ಪ್ರಾಚೀನ ದೇವಾಲಯಗಳು ನಮ್ಮ ಸಂಸ್ಕೃತಿ ಪ್ರತೀಕ: ವೀರೇಂದ್ರ ಹೆಗ್ಗಡೆ

| Published : May 04 2024, 12:33 AM IST

ಸಾರಾಂಶ

ಕಡೂರು, ಪ್ರಾಚೀನ ದೇವಾಲಯಗಳು ನಮ್ಮ ಸಂಸ್ಕೃತಿ ಪ್ರತೀಕವಾಗಿದ್ದು. ಐತಿಹಾಸಿಕ ದೇವಸ್ಥಾನಗಳನ್ನು ಮೂಲರೂಪದಲ್ಲಿ ಉಳಿಸಿ ಸಂರಕ್ಷಿಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಬಿಳುವಾಲ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡ ಶ್ರೀ ಕಲ್ಲೇಶ್ವರ ಸ್ವಾಮಿ ದೇವಸ್ಥಾನ

ಕನ್ನಡಪ್ರಭ ವಾರ್ತೆ, ಕಡೂರು

ಪ್ರಾಚೀನ ದೇವಾಲಯಗಳು ನಮ್ಮ ಸಂಸ್ಕೃತಿ ಪ್ರತೀಕವಾಗಿದ್ದು. ಐತಿಹಾಸಿಕ ದೇವಸ್ಥಾನಗಳನ್ನು ಮೂಲರೂಪದಲ್ಲಿ ಉಳಿಸಿ ಸಂರಕ್ಷಿಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಕಡೂರು ತಾಲೂಕಿನ ಬಿಳುವಾಲ ಗ್ರಾಮದಲ್ಲಿ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ನಿಂದ ಜೀರ್ಣೋದ್ಧಾರಗೊಂಡ ಶ್ರೀ ಕಲ್ಲೇಶ್ವರ ಸ್ವಾಮಿ ದೇವಸ್ಥಾನ ಪ್ರವೇಶ ಮತ್ತು ಕಳಶ ಸ್ಥಾಪನೆ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಐತಿಹಾಸಿಕ ದೇವಸ್ಥಾನಗಳನ್ನು ಮೂಲರೂಪದಲ್ಲಿ ಉಳಿಸಿ ಜೀರ್ಣೋದ್ಧಾರ ಮಾಡುವ ಕಾರ್ಯವನ್ನು ಟ್ರಸ್ಟ್ ಗ್ರಾಮಸ್ಥರ ಸಹಯೋಗದಲ್ಲಿ ಮಾಡುತ್ತಿದೆ. ಇದುವರೆವಿಗೆ 370 ದೇವಸ್ಥಾನಗಳನ್ನು ಪುನರುತ್ಥಾನಗೊಳಿಸಲಾಗಿದೆ. ಜೊತೆಗೆ ಕೆರೆಗಳ ಪುನರುಜ್ಜೀವನ ಮಾಡಲಾಗುತ್ತಿದೆ ಎಂದರು.ಕಡೂರು ತಾಲೂಕಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಬಹಳಷ್ಟು ಸಾಮಾಜಿಕ ಕಾರ್ಯಗಳ ಜೊತೆ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ ಆರ್ಥಿಕ ಸಹಾಯ ಮತ್ತು ಮಾರ್ಗದರ್ಶನ ನೀಡುತ್ತಿದೆ. ಧರ್ಮದ ಪುನರುತ್ಥಾವಾಗಬೇಕು. ಆ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಸದಾ ಶ್ರಮಿಸುತ್ತದೆ ಎಂದರು. ಮಾಜಿ ಶಾಸಕ ವೈಎಸ್.ವಿ.ದತ್ತ ಮಾತನಾಡಿ, ಸಂಸ್ಕಾರಯುತ ಬದುಕು ರೂಪಿಸಿಕೊಳ್ಳಲು ದೇವಸ್ಥಾನಗಳು ಅವಶ್ಯಕ. ದೇವಸ್ಥಾನ ನಮ್ಮನ್ನು ಬದಲಾವಣೆಗೆ ಸಿದ್ಧಗೊಳಿಸುವ ಕೇಂದ್ರಗಳಾಗಬೇಕು. ಈ ನಿಟ್ಟಿನಲ್ಲಿ ಗ್ರಾಮಸ್ಥರೆಲ್ಲ ಸೇರಿ ದೇವಸ್ಥಾನ ಪುನರುಜ್ಜೀವನಗೊಳಿಸಿರುವುದು ಶ್ಲಾಘನೀಯ ಎಂದರು. ಶ್ರೀ ಕಲ್ಲೇಶ್ವರಸ್ವಾಮಿ ಸೇವಾ ಸಂಘದ ಅಧ್ಯಕ್ಷ ಬಿ.ಕೆ.ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಹೊಸದುರ್ಗ ಕನಕ ಗುರುಪೀಠದ ಶ್ರೀಈಶ್ವರಾನಂದಪುರಿ ಸ್ವಾಮೀಜಿ, ಭಗೀರಥ ಪೀಠದ ಡಾ.ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ಯಳನಡು ಮಠದ ಜ್ಞಾನಪ್ರಭು ಸಿದ್ದರಾಮದೇಶಿಕೇಂದ್ರ ಸ್ವಾಮೀಜಿ ಮಾತನಾಡಿದರು. ಧರ್ಮೋತ್ಥಾನ ಟ್ರಸ್ಟ್ ನ ಪ್ರಶಾಂತ್ ಚಿಪ್ರಗುತ್ತಿ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪ್ರಾದೇಶಿಕ ನಿರ್ದೇಶಕಿ ಗೀತಾ, ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರಾ, ತಾಲೂಕು ಯೋಜನಾಧಿಕಾರಿ ಪ್ರಕಾಶ್ ರಾವ್, ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಲಕ್ಷ್ಮಿ, ಭರತ್ ಕೆಂಪರಾಜು ಟಿ.ಆರ್. ಲಕ್ಕಪ್ಪ ಮತ್ತಿತರರು ಇದ್ದರು,

3ಕೆಕೆಡಿಯು3.

ಕಡೂರು ತಾಲೂಕಿನ ಬಿಳುವಾಲ ಗ್ರಾಮದಲ್ಲಿ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ನಿಂದ ಜೀರ್ಣೋದ್ಧಾರಗೊಂಡ ಶ್ರೀ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ಪ್ರವೇಶ ಮತ್ತು ಕಳಶ ಸ್ಥಾಪನೆ ಕಾರ್ಯಕ್ರಮದ ಧಾರ್ಮಿಕ ಸಭೆ ನಡೆಯಿತು.