್ಕರ್ ಅವರಿಗೆ ಜೈಕಾರ ಹಾಕುವ ಮೂಲಕ ಆಚರಣೆ ಮಾಡುವ ಬದಲಾಗಿ ಅಂಬೇಡ್ಕರ್ ಅವರ ಆಶಯಗಳಿಗೆ ಬದ್ಧರಾಗಿ ಪ್ರತಿಯೊಬ್ಬರು ಜೀವಿಸಬೇಕು. ಆಗ ಮಾತ್ರ ಸಮಾಜದಲ್ಲಿ ಸರ್ವ ಸಮಾನತೆ ಕಾಣಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸೋಮಶೇಖರ್, ತಾ.ಸಮಾಜ ಕಲ್ಯಾಣಾಧಿಕಾರಿ ಸಿದ್ದರಾಜು, ತಾಪಂ ಇಒ ಡಾ. ನಾರಾಯಣಸ್ವಾಮಿ, ನಗರಸಭೆ ಪೌರಾಯುಕ್ತ ನೀಲಲೋಚನ ಪ್ರಭು, ತಾಪಂ ಮಾಜಿ ಸದಸ್ಯ ಡಿ.ಟಿ.ವೆಂಕಟೇಶ್‌, ದಲಿತ ಮುಖಂಡರು ಹಾಜರಿದ್ದರು.

ಫೋಟೋ: 6 ಹೆಚ್‌ಎಸ್‌ಕೆ 1

ಹೊಸಕೋಟೆ ತಾಲೂಕು ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಶಾಸಕ ಶರತ್ ಬಚ್ಚೇಗೌಡ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ದಲಿತಪರ ಸಂಘಟನೆಗಳ ಮುಖಂಡರು ಹಾಜರಿದ್ದರು.