ಸಾರಾಂಶ
ಆನೇಕಾಲು ರೋಗ ನಿಯಂತ್ರಣ ಸಲುವಾಗಿ ಸಾಮೂಹಿಕ ಔಷಧಿ ನುಂಗಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ಎಲ್ಲಾ ಇಲಾಖೆ ಹಾಗೂ ಸಮುದಾಯದವರು ಔಷಧಿ ಸೇವಿಸಿ ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.
ಸಿಂದಗಿ: ರಾಷ್ಟ್ರೀಯ ಆನೇಕಾಲು ರೋಗ ನಿಯಂತ್ರಣ ಕಾರ್ಯಕ್ರಮದಡಿ ಸಾಮೂಹಿಕ ಔಷಧಿ ನುಂಗಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ದಿವಾಣಿ ನ್ಯಾಯಾಲಯದ ಆವರಣದಲ್ಲಿ ತಾಲೂಕ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಐ.ಪಿ.ನಾಯಕ ಮಾತನಾಡಿ, ಆನೇಕಾಲು ರೋಗ ನಿಯಂತ್ರಣ ಸಲುವಾಗಿ ಸಾಮೂಹಿಕ ಔಷಧಿ ನುಂಗಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ಎಲ್ಲಾ ಇಲಾಖೆ ಹಾಗೂ ಸಮುದಾಯದವರು ಔಷಧಿ ಸೇವಿಸಿ ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.
ನ್ಯಾಯಾಧೀಶ ಮಾಹಾಂತೇಶ ಭೂಸಗೋಳ ಮಾತನಾಡಿ, ಆರೋಗ್ಯ ಮತ್ತು ಸಾಮಾಜಿಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕಿದ್ದು, ಮಾತ್ರೆ ನುಂಗುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತೆ ಹೇಳಿದರು.ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಮಾತನಾಡಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ವೈ.ಚೌಡಕಿ, ಆರೋಗ್ಯಾಧಿಕಾರಿ ಡಾ.ಎ.ಎ.ಮಾಗಿ, ನ್ಯಾಯಾಧೀಶರಾದ ನಾಗೇಶ ಮೋಗೆರ, ಹರೀಶ ಜಾಧವ ,ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ದೊಡಮನಿ, ವಕೀಲರು, ನ್ಯಾಯಾಲಯ ಸಿಬ್ಬಂದಿ ಮತ್ತು ಆರೋಗ್ಯ ಇಲಾಖೆಯ ವಿರೇಂದ್ರ ಪವಾಡೆ, ಪ್ರಭು ಜಂಗಿನಮಠ ಸೇರಿದಂತೆ ಸಾರ್ವಜನಿಕರು ಉಪಸ್ಥಿತಿರಿದ್ದರು.