ಸಾರಾಂಶ
ಮರಳಿ ಕೆಲಸಕ್ಕೆ ತೆಗೆದುಕೊಳ್ಳಲು ಲಂಚದ ಬೇಡಿಕೆ ಇಟ್ಟು ಲಂಚ ಪಡೆಯುತ್ತಿದ್ದಾಗ ಬಾಗಲಕೋಟೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ರಾಜಶ್ರೀ ಪೋಳ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ
ಬಾಗಲಕೋಟೆ: ಮರಳಿ ಕೆಲಸಕ್ಕೆ ತೆಗೆದುಕೊಳ್ಳಲು ಲಂಚದ ಬೇಡಿಕೆ ಇಟ್ಟು ಲಂಚ ಪಡೆಯುತ್ತಿದ್ದಾಗ ಬಾಗಲಕೋಟೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ರಾಜಶ್ರೀ ಪೋಳ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿಯೇ ನೌಕರರಾಗಿರುವ ರಾಘವೇಂದ್ರ ಮಡಿವಾಳ ಎಂಬುವವರು ಮರಳಿ ಸೇವೆಗೆ ಸೇರುವ ಸಂದರ್ಭದಲ್ಲಿ ಸಹಾಯಕ ಆಡಳಿತಾಧಿಕಾರಿ ರಾಜಶ್ರೀ ಪೋಳ ಎಂಬುವವರು ₹5 ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಲೋಕಾಯುಕ್ತದಲ್ಲಿ ರಾಘವೇಂದ್ರ ಮಡಿವಾಳ ದೂರು ಸಲ್ಲಿಸಿದ್ದರು. ಅವರ ದೂರು ಆಧರಿಸಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣ ಪಡೆಯುವ ವೇಳೆ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ವರ ನೇತೃತ್ವದಲ್ಲಿ ನಡೆದ ದಾಳಿ ಇದಾಗಿದೆ.
;Resize=(128,128))
;Resize=(128,128))
;Resize=(128,128))
;Resize=(128,128))