2ಎ ಮೀಸಲಾತಿಗೆ ಆಗ್ರಹಿಸಿ ಹೊರಾಟ : ಲಾಟಿಚಾರ್ಜ್‌ ಮೂಲಕ ಹೋರಾಟ ಹತ್ತಿಕ್ಕುವ ಪ್ರಯತ್ನ

| Published : Dec 12 2024, 12:35 AM IST / Updated: Dec 12 2024, 07:44 AM IST

ಸಾರಾಂಶ

2ಎ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಹೊರಾಟ ನಡೆಸುತ್ತಿದ್ದ ಪಂಚಮಸಾಲಿ ಸಮಾಜದ ಮೇಲೆ ಪೊಲೀಸರು ಲಾಟಿಚಾರ್ಜ್ ಮಾಡುವ ಮೂಲಕ ಹೊರಾಟ ಹತ್ತಿಕ್ಕಲು ಮಾಡಿರುವ ಘಟನೆಯನ್ನು ತೀವ್ರವಾಗಿ ಖಂಡಿಸುವುದಾಗಿ ಕರ್ನಾಟಕ ರಾಜ್ಯ ಪಂಚಮಸಾಲಿ ಸಮಾಜದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಟ್ಟಣಶೆಟ್ಟಿ ಪರಮೇಶ್ ಹೇಳಿದರು.

  ಹೊನ್ನಾಳಿ : 2ಎ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಹೊರಾಟ ನಡೆಸುತ್ತಿದ್ದ ಪಂಚಮಸಾಲಿ ಸಮಾಜದ ಮೇಲೆ ಪೊಲೀಸರು ಲಾಟಿಚಾರ್ಜ್ ಮಾಡುವ ಮೂಲಕ ಹೊರಾಟ ಹತ್ತಿಕ್ಕಲು ಮಾಡಿರುವ ಘಟನೆಯನ್ನು ತೀವ್ರವಾಗಿ ಖಂಡಿಸುವುದಾಗಿ ಕರ್ನಾಟಕ ರಾಜ್ಯ ಪಂಚಮಸಾಲಿ ಸಮಾಜದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಟ್ಟಣಶೆಟ್ಟಿ ಪರಮೇಶ್ ಹೇಳಿದರು.

ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಬುಧವಾರ ಕರೆದಿದ್ದ ಬೆಳಗಾವಿ ಘಟನೆ ಖಂಡನಾ ನಿರ್ಣಯದ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಶಾಂತಿಯುತ ಹೋರಾಟವು ಹಿಂಸಾಚಾರಕ್ಕೆ ತಿರುಗಲು ಅಲ್ಲಿನ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಯೇ ನೇರಕಾರಣವಾಗಿದ್ದು, ಘಟನೆಯ ಬಗ್ಗೆ ಸರ್ಕಾರ ಕ್ಷಮೆ ಕೊರಬೇಕಿದೆ. ಈ ಘಟನೆಗೆ ಕಾರಣರಾದ ಅಧಿಕಾರಿಗಳನ್ನ ಅಮಾನತ್ತು ಮಾಡುವ ಮೂಲಕ ಹಲ್ಲೆಗೊಳಗಾದ ಬಂಧುಗಳಿಗೆ ಹಾಗೂ ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಹೇಳಿದರು.

ಘಟನೆಯನ್ನು ಖಂಡಿಸಿ ಡಿ.12ರ ಗುರುವಾರ ಬೆಳಗ್ಗೆ 11ಗಂಟೆಗೆ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಿಂದ ಪಂಚಮಸಾಲಿ ಸಮಾಜದ ತಾಲೂಕು ಘಟಕ, ಮಹಿಳಾ ಘಟಕ, ಯುವ ಹಾಗೂ ನಗರ ಘಟಕಗಳಿಂದ ಶಾಂತಿಯುತ ಮೆರವಣಿಗೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಈ ವೇಳೆ ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಬೆನಕನಹಳ್ಳಿ ವೀರಪ್ಪ, ಯುವ ಘಟಕದ ಅಧ್ಯಕ್ಷ ಸಾಯಿ ಹಾಲೇಶ್, ನಗರ ಘಟಕ ಅಧ್ಯಕ್ಷ ಗಿರೀಶ್, ಉಪಾಧ್ಯಕ್ಷ ಪ್ರಶಾಂತ, ರೇಣುಕಪ್ಪ ಹಾಗೂ ಸಮಾಜದ ಅನೇಕ ಮುಖಂಡರು ಇದ್ದರು.