ಸಾರಾಂಶ
ಶ್ರೀ ಕಾಲಭೈರವೇಶ್ವರ ಸ್ವಾಮಿ ದೇಗುಲದಲ್ಲಿ ನಡೆದ ವಿಶೇಷ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.
ನಾಗಮಂಗಲ: ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭಾನುವಾರ ಬೆಳಗ್ಗೆ ಆಂಧ್ರಪ್ರದೇಶದ ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಭೇಟಿ ನೀಡಿ ಶ್ರೀಮಠದ ಶ್ರೀ ಕಾಲಭೈರವೇಶ್ವರ ಸ್ವಾಮಿ ಸೇರಿದಂತೆ ಕ್ಷೇತ್ರಾಧಿದೇವತೆಗಳಿಗೆ ಹಾಗೂ ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದುಕೊಂಡರು. ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಆಂಧ್ರಪ್ರದೇಶದ ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಅವರನ್ನು ಶ್ರೀ ಮಠದ ಸಂಪ್ರದಾಯದಂತೆ ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು. ಬಳಿಕ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇಗುಲದಲ್ಲಿ ನಡೆದ ವಿಶೇಷ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ನಂತರ ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ಮಹಾಗದ್ದುಗೆಗೆ ಪೂಜೆ ಸಲ್ಲಿಸಿದರು. ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳೊಂದಿಗೆ ಕೆಲ ಹೊತ್ತು ಸಮಾಲೋಚನೆ ನಡೆಸಿದರು.