ದೊಡ್ಡಮಗ್ಗೆ ಹೋಬಳಿ ಬೆಳವಾಡಿ ಗ್ರಾಮದಲ್ಲಿ ನಡೆದ ಡಾ. ಬಿಆರ್ ಅಂಬೇಡ್ಕರ್ ಜಯಂತಿ ಹಾಗೂ ಅಂಬೇಡ್ಕರ್ ರವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದರು.ಶಿಕ್ಷಣ, ಸಂಘಟನೆ, ಹೋರಾಟ ಈ ಮೂರು ಮಂತ್ರಗಳ ಮೂಲಕ ಒಬ್ಬ ಸಾಮಾನ್ಯ ವ್ಯಕ್ತಿ ದೇಶಕ್ಕೆ ಅಗತ್ಯವಿರುವ ದೊಡ್ಡ ಲಿಖಿತ ಸಂವಿಧಾನವನ್ನು ನೀಡಿ ನೆಮ್ಮದಿಯಿಂದ ಸರ್ವರೂ ಸಮಾನತೆಯಿಂದ ಬದುಕುವ ಹಕ್ಕನ್ನು ನೀಡಿದ ಮಹಾನ್ ಚೇತನ ಡಾ. ಬಿ ಆರ್ ಅಂಬೇಡ್ಕರ್ ಎಂದರು.

ಅರಕಲಗೂಡು: ಭಾರತ ಸಂವಿಧಾನ ಇಡೀ ವಿಶ್ವದಲ್ಲಿ ಶ್ರೇಷ್ಠ ಸಂವಿಧಾನ. ಅಂತಹ ಸಂವಿಧಾನ ನೀಡಿದಂತಹ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ತತ್ವಗಳನ್ನು ಅನುಸರಿಸಿ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆದು ತಮ್ಮ ಮುಂದಿನ ಜೀವನ ರೂಪಿಸಿಕೊಳ್ಳುವಂತೆ ಶಾಸಕ ಎ.ಮಂಜು ಮನವಿ ಮಾಡಿದರು.

ದೊಡ್ಡಮಗ್ಗೆ ಹೋಬಳಿ ಬೆಳವಾಡಿ ಗ್ರಾಮದಲ್ಲಿ ನಡೆದ ಡಾ. ಬಿಆರ್ ಅಂಬೇಡ್ಕರ್ ಜಯಂತಿ ಹಾಗೂ ಅಂಬೇಡ್ಕರ್ ರವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದರು.ಶಿಕ್ಷಣ, ಸಂಘಟನೆ, ಹೋರಾಟ ಈ ಮೂರು ಮಂತ್ರಗಳ ಮೂಲಕ ಒಬ್ಬ ಸಾಮಾನ್ಯ ವ್ಯಕ್ತಿ ದೇಶಕ್ಕೆ ಅಗತ್ಯವಿರುವ ದೊಡ್ಡ ಲಿಖಿತ ಸಂವಿಧಾನವನ್ನು ನೀಡಿ ನೆಮ್ಮದಿಯಿಂದ ಸರ್ವರೂ ಸಮಾನತೆಯಿಂದ ಬದುಕುವ ಹಕ್ಕನ್ನು ನೀಡಿದ ಮಹಾನ್ ಚೇತನ ಡಾ. ಬಿ ಆರ್ ಅಂಬೇಡ್ಕರ್ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಚನ್ನಕೇಶವ, ಮುಖ್ಯ ಭಾಷಣಕಾರ ರತ್ನಾಕರ್‌, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಜಯಣ್ಣ, ಜಿಲ್ಲಾ ಸಂಚಾಲಕ ಕೃಷ್ಣ ದುಮ್ಮಿ, ಜಿ.ಪಂ. ಮಾಜಿ ಸದಸ್ಯ ಬಿ.ಎಂ. ರವಿ, ವಿಷ್ಣು ಪ್ರಕಾಶ್, ಬೆಳವಾಡಿ ಗ್ರಾಮದ ಹಿರಿಯ ಮುಖಂಡರು, ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು ಮಹಿಳಾ ಪದಾಧಿಕಾರಿಗಳು, ದಲಿತ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.