ಕಾಂತರಾಜಪುರ ಪಂಚಾಯತ್‌ ಅಧ್ಯಕ್ಷರಾಗಿ ಅಮೃತಶಿಲ್ಪ ಆಯ್ಕೆ

| Published : Jul 17 2025, 12:36 AM IST

ಕಾಂತರಾಜಪುರ ಪಂಚಾಯತ್‌ ಅಧ್ಯಕ್ಷರಾಗಿ ಅಮೃತಶಿಲ್ಪ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಕಾಂತರಾಜುಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಅಮೃತಶಿಲ್ಪ ಶಿವರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷೆ ಅಮೃತಶಿಲ್ಪ ಮಾತನಾಡಿ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಸ್ಥಾನಕ್ಕೆ ದಲಿತ ಮಹಿಳೆಯಾದ ನನ್ನ ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದರಿಂದ ರಾಜಕೀಯ, ಸಾಮಾಜಿಕ ನ್ಯಾಯ ಒದಗಿಸಿದಂತಾಗಿದೆ ಎಂದರು. ಎಲ್ಲಾ ಸದಸ್ಯರ ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಿದರೆ ಸಾಕಷ್ಟು ಅಭಿವೃದ್ಧಿ ಸಾಧಿಸಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ರೂಪಿಸಬಹುದು ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಕಾಂತರಾಜುಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಅಮೃತಶಿಲ್ಪ ಶಿವರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

೧೮ ಸದಸ್ಯರ ಸಂಖ್ಯಾಬಲ ಹೊಂದಿರುವ ಈ ಗ್ರಾಮ ಪಂಚಾಯ್ತಿಯ ಹಿಂದಿನ ಅಧ್ಯಕ್ಷೆ ರತ್ನಮ್ಮ ದೇವರಾಜ್ ರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಮೃತಶಿಲ್ಪ ಶಿವರಾಜ್ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಮತ್ಯಾವ ನಾಮಪತ್ರಗಳು ಸಲ್ಲಿಕೆಯಾಗದ ಕಾರಣ ಚುನಾವಣಾಧಿಕಾರಿ ಇಒ ಹರೀಶ್ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಅವಿರೋಧ ಆಯ್ಕೆ ಪ್ರಕಟಿಸಿದರು.

ನೂತನ ಅಧ್ಯಕ್ಷೆ ಅಮೃತಶಿಲ್ಪ ಮಾತನಾಡಿ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಸ್ಥಾನಕ್ಕೆ ದಲಿತ ಮಹಿಳೆಯಾದ ನನ್ನ ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದರಿಂದ ರಾಜಕೀಯ, ಸಾಮಾಜಿಕ ನ್ಯಾಯ ಒದಗಿಸಿದಂತಾಗಿದೆ ಎಂದರು.

ಬಡವರು ಹಾಗೂ ದೀನದಲಿತರ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಂತಹಂತವಾಗಿ ಕೈಗೊಳ್ಳುತ್ತೇವೆ. ಎಲ್ಲಾ ಸದಸ್ಯರ ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಿದರೆ ಸಾಕಷ್ಟು ಅಭಿವೃದ್ಧಿ ಸಾಧಿಸಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ರೂಪಿಸಬಹುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಬರಾಳು ಮಹೇಂದ್ರ, ಕಾರ್ತಿಕ್, ಉಪಾಧ್ಯಕ್ಷೆ ಮಮತಾ ರಾಣಿ, ಮುಖಂಡರಾದ ವಡ್ಡರಹಳ್ಳಿ ರಾಜಣ್ಣ, ಶ್ರೀರಂಗ, ಸೂರಣ್ಣ, ಎಂ.ಎನ್.ಮಹೇಶ್, ಚಿಕ್ಕಬಿಳ್ತಿ ಗಂಗಾಧರ್, ಜಗದೀಶ್, ಎಂ.ಡಿ.ನಾರಾಯಣ್, ರವೀಶ್, ನಾಗೇಶ್, ಪ್ರಕಾಶ್, ಗುರು, ಕೃಪಾಕರ್‌, ಕೆ.ಟಿ.ಮಂಜುನಾಥ್, ನಟೇಶ್, ಸೋಮಣ್ಣ, ರವಿ, ದಮ್ಮನಿಂಗಳ ಶಂಕರ್‌, ಹಿರಿಬಿಳ್ತಿ ಮಂಜು, ಪಿಡಿಒ ಸುಮನ್ ಮುಂತಾದವರಿದ್ದರು.