ಸಾರಾಂಶ
ಕುಂದಾಣ: ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ. ಮಕ್ಕಳ ಉಜ್ವಳ ಭವಿಷ್ಯದಲ್ಲಿ ಶಿಕ್ಷಕರ ಶ್ರಮ ಅಡಗಿರುತ್ತದೆ ಎಂದು ಇಂಡಿಯನ್ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ತಿಳಿಸಿದರು.
ಕುಂದಾಣ: ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ. ಮಕ್ಕಳ ಉಜ್ವಳ ಭವಿಷ್ಯದಲ್ಲಿ ಶಿಕ್ಷಕರ ಶ್ರಮ ಅಡಗಿರುತ್ತದೆ ಎಂದು ಇಂಡಿಯನ್ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ತಿಳಿಸಿದರು.
ಹೋಬಳಿಯ ಚಪ್ಪರಕಲ್ಲು ಬಳಿಯ ವಿಹಾನ್ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಜೀವನದ ಮೌಲ್ಯಗಳನ್ನು ತಿಳಿಸಬೇಕು. ವಿನಯವಿಲ್ಲದ ಶಿಕ್ಷಣಕ್ಕೆ ಬೆಲೆಯಿಲ್ಲ. ಮಕ್ಕಳು ಸಂಸ್ಕಾರ ಕಲಿತಾಗ ಮಾತ್ರ ಶಿಕ್ಷಣಕ್ಕೆ ಬೆಲೆ ಸಿಗುತ್ತದೆ. ಈ ನಿಟ್ಟಿನಲ್ಲಿ ವಿಹಾನ್ ಶಾಲೆ ಶಿಕ್ಷಣ ಸಂಸ್ಥೆ ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದೆ ಎಂದರು.ಶ್ರೀ ಕ್ಷೇತ್ರ ಧರ್ಮಸ್ಥಳ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಜಿಲ್ಲಾ ಮಾಜಿ ಅಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಆಸಕ್ತಿ ಬೆಳೆಸಿಕೊಳ್ಳಬೇಕೆಂದರು.
ಈ ವೇಳೆ ವಿಹಾನ್ ಶಾಲೆಯ ಸಂಸ್ಥಾಪಕ ಪ್ರೊ.ಪ್ರತಾಪ್ ಯಾದವ್, ರೋಹಿತ್, ವಿಶ್ವನಾಥಪುರ ಗ್ರಾಪಂ ಮಾಜಿ ಉಪಾಧ್ಯಕ್ಷ ವಿನಯ್‌ಕುಮಾರ್ ಇತರರಿದ್ದರು.ಕೋಟ್.............ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಒತ್ತು ಕೊಡಬೇಕು. ಪೋಷಕರು ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರಬೇಕು. ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಕ್ರೀಡಾ ಪ್ರೋತ್ಸಾಹ ನೀಡಲು ಈ ಶಾಲೆ ಉದಾಹರಣೆ ಆಗಿದೆ.
- ಶರಣ್ಯಶೆಟ್ಟಿ, ಕನ್ನಡ ಚಲನ ಚಿತ್ರನಟಿ೦೧ ಕುಂದಾಣ ಚಿತ್ರಸುದ್ದಿ: ೧೪ವಿಹಾನ್ ಪಬ್ಲಿಕ್ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಇಂಡಿಯನ್ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷ ರಾಮಯ್ಯ ಮಾತನಾಡಿದರು.