ಅಮಿತ್‌ ಶಾ ಹೇಳಿಕೆಯಲ್ಲಿ ಅಂಬೇಡ್ಕರ್‌ ವಿರೋಧಿ ಭಾವ

| Published : Dec 23 2024, 01:05 AM IST

ಅಮಿತ್‌ ಶಾ ಹೇಳಿಕೆಯಲ್ಲಿ ಅಂಬೇಡ್ಕರ್‌ ವಿರೋಧಿ ಭಾವ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಅಂಬೇಡ್ಕರ್ ಹಾಕಿಕೊಟ್ಟ ಸಂವಿಧಾನದಡಿಯಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಅವರು ಗೃಹ ಸಚಿವರಾಗಿ ಅಧಿಕಾರ ನಡೆಸುತ್ತಿದ್ದಾರೆ. ಈಗ ಅವರ ವಿರುದ್ಧವೇ ಮಾತನಾಡಿರುವುದು ಸರಿಯಲ್ಲ. ಕೂಡಲೇ ಅಮಿತ್ ಶಾ ಕ್ಷಮೆ ಕೇಳಬೇಕು. ಇಲ್ಲವಾದರೆ ಕೇಂದ್ರ ಗೃಹ ಸಚಿವರ ವಿರುದ್ಧ ತಾಲೂಕಿನಲ್ಲಿ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ದಲಿತ ಮುಖಂಡ ಬಸವರಾಜ ಸಿದ್ದಾಪೂರ ಎಚ್ಚರಿಕೆ ನೀಡಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಅಂಬೇಡ್ಕರ್ ಹಾಕಿಕೊಟ್ಟ ಸಂವಿಧಾನದಡಿಯಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಅವರು ಗೃಹ ಸಚಿವರಾಗಿ ಅಧಿಕಾರ ನಡೆಸುತ್ತಿದ್ದಾರೆ. ಈಗ ಅವರ ವಿರುದ್ಧವೇ ಮಾತನಾಡಿರುವುದು ಸರಿಯಲ್ಲ. ಕೂಡಲೇ ಅಮಿತ್ ಶಾ ಕ್ಷಮೆ ಕೇಳಬೇಕು. ಇಲ್ಲವಾದರೆ ಕೇಂದ್ರ ಗೃಹ ಸಚಿವರ ವಿರುದ್ಧ ತಾಲೂಕಿನಲ್ಲಿ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ದಲಿತ ಮುಖಂಡ ಬಸವರಾಜ ಸಿದ್ದಾಪೂರ ಎಚ್ಚರಿಕೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವರ ಹೇಳಿಕೆಯಲ್ಲಿ ಅಂಬೇಡ್ಕರ್ ವಿರೋಧಿ ಮನೋಭಾವ ಎದ್ದು ಕಾಣುತ್ತದೆ. ಇಂತಹ ಸೂಕ್ಷ್ಮ ಹೇಳಿಕೆ ಇಡೀ ದೇಶದ ಶೋಷಿತ ಸಮುದಾಯಗಳ ಸಂಕಷ್ಟ ಮತ್ತು ಅವಮಾನವನ್ನು ಪುನಃ ಒತ್ತಿ ಹೇಳುತ್ತದೆ. ಭಾರತದ ಇತಿಹಾಸದಲ್ಲಿ ಅಸ್ಪೃಶ್ಯರು, ಮಹಿಳೆಯರು ಮತ್ತು ಶೋಷಿತ ವರ್ಗಗಳಿಗೆ ಮಾನವೀಯ ಬದುಕು ನೀಡಿದ ಶಕ್ತಿ ಬಾಬಾ ಸಾಹೇಬರು ಕೊಟ್ಟ ಸಂವಿಧಾನ ಮತ್ತು ಅವರ ಮಾರ್ಗದರ್ಶಕ ತತ್ವಗಳಿಂದ ಬಂದಿದೆ. ಅಸ್ಪೃಶ್ಯತೆ, ಅಸಮಾನತೆ ಮತ್ತು ಶೋಷಣೆ ವಿರುದ್ಧ ಬಾಬಾಸಾಹೇಬರು ತಮ್ಮ ತ್ಯಾಗ, ಅಧ್ಯಯನದಿಂದ ಸಮಾಜವನ್ನು ಮೇಲೆತ್ತಿದ ಸತ್ಯವನ್ನು ಯಾರೂ ಮರೆಯುವಂತಿಲ್ಲ ಎಂದು ಹೇಳಿದರು.ಅಂಬೇಡ್ಕರ್ ಆದರ್ಶಗಳು, ಶೋಷಿತ ವರ್ಗಗಳಿಗೆ ಹೊಸ ಬದುಕು ನೀಡಿದ ಮಾರ್ಗದರ್ಶಕ ಬಾಬಾಸಾಹೇಬರು. ಶಿಕ್ಷಣ, ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆ ಮಾತ್ರವೇ ಸಮಾಜದಲ್ಲಿ ಬದಲಾವಣೆ ತರಬಲ್ಲ ಯೋಗ್ಯ ಮಾರ್ಗ. ಅಮಿತ್ ಶಾ ಅವರಂತಹ ವ್ಯಕ್ತಿಗಳು ಇಂತಹ ಹೀನ ಹೇಳಿಕೆಗಳಿಂದ ದೇಶದ ಜನತೆ ಮುಂದೆ ಕ್ಷಮೆಯಾಚಿಸಬೇಕು ಮತ್ತು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.ದಲಿತ ಮುಖಂಡರಾದ ಮಲ್ಲಿಕಾರ್ಜುನ್ ತಂಗಡಗಿ, ಪರಶುರಾಮ್ ಮುರಾಳ, ಅಸ್ಲಾಂ ಮುಲ್ಲಾ, ಮುತ್ತು ಅಮರಗೋಳ, ಲಕ್ಷ್ಮಣ್ಣ ಬಿದರಕುಂದಿ, ಶಶಿಕುಮಾರ್ ಹಳ್ಳೂರ್, ರಮೇಶ್ ಕಂದುಗನೂರ್, ಗಂಗಪ್ಪ ಅಮರಗೋಳ, ಲಕ್ಷ್ಮಣ್ಣ ಕಾಳಗಿ,ರಾವುತಪ್ಪ ಕಾಳಗಿ, ಶ್ರೀನಾಥ್ ಅಮರಗೋಳ, ಸಿದ್ದಪ್ಪ ಅಮರಗೋಳ ಸೇರಿದಂತೆ ಹಲವರು ಇದ್ದರು.