ದಕ್ಷಿಣ ಭಾರತದ ಪ್ರಸಿದ್ಧ ಗಾಯಕ, ರಾಷ್ಟ್ರಪ್ರಶಸ್ತಿ ವಿಜೇತ ಪದ್ಮಶ್ರೀ ಪಿ.ಉನ್ನಿಕೃಷ್ಣನ್ ಹಾಗೂ ಅವರ ಪುತ್ರಿ ಉತ್ತರಾ ಉನ್ನಿಕೃಷ್ಣನ್ ಮತ್ತು ತಂಡದವರಿಂದ ಶನಿವಾರ ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಸಲಾಯಿತು.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ವರ್ಷಪೂರ್ತಿ ಆಚರಿಸಲಾಗುತ್ತಿರುವ ರಜತಮಹೋತ್ಸವ ಸಂಭ್ರಮದ ಅಂಗವಾಗಿ ದಕ್ಷಿಣ ಭಾರತದ ಪ್ರಸಿದ್ಧ ಗಾಯಕ, ರಾಷ್ಟ್ರಪ್ರಶಸ್ತಿ ವಿಜೇತ ಪದ್ಮಶ್ರೀ ಪಿ.ಉನ್ನಿಕೃಷ್ಣನ್ ಹಾಗೂ ಅವರ ಪುತ್ರಿ ಉತ್ತರಾ ಉನ್ನಿಕೃಷ್ಣನ್ ಮತ್ತು ತಂಡದವರಿಂದ ಶನಿವಾರ ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಸಲಾಯಿತು.ವಿದ್ವಾನ್ ನಿಶಾನ್ ಚಂದ್ರನ್ ವಾಯಲಿನ್‌ನಲ್ಲಿ, ವಿದ್ವಾನ್ ತುಮಕೂರು ಬಿ.ರವಿಶಂಕರ್ ಮೃದಂಗದಲ್ಲಿ, ವಿದ್ವಾನ್ ತುಮಕೂರು ಬಿ. ಶಶಿಶಂಕರ್ ಘಟಂನಲ್ಲಿ ಹಾಗೂ ವಿದ್ವಾನ್ ವಿಕ್ರಮ್ ಭಾರದ್ವಾಜ್ ಅವರು ಮೋರ್ಚಿಂಗ್ ಹಾಗೂ ರಿದಂಪಾಡ್‌ನಲ್ಲಿ ಸಹಕರಿಸಿದರು.ಕೋಟೆಕಾರಿನ ಶಂಕರಮಠ ನಡೆಸುವ ಸಂಗೀತ ಶಾಲೆಯ ಗುರು ವಿದುಷಿ ನಾರಾಯಣಿ ಬೊಳ್ಳಾವ ಕಾರ್ಯಕ್ರಮ ಉದ್ಘಾಟಿಸಿದರು. ಕೋಟೆಕಾರು ಶಂಕರ ಮಠದ ಧರ್ಮಾಧಿಕಾರಿ ಸತ್ಯಶಂಕರ ಬೊಳ್ಳಾವ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಆಡಳಿತ ಮಂಡಳಿ ಸದಸ್ಯರಾದ ಬಿ.ಪುರಂದರ ಭಟ್, ಸುರೇಶ್ ಶೆಟ್ಟಿ ಕೆ., ಡಾ.ಎಚ್.ಮಾಧವ ಭಟ್, ಬಾಲಕೃಷ್ಣ ಬೋರ್ಕರ್, ಪ್ರಸನ್ನ ಭಟ್, ವಿದ್ವಾನ್ ಕಾಂಚನ ಈಶ್ವರ ಭಟ್, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ವಿ.ಬಿ.ಅರ್ತಿಕಜೆ ಮತ್ತಿತರರಿದ್ದರು. ವಿದುಷಿ ನಾರಾಯಣಿ ಬೊಳ್ಳಾವ ಹಾಗೂ ಕಾಂಚನ ಈಶ್ವರ ಭಟ್ ಅವರನ್ನು ಸನ್ಮಾನಿಸಲಾಯಿತು.ಪಿಬರೇ ರಾಮರಸಂ, ಬೋಲಾವ ವಿಠಲ ಪಹಾವ ವಿಠಲ, ಯಾದವ ನೀ ಬಾ ಯದುಕುಲ ನಂದನ ಮಾಧವ ಮಧುಸೂದನ, ಅಚ್ಯುತಂ ಕೇಶವಂ ಕೃಷ್ಣ ದಾಮೋದರಂ ರಾಮ ನಾರಾಯಣಂ ಜಾನಕೀ ವಲ್ಲಭಂ, ಭಾಗ್ಯದಾ ಲಕ್ಷ್ಮೀ ಬಾರಮ್ಮಾ, ಬ್ರಹ್ಮ ಒಕ್ಕಟೇ ಪರಬ್ರಹ್ಮ ಒಕ್ಕಟೇ ಮೊದಲಾದ ಹಾಡುಗಳು ಜನಮನ ಸೂರೆಗೊಂಡಿತು.