ಕಾಪು: ಕಾಪು ಪುರಸಭಾ ವ್ಯಾಪ್ತಿಯ ಬೀಡುಬದಿ ವಾರ್ಡಿನ ಕಾಂಚನ್ ಮೂಲಸ್ಥಾನ ಮತ್ತು ಮೂಳೂರು ವಾರ್ಡಿನ ಶ್ರೀ ಸರ್ವೇಶ್ವರ ಬೊಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನ ಬಳಿ ತಲಾ 20 ಲಕ್ಷ ರು. ವೆಚ್ಚದ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುರುವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಸದಸ್ಯರಾದ ಅನಿಲ್ ಕುಮಾರ್, ನೂರೂದ್ದೀನ್, ವಹೀದಾ, ಶ್ರೀ ಸರ್ವೇಶ್ವರ ಬೊಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಅಡ್ಯಂತಾಯ, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷ ಧೀರೇಶ್ ಬಿ ಮೂಳೂರು, ಅಂಗನವಾಡಿ ಮೇಲ್ವಿಚಾರಕಿ ಪೂರ್ಣಿಮಾ, ಅಂಗನವಾಡಿ ಶಿಕ್ಷಕಿ ಸುಲೋಚನಾ, ಅಂಗನವಾಡಿ ಸಹಾಯಕಿ ಶಾರದಾ, ರೇವತಿ, ಸ್ಥಳೀಯರಾದ ವಿನಯ ಎ ಪೂಜಾರಿ, ಚಿತ್ತನ್ ಮೂಳೂರು ಮುಂತಾದವರು ಉಪಸ್ಥಿತರಿದ್ದರು.
ಅಂಗನವಾಡಿ ಕಟ್ಟಡ ಕಾಮಗಾರಿ ಗುದ್ದಲಿ ಪೂಜೆ
ಕಾಪು ಪುರಸಭಾ ವ್ಯಾಪ್ತಿಯ ಬೀಡುಬದಿ ವಾರ್ಡಿನ ಕಾಂಚನ್ ಮೂಲಸ್ಥಾನ ಮತ್ತು ಮೂಳೂರು ವಾರ್ಡಿನ ಶ್ರೀ ಸರ್ವೇಶ್ವರ ಬೊಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನ ಬಳಿ ತಲಾ 20 ಲಕ್ಷ ರು. ವೆಚ್ಚದ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುರುವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.