ಅಂಬೇಡ್ಕರ್‌ ಶ್ರೇಷ್ಠ ಅರ್ಥಶಾಸ್ತ್ರಜ್ಞ, ನ್ಯಾಯಶಾಸ್ತಜ್ಞ

| Published : Dec 07 2024, 12:30 AM IST

ಅಂಬೇಡ್ಕರ್‌ ಶ್ರೇಷ್ಠ ಅರ್ಥಶಾಸ್ತ್ರಜ್ಞ, ನ್ಯಾಯಶಾಸ್ತಜ್ಞ
Share this Article
  • FB
  • TW
  • Linkdin
  • Email

ಸಾರಾಂಶ

ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುಷ್ಪಾರ್ಚನೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿಯಾಗಿದ್ದರು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಡಾ.ಅಂಬೇಡ್ಕರ್ ಅವರ 68ನೇ ಪರಿನಿಬ್ಬಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುಷ್ಷಾರ್ಚನೆ ಮಾಡಿ ಮಾತನಾಡಿದರು. ಅಂಬೇಡ್ಕ‌ರ್ ಅವರು ಭಾರತದ ಸಂವಿಧಾನಶಿಲ್ಪಿ ಮಾತ್ರವಲ್ಲದೇ, ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ, ಅಸ್ಪೃಶ್ಯತೆ, ಅಸಮಾನತೆಯ ವಿರುದ್ಧ ದಿಟ್ಟತನದಿಂದ ಹೋರಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾನ್ ಮಾನವತಾವಾದಿ. ಅಂಬೇಡ್ಕರ್ ಅವರ ಹೋರಾಟದ ಫಲವಾಗಿ ಇಂದು ದೇಶಾದ್ಯಂತ ಕೋಟ್ಯಂತರ ಮಂದಿ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ ಎಂದರು.ಅಸಮಾನತೆಯೇ ಮೇಳೈಸುತ್ತಿದ್ದ ಕಾಲದಲ್ಲಿ ತಾನು ಅನುಭವಿಸಿದ ನೋವು, ಯಾತನೆಗಳು ಮುಂದಿನ ಜನಾಂಗಕ್ಕೆ ಸಿಗಬಾರದುಎನ್ನುವ ದೃಷ್ಟಿಯಿಂದ ನಿರಂತರವಾಗಿ ಅಧ್ಯಯನ ಮಾಡಿ, ಅಸ್ಪೃಶ್ಯತೆ,ಅಸಮಾನತೆ, ತಾರತಮ್ಯದ ವಿರುದ್ಧ ಹೋರಾಡಿ, ಪ್ರತಿಯೊಬ್ಬರ ಹಕ್ಕುಗಳಿಗಾಗಿ ನ್ಯಾಯ ಮಂಡನೆ ಮಾಡಿದವರು. ಈ ನೆಲದ ಪ್ರತಿಯೊಂದು ವಿಚಾರಗಳ ಬಗ್ಗೆಯೂ ಸ್ಪಷ್ಟವಾದ ಅರಿವಿದ್ದ ಪರಿಣಾಮ ದೇಶಕ್ಕೆ ಬಲಿಷ್ಠ ಮತ್ತು ಶ್ರೇಷ್ಠ ಸಂವಿಧಾನವನ್ನು ಜೀವನಪರ್ಯಂತ ಅಭ್ಯುದಯಕ್ಕಾಗಿ ನೀಡಿದ್ದಾರೆ ಎಂದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಮಾತನಾಡಿ, ದೇಶಕ್ಕೆ ಸಂವಿಧಾನ ಕೊಟ್ಟಂತಹ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ದ್ರೋಹ ಮಾಡಿದೆ. ಅವರ ಅಂತ್ಯಸಂಸ್ಕಾರಕ್ಕೆ ಜಾಗ ನೀಡಲಿಲ್ಲ, ಚುನಾವಣೆಯಲ್ಲಿ ನಿಂತು ಸೋಲಿಸಿತು. ಇಂದು ಕಾಂಗ್ರೆಸ್ ಪಕ್ಷವನ್ನು ಸಹಿಸಲಾರದ ದಿನ ಇದಾಗಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ ,ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮೂಡಹಳ್ಳಿ ಮೂರ್ತಿ, ಮಾಂಬಳ್ಳಿ ರಾಮಣ್ಣ, ಟಗರಪುರ ರೇವಣ್ಣ, ನಗರ ಮಂಡಲ ಅಧ್ಯಕ್ಷ ಪರಶಿವ, ನಲ್ಲೂರು ಪರಮೇಶ್ವರ, ಡೈವರ್ ಮಹದೇವಯ್ಯ, ವೇಣುಗೋಪಾಲ, ರಾಜಣ್ಣ, ರಾಮಸಮುದ್ರ ಶಿವು, ರಂಗಸ್ವಾಮಿ, ಶ್ರೀನಿವಾಸ, ಮುತ್ತಿಗೆ ಮೂರ್ತಿ, ಹಾಜರಿದ್ದರು.