ಅಮೃತ ಯೋಜನೆ ಕಾಮಗಾರಿ ಮುಂದಿನ ವರ್ಷದೊಳಗೆ ಪೂರ್ಣ

| Published : Feb 21 2025, 12:47 AM IST

ಅಮೃತ ಯೋಜನೆ ಕಾಮಗಾರಿ ಮುಂದಿನ ವರ್ಷದೊಳಗೆ ಪೂರ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಅರಭಾವಿ, ಕಲ್ಲೋಳಿ, ನಾಗನೂರು ಮತ್ತು ಮೂಡಲಗಿ ಪಟ್ಟಣಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಶಾಶ್ವತ ಕುಡಿಯುವ ನೀರು ಕಲ್ಪಿಸಿಕೊಡುವ ಅಮೃತ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ವರ್ಷದೊಳಗೆ ಕಾಮಗಾರಿ ಮುಗಿಯಲಿದೆ. ಪ್ರತಿಯೊಂದೂ ಕುಟುಂಬಗಳಿಗೆ ಕುಡಿಯುವ ನೀರು ಮನೆ ಮನೆಗಳಿಗೆ ತಲುಪಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ಅರಭಾವಿ, ಕಲ್ಲೋಳಿ, ನಾಗನೂರು ಮತ್ತು ಮೂಡಲಗಿ ಪಟ್ಟಣಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಶಾಶ್ವತ ಕುಡಿಯುವ ನೀರು ಕಲ್ಪಿಸಿಕೊಡುವ ಅಮೃತ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ವರ್ಷದೊಳಗೆ ಕಾಮಗಾರಿ ಮುಗಿಯಲಿದೆ. ಪ್ರತಿಯೊಂದೂ ಕುಟುಂಬಗಳಿಗೆ ಕುಡಿಯುವ ನೀರು ಮನೆ ಮನೆಗಳಿಗೆ ತಲುಪಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ತಾಲೂಕಿನ ಅರಭಾವಿ ಪಟ್ಟಣದ ಆಂಜನೇಯ ದೇವಸ್ಥಾನದ ಹತ್ತಿರ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಮೃತ 2.0 ಯೋಜನೆಯಡಿಯಲ್ಲಿ ಅಂದಾಜು ₹140.69 ಕೋಟಿ ವೆಚ್ಚದಲ್ಲಿ ಅರಭಾವಿ, ಕಲ್ಲೋಳಿ, ನಾಗನೂರು ಪಟ್ಟಣ ಪಂಚಾಯತಿ ಮತ್ತು ಮೂಡಲಗಿ ಪುರಸಭೆಯ ವ್ಯಾಪ್ತಿಯ ಸಾರ್ವಜನಿಕರಿಗೆ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಜನರಿಗೆ ಕುಡಿಯುವ ನೀರು ಒದಗಿಸುವ ಮೂಲಕ ತಮ್ಮ 20 ವರ್ಷಗಳ ಕನಸು ಈಡೇರಿದಂತಾಗಿದೆ ಎಂದರು.ಅರಭಾವಿ ಕ್ಷೇತ್ರದ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾದಾಗ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಆಗಿನ ಸಮಯದಲ್ಲಿ ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿತ್ತು. ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿತ್ತು. ಜನರಿಗೆ ಕುಡಿಯುವ ನೀರಿನಲ್ಲಿ ಅಸ್ತವ್ಯಸ್ತಯಾಗಿತ್ತು. ಆಗ ನಮ್ಮ ಹಡಗಿನಾಳ ಗ್ರಾಮದ ಹಿರಿಯರೊಬ್ಬರು ಹಿಡಕಲ್ ಜಲಾಶಯದಿಂದ ನೀರು ತುಗೊಂಡು ಬನ್ನಿ ಎಂದು ಸಲಹೆ ಮಾಡಿದ್ದರು. ಅಲ್ಲಿಂದ ನೀರನ್ನು ಹೇಗೆ ತರೋದು ಎಂದು ಯೋಚಿಸಿದ್ದೆ. ಆದರೀಗ ಅವರು ಹೇಳಿದ ಮಾತಿನಂತೆ ನಮ್ಮ ಕ್ಷೇತ್ರಕ್ಕೆ ಕುಡಿಯುವ ನೀರಿನ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಜನರಿಗೆ ಕುಡಿಯಲಿಕ್ಕೆ ಶುದ್ಧ ನೀರು ಬರುತ್ತಿದೆ. ಇದಕ್ಕಾಗಿ ಅಮೃತ 2.0 ಯೋಜನೆಯನ್ನು ನಮ್ಮ ಬಿಜೆಪಿ ಸರ್ಕಾರವು ಅಸ್ತಿತ್ವಕ್ಕೆ ಇದ್ದ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಮಂಜೂರಾತಿ ನೀಡಿದ್ದರು. ಈಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯೋಜನೆಯು ಕಾರ್ಯಗತವಾಗುತ್ತಿದೆ ಎಂದು ತಿಳಿಸಿದರು.

ಶಿರಢಾನ ಗ್ರಾಮದ ಹತ್ತಿರ (ಝಂಗಟಿಹಾಳ) ಘಟಪ್ರಭಾ ನದಿಯ ಎಡ ದಂಡೆಯಲ್ಲಿ ಜಾಕವೆಲ್, ಇಂಟೆಕ್ ವೇಲ್ ಮತ್ತು ಇಂಟೆಕ ಕೊಳವೆ ಮಾರ್ಗಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.ವೇದಿಕೆಯಲ್ಲಿ ವೇದಮೂರ್ತಿ ಶಿವಯ್ಯ ಹಿರೇಮಠ, ಅರಭಾವಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ರೇಣುಕಾ ಮಾದರ, ಉಪಾಧ್ಯಕ್ಷೆ ರಾಜಶ್ರೀ ಗಂಗಣ್ಣವರ, ಮೂಡಲಗಿ ಪುರಸಭೆಯ ಅಧ್ಯಕ್ಷೆ ಖುರ್ಷದಾ ನದಾಫ, ಉಪಾಧ್ಯಕ್ಷೆ ಭೀಮವ್ವ ಪೂಜೇರಿ, ಗಜಾನನ ಯರಗನ್ವಿ, ಬಸವಂತ ದಾಸನ್ನವರ, ಸುಭಾಸ್ ಕ್ಯತೆನ್ನವರ, ಶಂಕರ ಬಿಲಕುಂದಿ, ರಮೇಶ ಮಾದರ, ಮುತ್ತೆಪ್ಪ ಜಲ್ಲಿ, ರಾಮಪ್ಪ ಹಂದಿಗುಂದ, ರವಿ ಸಣ್ಣಕ್ಕಿ, ಹಣಮಂತ ಗುಡಲಮನಿ, ಗಣಪತಿ ಇಳಿಗೆರಿ, ಸುಭಾಸ್ ಕುರಬೇಟ, ಪ್ರಶಾಂತ್ ನಿಡಗುಂದಿ, ಪಟ್ಟಣ ಪಂಚಾಯತಿ ಮತ್ತು ಪುರಸಭೆ ಸದಸ್ಯರು, ಮುಖ್ಯಾಧಿಕಾರಿಗಳಾದ ವಿನಾಯಕ ಬಬಲೇಶ್ವರ, ತುಕಾರಾಂ ಮಾದರ, ಚಿದಾನಂದ್ ಮುಗಳಖೋಡ, ಕುಮಾರೇಶ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.