ಸಾರಾಂಶ
ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆ ಇಡೀ ದೇಶದ ಭವಿಷ್ಯವನ್ನು ರೂಪಿಸುವ ಮಹಾ ಚುನಾವಣೆ. ದೇಶದ ಉಜ್ವಲ ಭವಿಷ್ಯದ ವಿಶಾಲ ದೃಷ್ಟಿಕೋನ ಇಟ್ಟುಕೊಂಡ ಚುನಾವಣೆ ಇದಾಗಿದ್ದು ಪಕ್ಷದ ಎಲ್ಲ ಕಾರ್ಯಕರ್ತರು ದೇಶದ ಉಜ್ವಲ ಭವಿಷ್ಯಕ್ಕಾಗಿ ದುಡಿಯಬೇಕು ಎಂದು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಹೇಳಿದರು.
ಕನ್ನಡಪ್ರಭ ವಾರ್ತೆ ಸುರಪುರ
ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆ ಇಡೀ ದೇಶದ ಭವಿಷ್ಯವನ್ನು ರೂಪಿಸುವ ಮಹಾ ಚುನಾವಣೆ. ದೇಶದ ಉಜ್ವಲ ಭವಿಷ್ಯದ ವಿಶಾಲ ದೃಷ್ಟಿಕೋನ ಇಟ್ಟುಕೊಂಡ ಚುನಾವಣೆ ಇದಾಗಿದ್ದು ಪಕ್ಷದ ಎಲ್ಲ ಕಾರ್ಯಕರ್ತರು ದೇಶದ ಉಜ್ವಲ ಭವಿಷ್ಯಕ್ಕಾಗಿ ದುಡಿಯಬೇಕು ಎಂದು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಹೇಳಿದರು. ತಾಲೂಕಿನ ಕೆಂಭಾವಿ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಆವರಣದಲ್ಲಿ ಬಿಜೆಪಿ ಶಹಾಪುರ ಮಂಡಲ ವತಿಯಿಂದ ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್ ಸಭೆಗೆ ಚಾಲನೆ ನೀಡಿ ಮಾತನಾಡಿದರು. ಜನ್ ಧನ್, ಆಯುಷ್ಮಾನ್ ಭಾರತ್, ಕಿಸಾನ್ ಸಮ್ಮಾನ್ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಪ್ರಧಾನಿ ಮೋದಿ ಅವರು ದೇಶದ ಪ್ರಜೆಗಳಿಗೆ ನೀಡಿದ್ದಾರೆ. ಅಂಥ ಮಹಾನ್ ನಾಯಕರನ್ನು ಮತ್ತೆ ಪ್ರಧಾನಿ ಮಾಡುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಗಿದೆ ಎಂದರು. ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ್ ಮಾತನಾಡಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಾಗೂ ಅಭಿವೃದ್ಧಿ ಹರಿಕಾರ ರಾಜಾ ಅಮರೇಶ್ವರ ನಾಯಕರನ್ನು ಮತ್ತೆ ಆರಿಸಿ ಕಳುಹಿಸುವ ಜವಾಬ್ದಾರಿ ಪ್ರತಿ ಕಾರ್ಯಕರ್ತರ ಮೇಲಿದೆ ಎಂದು ಹೇಳಿದರು. ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಪಂ ಮಾಜಿ ಅಧ್ಯಕ್ಷ ಬಸನಗೌಡ ಯಡಿಯಾಪೂರ, ಮುಖಂಡರಾದ ಬಸವರಾಜಗೌಡ ವಿಭೂತಿಹಳ್ಳಿ, ಗುರು ಕಾಮಾ, ಶಂಕರ ಕರಣಗಿ, ಮಲ್ಲಿಕಾರ್ಜುನ ಕಂದಕೂರ, ಕನಕಪ್ಪ ವಂದಗನೂರ, ರಾಜಶೇಖರ ಗೂಗಲ್, ಶಾಂತಣ್ಣ ಚನ್ನೂರ, ದೇವೇಂದ್ರ, ಸಂಗಣ್ಣ ತುಂಬಗಿ, ಯಲ್ಲಯ್ಯ ನಾಯಕ, ಶರಣಪ್ಪ ಯಾಳಗಿ, ರಮೇಶ ಕೊಡಗಾನೂರ ಲಕ್ಷ್ಮಿಬಾಯಿ ಕಂಬಾರ ಸೇರಿದಂತೆ ಇತರರಿದ್ದರು. ಶರಣು ಮಂಡಗಳ್ಳಿ ಸ್ವಾಗತಿಸಿದರು. ರಮೇಶ ಜಾಧವ ನಿರೂಪಿಸಿ, ವಂದಿಸಿದರು.