ಸಾರಾಂಶ
ಸಮೀಪದ ಮದ್ಲೆಸರ ನಾವಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಮನೆಗೆ ಬೆಂಕಿ ತಗಲಿ ಸಂಪೂರ್ಣವಾಗಿ ಸುಟ್ಟು ಲಕ್ಷಾಂತರ ರು. ನಷ್ಟ ಸಂಭವಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ಆನಂದಪುರ: ಸಮೀಪದ ಮದ್ಲೆಸರ ನಾವಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಮನೆಗೆ ಬೆಂಕಿ ತಗಲಿ ಸಂಪೂರ್ಣವಾಗಿ ಸುಟ್ಟು ಲಕ್ಷಾಂತರ ರು. ನಷ್ಟ ಸಂಭವಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ಯಡೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದ್ಲೆಸರ ನ್ಯಾವಟಿ ಗ್ರಾಮದ ಮೂಲೆಗದ್ದೆ ಜಯಮ್ಮರವರ ಮನೆಗೆ ಬುಧವಾರ ರಾತ್ರಿ ಆಕಸ್ಮಿಕ ಬೆಂಕಿ ತಗಲಿ ಮನೆಯ ಮೇಲ್ಛಾವಣಿ ಸೇರಿದಂತೆ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಬೆಂಕಿಗೆ ಆಹುತಿಯಾಗಿ ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ. ವಿಷಯ ತಿಳಿದು ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಆದೇಶದ ಮೇರೆಗೆ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯ ಅಶೋಕ್ ಬೇಳೂರು ಭೇಟಿ ನೀಡಿ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿ ಶಾಸಕರ ಪರವಾಗಿ ಬೆಂಕಿಯಿಂದ ಮನೆ ಕಳೆದುಕೊಂಡ ಜಯಮ್ಮಗೆ ವೈಯಕ್ತಿಕ ಧನ ಸಹಾಯ ಮಾಡಿದರು. ಕಂದಾಯ ಅಧಿಕಾರಿಗಳು ಸೂಕ್ತ ಪರಿಹಾರಕ್ಕೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ತಿಳಿಸಿದರು.ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಎಂ. ಶ್ರೀನಿವಾಸ್ ಮೂರ್ತಿ, ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಪಕ್ಷದ ಮುಖಂಡರಾದ ಎನ್. ಉಮೇಶ್, ರಮಾನಂದ್ ಸಾಗರ್, ರಹಮತುಲ್ಲಾ, ಅಶ್ವಿನ್, ನಾರಿ ಲೋಕಪ್ಪ, ಬೀರೇಶ್, ಎಂಎಲ್ ಈಶ್ವರಪ್ಪ ಇನ್ನಿತರರು ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))