ಸಾರಾಂಶ
ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಮನಸ್ಸಿನಲ್ಲಿ ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯ ತುಂಬಬೇಕು
ಕುಷ್ಟಗಿ: ಮಕ್ಕಳಲ್ಲಿ ಮಾನವೀಯ ಬಾಂಧವ್ಯ ವೃದ್ಧಿಸಲು ಅಂಗನವಾಡಿ ಕೇಂದ್ರಗಳು ಪೂರಕವಾಗಲಿವೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.
ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ಕೆಕೆಆರ್‌ಡಿಬಿ ಮೆಗಾ ಮೈಕ್ರೋ ಯೋಜನೆಯ ₹15ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು.ಇಂದಿನ ಕಾಲಘಟ್ಟದಲ್ಲಿ ಮಕ್ಕಳಲ್ಲಿ ಮಾನವೀಯ ಮೌಲ್ಯ ಕಡಿಮೆಯಾಗುತ್ತಿದ್ದು,ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಮನಸ್ಸಿನಲ್ಲಿ ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯ ತುಂಬಬೇಕು ಎಂದರು.
ತುಂಗಭದ್ರಾ ಕಾಡಾ ನಿಗಮ ಅಧ್ಯಕ್ಷ ಹಸನಸಾಬ್ ದೋಟಿಹಾಳ ಮಾತನಾಡಿ, ಮಕ್ಕಳಿಗೆ ಮನೆಯ ವಾತಾವರಣದಲ್ಲಿ ಪೌಷ್ಟಿಕ ಆಹಾರದೊಂದಿಗೆ ಸಂಸ್ಕಾರಯುತ ಶಿಕ್ಷಣ ಒದಗಿಸಲು ಅಂಗನವಾಡಿ ಕೇಂದ್ರಗಳು ಸಹಕಾರಿಯಾಗಿದೆ ಎಂದ ಅವರು, ಅಂಗನವಾಡಿಯಲ್ಲಿ ಕಲಿಯುವ ಮಕ್ಕಳು ತಮ್ಮ ವಿದ್ಯಾಭ್ಯಾಸದ ಭವಿಷ್ಯ ಇಲ್ಲಿಂದಲೇ ಪ್ರಾರಂಭಿಸುತ್ತಾರೆ ಅಂಗನವಾಡಿ ಕೇಂದ್ರಗಳು ಮಕ್ಕಳ ಆರಂಭಿಕ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸುವಂತಾಗಲು ಸರ್ಕಾರ ಹೆಚ್ಚು ಕಾಳಜಿ ವಹಿಸುತ್ತಿದ್ದು ಅಂಗನವಾಡಿಯ ಶಿಕ್ಷಕಿಯರು ಮಕ್ಕಳ ವಿದ್ಯಾಭ್ಯಾಸಕ್ಕೆ ಭದ್ರ ಬುನಾದಿಯಾಗವಂತೆ ಶಿಕ್ಷಣ ನೀಡಬೇಕು ಎಂದು ತಿಳಿಸಿದರು.ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯಲ್ಲಮ್ಮ ಹಂಡಿ ಮಾತನಾಡಿ, ತಾಲೂಕಿನಲ್ಲಿ ಅಂಗನವಾಡಿ ಕೇಂದ್ರಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ಕಾರ್ಯಕರ್ತೆಯರು ನಿರೀಕ್ಷೆಗೂ ಮೀರಿ ಉತ್ತಮ ಕೆಲಸ ನಿರ್ವಹಿಸುತ್ತಿರುವುದರಿಂದ ಕೇಂದ್ರಗಳು ಹೆಚ್ಚು ಕ್ರಿಯಾಶೀಲತೆಯಿಂದ ಕೂಡಿವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದೋಟಿಹಾಳ ಗ್ರಾಪಂ ಅಧ್ಯಕ್ಷ ಮಹೇಶ ಕಾಳಗಿ, ಪಿಡಿಒ ನಾಗರತ್ನ ಮ್ಯಾಳಿ, ಅಂಗನವಾಡಿ ಸೂಪರವೈಸರ್ ಅನ್ನಪೂರ್ಣ ಪಾಟೀಲ, ಶೋಭಾ ನಾಯಕ, ಕಲಾವತಿ, ಶಕುಂತಲಾ ಪೂಜಾರ, ಗ್ರಾಪಂ ಸದಸ್ಯರು, ಮುಖಂಡರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಇದ್ದರು.ಪೂಜಾ ಕಾರ್ಯವನ್ನು ಈಶ್ವರಸ್ವಾಮಿ ದೇವಾಂಗಮಠ ನಿರ್ವಹಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))