ಸಾರಾಂಶ
ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಅಭೂತ ಪೂರ್ವ ಗೆಲುವು ದಾಖಲಿಸಿರುವುದಕ್ಕೆ ಅವರಿಗೆ ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಹಿರಿಯ ಮುಖಂಡ ಕೃಷ್ಣ (ಕೋಟೆ ಕಿಟ್ಟಿ) ತಿಳಿಸಿದರು.
ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಅಭೂತ ಪೂರ್ವ ಗೆಲುವು ದಾಖಲಿಸಿರುವುದಕ್ಕೆ ಅವರಿಗೆ ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಹಿರಿಯ ಮುಖಂಡ ಕೃಷ್ಣ (ಕೋಟೆ ಕಿಟ್ಟಿ) ತಿಳಿಸಿದರು.
ಸುದ್ದಿಗಾರರೊಂದಿಗೆ ಮೈತ್ರಿ ಅಭ್ಯರ್ಥಿಯ ಗೆಲುವಿನ ಸಂಭ್ರಮ ಹಂಚಿಕೊಂಡ ಅವರು, ಈ ಗೆಲುವು ಮತದಾರರ ಗೆಲುವಾಗಿದ್ದು ಸತತವಾಗಿ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಡಿ.ಕೆ.ಸುರೇಶ್ ಸೋಲು ಈ ಬಾರಿ ನಿರೀಕ್ಷಿತವಾಗಿದ್ದರೂ ಈ ಮಟ್ಟದ ಅಂತರದಿಂದ ಗೆಲುವನ್ನ ಮೈತ್ರಿ ಅಭ್ಯರ್ಥಿ ಗಳಿಸಲು ತಾಲೂಕಿನ ಪ್ರಜ್ಞಾವಂತ ಮತದಾರರು ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಹಿರಿಯ, ಕಿರಿಯ ಮುಖಂಡರ ಜೊತೆಗೆ ಕಾಂಗ್ರೆಸ್ ಪಕ್ಷದ ಕೆಲ ನಾಯಕರ ನಡೆಯಿಂದ ಬೇಸತ್ತಿದ್ದ ಹಿರಿಯ, ಕಿರಿಯ ನಾಯಕರ ಬೆಂಬಲದಿಂದ 85 ಸಾವಿರಕ್ಕೂ ಹೆಚ್ಚು ಮತ ನೀಡಿರುವ ಕ್ಷೇತ್ರದ ಮತದಾರರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಾಗಾನಂದ ಮಾತನಾಡಿ, ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯ ಅಭ್ಯರ್ಥಿ ಡಾ. ಮಂಜುನಾಥ್ ಅವರನ್ನು ಆಯ್ಕೆ ಮಾಡಿದಾಗಲೇ ನಾವು ಜಯಗಳಿಸುವುದು ಶತಸಿದ್ಧವೆಂದು ತಿಳಿದಿತ್ತು. ಹೃದಯವಂತ ವ್ಯಕ್ತಿ ಮಂಜುನಾಥ್ ಅವರ ಈ ಐತಿಹಾಸಿಕ ಗೆಲುವಿಗೆ ಮುಖ್ಯ ಕಾರಣ ಕಾಂಗ್ರೆಸ್ ದುರಾಡಳಿತ, ನಾಯಕರ ದರ್ಪ ದೌರ್ಜನ್ಯದಿಂದ ಬೇಸತ್ತ ಪ್ರಜ್ಞಾವಂತ ಮತದಾರರರು ಉತ್ತಮ ತೀರ್ಪು ನೀಡಿದ್ದಾರೆ ಎಂದರು.
ಈ ವೇಳೆ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ದರ್ಶನ್, ಮುಖಂಡ ರಾಜು, ರಾಮಕೃಷ್ಣ ಉಪಸ್ಥಿತರಿದ್ದರು. ಕೆ ಕೆ ಪಿ ಸುದ್ದಿ 03:ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಜಯಗಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.