ಕರ್ತವ್ಯನಿರತ ಪೌರಕಾರ್ಮಿಕನಿಗೆ ಹೃದಯಾಘಾತ

| Published : Aug 13 2024, 12:46 AM IST

ಸಾರಾಂಶ

ಲಕ್ಷ್ಮಣ ಹರಿಜನ ಅವರು ಸೋಮವಾರ ಬೆಳಗ್ಗೆ ಎಂದಿನಂತೆ ಪಟ್ಟಣದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆ ತಲುಪುವುದರೊಳಗೆ ಮೃತಪಟ್ಟಿದ್ದರು.

ಯಲ್ಲಾಪುರ: ಇಲ್ಲಿನ ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರೊಬ್ಬರು ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಪಟ್ಟಣದ ಪೌರಕಾರ್ಮಿಕ ಲಕ್ಷ್ಮಣ ಹರಿಜನ (52) ಮೃತಪಟ್ಟ ವ್ಯಕ್ತಿ.

ಅವರು ಸೋಮವಾರ ಬೆಳಗ್ಗೆ ಎಂದಿನಂತೆ ಪಟ್ಟಣದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆ ತಲುಪುವುದರೊಳಗೆ ಮೃತಪಟ್ಟಿದ್ದರು. ಈ ಕುರಿತು ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ತಿಳಿದು ಶಾಸಕ ಶಿವರಾಮ ಹೆಬ್ಬಾರ ಅವರು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದೌಡಾಯಿಸಿ, ಲಕ್ಷ್ಮಣ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಅಲ್ಲದೇ ಸರ್ಕಾರದಿಂದ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದರು.ಬಸವಣ್ಣ ಹೊಂಡದಲ್ಲಿ ವ್ಯಕ್ತಿಯ ಶವ ಪತ್ತೆ

ಮುಂಡಗೋಡ: ಪಟ್ಟಣದ ಬಸವಣ್ಣ ದೇವಾಲಯ ಹೊಂಡದಲ್ಲಿ ಸೋಮವಾರ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.ಪಟ್ಟಣದ ಕಂಬಾರಗಟ್ಟಿ ಬಡಾವಣೆಯ ಶಿವಾಜಿ ಬೂಶೆಟ್ಟಿ(೬೦) ಎಂಬವರೆ ಮೃತಪಟ್ಟ ವ್ಯಕ್ತಿ. ಬೆಳಗ್ಗೆ ಹೊಂಡದಲ್ಲಿ ಶವ ತೇಲುತ್ತಿತ್ತು. ಇದನ್ನು ಗಮನಿಸಿದ ಸ್ಥಳಿಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಮುಂಡಗೋಡ ಪೊಲೀಸ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಶವವನ್ನು ಹೊರತೆಗೆದಿದ್ದಾರೆ.

ಮೃತ ವ್ಯಕ್ತಿ ಭಾನುವಾರ ರಾತ್ರಿ ಮನೆಯಲ್ಲಿ ಊಟ ಮಾಡಿ ಹೊರಗೆ ಹೋಗಿದ್ದರು ಎನ್ನಲಾಗಿದ್ದು, ಸೋಮವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಮರಣೋತ್ತರ ಪರೀಕ್ಷೆಯಿಂದ ಸಾವಿಗೆ ಕಾರಣ ತಿಳಿದು ಬರಬೇಕಿದೆ.