ಸಾರಾಂಶ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ವಿಧಾನ ಪರಿಷತ್ ಅರ್ಜಿ ಸಮಿತಿ ಅಧ್ಯಕ್ಷ ಎಂ.ಕೆ.ಪ್ರಾಣೇಶ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಪರಿಶೀಲನೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ವಿಧಾನ ಪರಿಷತ್ ಅರ್ಜಿ ಸಮಿತಿ ಅಧ್ಯಕ್ಷ ಎಂ.ಕೆ.ಪ್ರಾಣೇಶ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಪ್ರಕರಣಗಳನ್ನು ಪರಿಶೀಲಿಸಿ ಮಾತನಾಡಿದರು. ಚಿಕ್ಕಮಗಳೂರು ಜಿಲ್ಲೆ ಪ್ರವಾಸಿಗರನ್ನು ಕೈಬೀಸಿ ಸೆಳೆಯುವ ನಿಸರ್ಗ ಸೌಂದರ್ಯದ ತಾಣವಾಗಿದೆ. ಪ್ರವಾಸಿಗರನ್ನು ಆಕರ್ಷಿಸಲು ಪ್ರವಾಸಿ ತಾಣಗಳನ್ನು ಗುರುತಿಸಿ ಅಭಿವೃದ್ಧಿಪಡಿಸಲು ಅಗತ್ಯ ಕ್ರಿಯಾ ಯೋಜನೆ ರೂಪಿಸಿ ಸಮಿತಿಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದ ಅವರು, ಇದನ್ನು ಸರ್ಕಾರಕ್ಕೆ ಸಮಿತಿಯಿಂದ ಶಿಫಾರಸ್ಸು ಮಾಡಲಾಗುವುದು ಎಂದರು.ಅಯ್ಯನಕೆರೆ, ದೇವನೂರು ದೊಡ್ಡಕೆರೆ, ಬ್ರಹ್ಮಸಮುದ್ರ ಕೆರೆ, ಮದಗದ ಕೆರೆ ಹಾಗೂ ವಿಷ್ಣುಸಮುದ್ರ ಕೆರೆಗಳನ್ನು ಅಭಿವೃದ್ಧಿ ಪಡಿಸುವ ಸಂಬಂಧ ಸಲ್ಲಿಸಲಾದ ಅರ್ಜಿ ಬಗ್ಗೆ ಪ್ರಶ್ನಿಸಿದರು. ಇದಕ್ಕೆ ಸಂಬಂಧಿಸಿದಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಪಷ್ಟೀಕರಣ ನೀಡಿ, 2021-22 ರಲ್ಲಿ ₹250 ಲಕ್ಷ ದಲ್ಲಿ ಕೆರೆಗಳ ಅಭಿವೃದ್ಧಿಪಡಿಸಲಾಗಿದೆ.
ಇದರ ಜೊತೆಗೆ ರೈತರು ಕ್ರಮಿಸಲು ಕೆರೆಯ ಏರಿಯಲ್ಲಿ ಮಾರ್ಗ ನಿರ್ಮಿಸಲಾಗಿದೆ. ಐದು ಉಪ ಕಾಲುವೆಗಳಿಗೆ ನೀರು ಹರಿಸ ಲಾಗುತ್ತಿದೆ ಹಾಗೂ ಗಿಡಗಂಟಿಗಳನ್ನು ತೆರವುಗೊಳಿಸಲಾಗಿದೆ. ಉಳಿದಂತೆ ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನು 2 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಅದೇ ರೀತಿ ಮದಗದಕೆರೆ 16 ಪಿಕಪ್‌ಗಳನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಮಅಹಿತಿ ನೀಡಿದರು. ಕೆರೆ ಏರಿ ದುರಸ್ತಿಪಡಿಸಬೇಕು. ಈಗ ಕಾಲುವೆಗಳಲ್ಲಿ ನೀರಿನ ಹರಿವು ಸಣ್ಣದಾಗಿದ್ದು, ಮಳೆ ಜೋರಾಗಿ ಬಂದರೆ ದೊಡ್ಡ ದಾಗುತ್ತದೆ. ಇದನ್ನು ಸರಿಪಡಿಸುವಂತೆ ಸೂಚಿಸಿದರು. ಸಭೆಗೆ ಅಧಿಕಾರಿಗಳು ಮಾಹಿತಿಯೊಂದಿಗೆ ಹಾಜರಾಗಬೇಕೆಂದು ಹೇಳಿದರು. ಸಭೆಯಲ್ಲಿ ವಿಧಾನ ಪರಿಷತ್ತಿನ ಸದಸ್ಯ ಸುನಿಲ್ ವಲ್ಲಾಪುರೆ, ಅರ್ಜಿ ಸಮಿತಿ ಸದಸ್ಯರಾದ ಅನಿಲ್‌ಕುಮಾರ್, ಎಸ್.ಪಿ. ಸುಂಕನೂರ್, ಎಂ.ಪಿ.ಸುಜಾ ಕುಶಾಲಪ್ಪ, ಶಾಸಕ ಎಚ್.ಡಿ.ತಮ್ಮಯ್ಯ ಹಾಗೂ ಅರ್ಜಿ ಸಮಿತಿ ಅಧಿಕಾರಿಗಳು, ಜಿಲ್ಲಾಧಿಕಾರಿ ಮೀನಾ ನಾಗರಾಜ್ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.17 ಕೆಸಿಕೆಎಂ 1ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಪ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಅಧ್ಯಕ್ಷತೆಯಲ್ಲಿ ವಿಧಾನಪರಿಷತ್ ಅರ್ಜಿ ಸಮಿತಿ ಸಭೆ ನಡೆಯಿತು.