ಸಾರಾಂಶ
ಹಾವೇರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರ ೧೩೩ನೇ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡುವ ಮೂಲಕ ಆಚರಿಸಲಾಯಿತು. ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಚಂದ್ರಪ್ಪ ಹರಿಜನ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರವರು ಸಾಮಾಜಿಕ ಹರಿಕಾರರು. ಅವರು ಕೊಟ್ಟಂತಹ ಸಂವಿಧಾನಿಕ ಹಕ್ಕಗಳಿಂದ ಪ್ರಜಾಪ್ರಭುತ್ವದ ನೆಲಗಟ್ಟು ಗಟ್ಟಿಯಾಗಿದೆ. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ ಮಾತನಾಡಿ, ಅಂಬೇಡ್ಕರವರಿಗೆ ಅಭಿಮಾನವಿಟ್ಟು ಸಂವಿಧಾನವನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತಿರುವ ರಾಜಕೀಯ ಪಕ್ಷ ಎಂದರೆ ಅದು ಬಿಜೆಪಿ ಮತ್ತು ಅಂಬೇಡ್ಕರವರು ನಿಧನರಾದಾಗ ಅಂದಿನ ಕೇಂದ್ರ ಕಾಂಗ್ರೆಸ್ ಸರ್ಕಾರ ಒಂದು ಇಂಚುಜಾಗ ಕೂಡಾ ದೆಹಲಿಯಲ್ಲಿ ಕೊಡಲು ಮನಸ್ಸು ಮಾಡಲಿಲ್ಲ. ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯವನ್ನು ೬೦ ವರ್ಷವಾದರು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ನಮ್ಮನ್ನು ಮುನ್ನೆಲೆಗೆ ತರಲಿಲ್ಲ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಸುರೇಶ ಹೊಸಮನಿ, ವಿಭಾಗ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಮುಳ್ಳೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಸಂತೋಷ ಆಲದಕಟ್ಟಿ, ನಂಜುಂಡೇಶ ಕಳ್ಳೇರ, ನಿರಂಜನ ಹೇರೂರ, ಗಿರೀಶ ತುಪ್ಪದ, ಪ್ರಭು ಹಿಟ್ನಳ್ಳಿ, ನಾಗೇಂದ್ರ ಕಡಕೋಳ, ಶೋಭಾ ನಿಸ್ಸಿಮಗೌಡರ, ಕರಬಸಪ್ಪ ಹಳದೂರ, ಈರಣ್ಣ ಹೊನಳ್ಳಿ ಇತರರು ಇದ್ದರು.