ಸಾರಾಂಶ
ಜಗತ್ತಿನಲ್ಲಿ ಭಾರತ ಅತ್ಯಂತ ಹೆಚ್ಚು ಪ್ರಾಚೀನ ಸ್ಮಾರಕ ಹೊಂದಿರುವ ದೇಶ. ಪ್ರತಿ ಹಳ್ಳಿ ಪಟ್ಟಣ, ನಗರ ಪ್ರದೇಶಗಳಲ್ಲಿ ವೈಶಿಷ್ಟ್ಯಪೂರ್ಣವಾದ ಅನೇಕ ಪ್ರಾಚೀನ ಸ್ಮಾರಕಗಳಿವೆ
ಮುಳಗುಂದ: ಪ್ರಾಚೀನ ಕಾಲದ ದೇವಾಲಯಗಳು, ಶಾಸನಗಳಾದಿಯಾಗಿ ಅನೇಕ ಸ್ಮಾರಕಗಳು ಭಾರತೀಯ ಸಂಸ್ಕೃತಿಯ ರಾಯಭಾರಿಗಳೆಂದು ಸ್ಥಳೀಯ ಆರ್.ಎನ್. ದೇಶಪಾಂಡೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾ. ಡಾ. ಆರ್.ಎಂ. ಕಲ್ಲನಗೌಡರ ಹೇಳಿದರು.
ಪಟ್ಟಣದ ಪ್ರಾಚೀನ ದೇವಾಲಯ ಶ್ರೀಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಕಾಲೇಜಿನ ವತಿಯಿಂದ ನಡೆದ ಸ್ವಚ್ಛತಾ ಕಾರ್ಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಜಗತ್ತಿನಲ್ಲಿ ಭಾರತ ಅತ್ಯಂತ ಹೆಚ್ಚು ಪ್ರಾಚೀನ ಸ್ಮಾರಕ ಹೊಂದಿರುವ ದೇಶ. ಪ್ರತಿ ಹಳ್ಳಿ ಪಟ್ಟಣ, ನಗರ ಪ್ರದೇಶಗಳಲ್ಲಿ ವೈಶಿಷ್ಟ್ಯಪೂರ್ಣವಾದ ಅನೇಕ ಪ್ರಾಚೀನ ಸ್ಮಾರಕಗಳಿವೆ. ಅವುಗಳ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳು ತಮ್ಮ ಗ್ರಾಮಗಳಲ್ಲಿರುವ ಸ್ಮಾರಕಗಳನ್ನು ಸಂರಕ್ಷಿಸುವ ಹೊಣೆ ಹೊರಬೇಕು ಎಂದರು. ಈ ವೇಳೆ ದೇವಾಲಯದ ಆವರಣವನ್ನು ವಿದ್ಯಾರ್ಥಿಗಳು ಸ್ವಚ್ಛಗೊಳಿಸುವದರೊಂದಿಗೆ ದೇವಾಲಯ ಹಿರಿಮೆ-ಗರಿಮೆಗಳನ್ನು ಇತಿಹಾಸ ವಿಭಾಗದ ಪ್ರಾಧ್ಯಾಪಕ ಮಾರುತಿ ಹಾಗೂ ಪ್ರೊ. ಕೆ.ಎಂ. ಶಿರೂರ ಅವರಿಂದ ಕೇಳಿ ಮಾಹಿತಿ ಸಂಗ್ರಹಿಸಿದರು. ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಇದ್ದರು.