ಸೇವೆ ಕಾಯಂಗೆ ಆಗ್ರಹಿಸಿ ಅಂಗನವಾಡಿ ನೌಕರರ ಧರಣಿ

| Published : Dec 18 2024, 12:48 AM IST

ಸೇವೆ ಕಾಯಂಗೆ ಆಗ್ರಹಿಸಿ ಅಂಗನವಾಡಿ ನೌಕರರ ಧರಣಿ
Share this Article
  • FB
  • TW
  • Linkdin
  • Email

ಸಾರಾಂಶ

ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಟಿಕ ಆಹಾರಕ್ಕೆ ಜಿ.ಎಸ್.ಟಿ. ಹಾಕಬಾರದು ಘಟಕ ವೆಚ್ಚ ಹೆಚ್ಚಳಮಾಡಿ ಹಿಂದಿನಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೆನು ಅಂತಿಮಗೊಳ್ಳುವ ವ್ಯವಸ್ಥೆ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಸೌಲಭ್ಯ ನೀಡಬೇಕು ಖಾಲಿಹುದ್ದೆಗಳಿಗೆ ಮೂರು ತಿಂಗಳೊಳಗಾಗಿ ನೇಮಕಾತಿಯಾಗಬೇಕು.

ಕನ್ನಡಪ್ರಭ ವಾರ್ತೆ ಕೋಲಾರಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಸೇವೆ ಕಾಯಂ ಮಾಡಬೇಕು. ಗ್ರಾಚ್ಯುಟಿ ಹಣ ಬಿಡುಗಡೆ, ಗೌರವಧನ ೧೫ ಸಾವಿರಕ್ಕೆ ಹೆಚ್ಚಿಸಬೇಕು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಂಗಳವಾರದಿಂದ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಂದೆ ಅಂಗನವಾಡಿ ನೌಕರರು ಅಹೋರಾತ್ರಿ ಪ್ರತಿಭಟನೆ ನಡೆಸಿದರು. ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಎನ್ ಅಂಜಲಮ್ಮ ಮಾತನಾಡಿ, ಅಂಗನವಾಡಿ ನೌಕರರು ನಿವೃತ್ತಿಯಾದವರಿಗೆ ಮಾಸಿಕ ೧೦ ಸಾವಿರ ಪಿಂಚಣಿ ನೀಡಬೇಕು. ಎಲ್ಲ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರತ್ಯೇಕ ಇಲಾಖೆ ಆಗಬೇಕು. ಖಾಲಿ ಹುದ್ದೆಗಳಿಗೆ ೩ ತಿಂಗಳೊಳಗೆ ನೇಮಕಾತಿ ಮಾಡಬೇಕು, ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ವರ್ಗ ೩ ಮತ್ತು ೪ ಎಂದು ಪರಿಗಣಿಸಿ ಕಾಯಂ ಮಾಡಬೇಕು ಎಂದು ಒತ್ತಾಯಿಸಿದರು.ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿ

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕಲ್ಪನಾ ಮಾತನಾಡಿ, ನೌಕರರಿಗೆ ಕೂಡಲೇ ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಬೇಕು ಜೊತೆಗೆ ಎಲ್ಲಾ ನೌಕರರಿಗೆ ಅನ್ವಯಿಸಬೇಕು. ೨೦೨೩ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದಂತೆ ೧೫ ಸಾವಿರ ಗೌರವಧನ ಹೆಚ್ಚಿಸಬೇಕು. ನಿವೃತ್ತಿಯಾದವರಿಗೆ ಇಡಿಗಂಟು ಅಥವಾ ಎನ್.ಪಿ.ಎಸ್. ಹಣವನ್ನು ೧೦ ಸಾವಿರ ಮಾಸಿಕ ಪಿಂಚಣಿಯನ್ನಾಗಿ ನೀಡಬೇಕು. ಐ.ಸಿ.ಡಿ.ಎಸ್.ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಬೇಕು. ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಟಿಕ ಆಹಾರಕ್ಕೆ ಜಿ.ಎಸ್.ಟಿ. ಹಾಕಬಾರದು ಘಟಕ ವೆಚ್ಚ ಹೆಚ್ಚಳಮಾಡಿ ಹಿಂದಿನಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೆನು ಅಂತಿಮಗೊಳ್ಳುವ ವ್ಯವಸ್ಥೆ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು ಖಾಲಿಹುದ್ದೆಗಳಿಗೆ ಮೂರು ತಿಂಗಳೊಳಗಾಗಿ ನೇಮಕಾತಿಯಾಗಬೇಕು ಇಲ್ಲದಿದಲ್ಲಿ ಅಧಿಕಾವಧಿ ವೇತನ (ಓವರ್ ಟೈಮ್) ಕೊಡಬೇಕು ಎಂದರು.

ಸಹಾಯಕಿಯರ ನೇಮಕ

ಸಹಾಯಕಿ ಇಲ್ಲದ ಅಂಗನವಾಡಿ ಕೇಂದ್ರಗಳಲ್ಲಿ ಟೇಕ್ ಹೋಮ್ ಕೊಡಬೇಕು ಸಹಾಯಕಿಯನ್ನು ನೇಮಕ ಮಾಡಿಕೊಳ್ಳುವ ಅಧಿಕಾರ ಕಾರ್ಯಕರ್ತೆಗೆ ಕೊಡಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸುವತನಕ ಸಹಾಯಕಿಯನ್ನು ಕೊಡಬೇಕು ಮತ್ತು ಪೂರ್ಣ ಕಾರ್ಯಕರ್ತೆಗೆ ಕೊಡುವಷ್ಟು ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ, ಕಾರ್ಮಿಕ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಎಂ.ವಿಜಯಕೃಷ್ಣ, ಸಂಘಟನೆಯ ಜಿಲ್ಲಾ ಖಜಾಂಚಿ ಸುಜಾತ, ತಾಲೂಕು ಖಜಾಂಚಿ ಲಕ್ಷ್ಮೀದೇವಿ, ಮುಖಂಡರಾದ ಮಮತ, ಪುಷ್ಪಾವತಿ, ವಸಂತ, ಇಂದ್ರಾಣಿ, ಶಶಿಕಲಾ, ಅಮುದಾ, ರತ್ನಮ್ಮ ಇದ್ದರು.