ಸಾರಾಂಶ
ಅನರ್ಕಲಿ ತುಳು ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಪಿವಿಆರ್, ಭಾರತ್ ಸಿನಿಮಾಸ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಬೆಳ್ತಂಗಡಿಯಲ್ಲಿ ಭಾರತ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್‌ನಲ್ಲಿ ತೆರೆ ಕಾಣುತ್ತಿದೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ ‘ಅನರ್ ಕಲಿ’ ತುಳು ಸಿನಿಮಾದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಭಾರತ್ ಸಿನಿಮಾಸ್‌ನಲ್ಲಿ ನಡೆಯಿತು.ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ತುಳು ಭಾಷೆಯ ಉಳಿವಿಗಾಗಿ ತುಳು ನಾಟಕ ಮತ್ತು ಸಿನಿಮಾಗಳ ಪಾತ್ರ ಹೆಚ್ಚಿನದಾಗಿದೆ. ಇದಕ್ಕಾಗಿ ಶ್ರಮಿಸುತ್ತಿರುವ ಲೈಟ್‌ಬಾಯ್‌ನಿಂದ ಹಿಡಿದು ಎಲ್ಲರನ್ನು ಈ ಸಂದರ್ಭದಲ್ಲಿ ನೆನೆಯಬೇಕಿದೆ. ಅನರ್ಕಲಿ ತುಳು ಸಿನಿಮಾ ಚೆನ್ನಾಗಿದೆ ಎಂದು ಈಗಾಗಲೇ ಪ್ರೇಕ್ಷಕರು ಬೆನ್ನುತಟ್ಟಿದ್ದಾರೆ ಎಂದರು. ಕಲಾವಿದ ನವನೀತ್ ಶೆಟ್ಟಿ ಕದ್ರಿ ಮಾತನಾಡಿ, ನಾವು ಬಾಲ್ಯದಲ್ಲಿ ನೋಡುತ್ತಿದ್ದ ಅನರ್ಕಲಿ ವೇಷವನ್ನು ಮತ್ತೊಮ್ಮೆ ತುಳುನಾಡಿನ ಜನರಿಗೆ ಪರಿಚಯಿಸಲು ಚಿತ್ರತಂಡ ಮುಂದಾಗಿದೆ. ಚಿತ್ರ ನೋಡಿದವರು ಪ್ರಶಂಸೆಯ ಮಾತನಾಡಿದ್ದಾರೆ. ಇದು ನಿಜಕ್ಕೂ ಖುಷಿಯ ವಿಚಾರ ಎಂದರು. ಸಿನಿಮಾ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, ನಾನು ಸಿನಿಮಾ ನೋಡಿದ್ದೇನೆ, ನನಗೆ ತುಂಬಾ ಖುಷಿಯಾಗಿದೆ. ಬಹಳ ಸಮಯದ ಬಳಿಕ ಒಂದೊಳ್ಳೆ ಸಿನಿಮಾ ನೋಡಲು ಸಿಕ್ಕಿದೆ ಎಂದರು. ನಟ ಅರವಿಂದ್ ಬೋಳಾರ್ ಮಾತಾಡಿ, ತುಳುವರು ಸಿನಿಮಾ ನೋಡಿ ಗೆಲ್ಲಿಸಿದಲ್ಲಿ ನಮ್ಮ ನಿರ್ಮಾಪಕರ ಶ್ರಮ ಸಾರ್ಥಕವಾಗುತ್ತದೆ ಎಂದು ಹೇಳಿದರು.ವೇದಿಕೆಯಲ್ಲಿ ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್. ಧನರಾಜ್, ನಟರಾದ ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಚಂದ್ರಶೇಖರ ಶೆಟ್ಟಿ, ಚಂದ್ರಹಾಸ ಶೆಟ್ಟಿ, ನಟ ಲಂಚುಲಾಲ್, ವಿಜಯ್ ಶೋಭರಾಜ್ ಪಾವೂರು, ನಟಿ ಮಧುರಾ ಆರ್.ಜೆ., ಪುರುಷೋತ್ತಮ ಭಂಡಾರಿ ಅಡ್ಯಾರ್, ಪ್ರದೀಪ್ ಆಳ್ವ ಕದ್ರಿ, ಗಿರೀಶ್ ಎಂ. ಶೆಟ್ಟಿ ಕಟೀಲು, ಕಿಶೋರ್ ಡಿ. ಶೆಟ್ಟಿ, ದಿವಾಕರ ಶೆಟ್ಟಿ, ಮೋಹನ್ ಕೊಪ್ಪಲ, ಇಸ್ಮಾಯಿಲ್ ಮೂಡುಶೆಡ್ಡೆ, ತಾರಾನಾಥ್ ಶೆಟ್ಟಿ ಬೋಳಾರ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಬಾಳ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಯಶೋಧ ಸಂಜೀವ ಕೋಟ್ಯಾನ್, ರಜನೀಶ್ ಕೋಟ್ಯಾನ್, ವಾತ್ಸಲ್ಯ, ನಿರ್ದೇಶಕ ಹರ್ಷಿತ್ ಸೋಮೇಶ್ವರ, ರೋಜಿತ್ ಪೂಜಾರಿ, ರವಿ ರಾಮಕುಂಜ, ಪುಷ್ಪರಾಜ್ ಬೊಳ್ಳೂರು, ಅಶ್ವಿನಿ ಪ್ರಕಾಶ್, ಕುಡುಪಿ ಅರವಿಂದ ಶೆಣೈ, ವತ್ಸಲ ಲಕ್ಷ್ಮೀ, ರಜನೀಶ್ ಕೋಟ್ಯಾನ್ ಮತ್ತಿತರರು ಇದ್ದರು. ಮಧುರ ಆರ್‌ಜೆ ನಿರೂಪಿಸಿದರು. ಅನರ್ಕಲಿ ತುಳು ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಪಿವಿಆರ್, ಭಾರತ್ ಸಿನಿಮಾಸ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಬೆಳ್ತಂಗಡಿಯಲ್ಲಿ ಭಾರತ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್‌ನಲ್ಲಿ ತೆರೆ ಕಾಣುತ್ತಿದೆ.