ಸಾರಾಂಶ
ಶುಕ್ರವಾರ ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಪೊಲೀಸ್ ಉಪಮಹಾನಿರೀಕ್ಷಕರಾದ ಅಮಿತ್ ಸಿಂಗ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್. ಭೇಟಿ ನೀಡಿ ಪರಿಶೀಲಿಸಿದ್ದು, ಮುಂದಿನ ತನಿಖೆಯ ಕುರಿತಾಗಿ ಎಸ್ಪಿಗೆ ಸೂಚನೆಗಳನ್ನು ನೀಡಿದರು.
ಬಂಟ್ವಾಳ: ಕಳೆದ ಎರಡು ದಿನಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಅಮ್ಮೆಮ್ಮಾರ್ ಎಂಬಲ್ಲಿ ನಡೆದ ಕೊಲೆ ಯತ್ನ ಪ್ರಕರಣದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ತನಿಖೆ ಆರಂಭಿಸಿದ್ದಾರೆ.
ಶುಕ್ರವಾರ ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಪೊಲೀಸ್ ಉಪಮಹಾನಿರೀಕ್ಷಕರಾದ ಅಮಿತ್ ಸಿಂಗ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್. ಭೇಟಿ ನೀಡಿ ಪರಿಶೀಲಿಸಿದ್ದು, ಮುಂದಿನ ತನಿಖೆಯ ಕುರಿತಾಗಿ ಎಸ್ಪಿಗೆ ಸೂಚನೆಗಳನ್ನು ನೀಡಿದರು.ವಿಡಿಯೋ ವೈರಲ್ ಹಾಗೂ ಘಟನೆ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಆರೋಪಿಗಳ ಪತ್ತೆಗೆ ಡಿ.ವೈ.ಎಸ್ಪಿ ನೇತೃತ್ವದಲ್ಲಿ ಎರಡು ತಂಡ ರಚಿಸಲಾಗಿದ್ದು, ಇದುವರೆಗೂ ಆರೋಪಿಗಳ ಪತ್ತೆ ಆಗಿಲ್ಲ, ಶೀಘ್ರವೇ ಆರೋಪಿಗಳನ್ನು ಪತ್ತೆ ಮಾಡುತ್ತೇವೆ ಎಂದರು.
ಪ್ರಕರಣದ ದೂರುದಾರರು ಮತ್ತು ಆರೋಪಿಗಳು ಈ ಹಿಂದೆ ಜೊತೆಗಿದ್ದವರು ಒಂದೇ ಗುಂಪಿನಲ್ಲಿ ಗುರುತಿಸಿಕೊಂಡಿದ್ದರು. ಅಪರಾಧದ ಹಿನ್ನೆಲೆ ಹೊಂದಿರುವ ಇವರ ವಿರುದ್ಧ ಸಾಕಷ್ಟು ಪ್ರಕರಣಗಳಿವೆ. ವಾರದ ಹಿಂದೆ ಇವರಿಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಗಲಾಟೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವವರ ಆರೋಗ್ಯ ಸ್ಥಿರವಾಗಿದ್ದು, ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ ಎಂದರು.