ಸರ್ಕಾರದಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಜಾರಿಗೊಳಿಸಿದ್ದು, ಈ ಯೋಜನೆ ಸಮರ್ಪಕ ಅನುಷ್ಠಾನಗೊಳಿಸುವಲ್ಲಿ ಮಹಿಳಾ ಮೇಲ್ವಿಚಾರಕಿಯರ ಪಾತ್ರ ಮಹತ್ವದ್ದಾಗಿದೆ ಎಂದು ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖರ ಹೇಳಿದರು.

ಹಾವೇರಿ: ಸರ್ಕಾರದಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಜಾರಿಗೊಳಿಸಿದ್ದು, ಈ ಯೋಜನೆ ಸಮರ್ಪಕ ಅನುಷ್ಠಾನಗೊಳಿಸುವಲ್ಲಿ ಮಹಿಳಾ ಮೇಲ್ವಿಚಾರಕಿಯರ ಪಾತ್ರ ಮಹತ್ವದ್ದಾಗಿದೆ ಎಂದು ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖರ ಹೇಳಿದರು. 

ಜಿಲ್ಲಾ ಪಂಚಾಯಿತಿ ಸಭಾಂಗಣ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಹಾಗೂ ಮೇಲ್ವಿಚಾರಕಿಯರ ಸಭೆ ನಡೆಸಿ ಅವರು ಮಾತನಾಡಿದರು.ಸಮಾಜದಲ್ಲಿ ಉತ್ತಮ ಪ್ರಜೆಗಳನ್ನು ರೂಪಿಸುವುದು ಅಂಗನವಾಡಿ ಕಾರ್ಯಕರ್ತೆ ಮತ್ತು ಮೇಲ್ವಿಚಾರಕಿಯರ ಗುರುತರ ಜವಾಬ್ದಾರಿಯಾಗಿದೆ. ಅಂಗನವಾಡಿ ಕೇಂದ್ರಗಳ ನ್ಯೂನತೆಗಳನ್ನು ಸರಿಪಡಿಸಲು ಮೇಲಿಂದ ಮೇಲೆ ಮೇಲ್ವಿಚಾರಕಿಯರು ಅಂಗನವಾಡಿ ಕೇಂದ್ರಗಳಿಗೆ ಭೇಟಿ ಮಾಡಿ ಸುಧಾರಣೆಗೆ ಶ್ರಮಿಸಬೇಕು ಎಂದು ಕರೆ ನೀಡಿದರು. 

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದಾರ್ತಿ, ಜಿಲ್ಲಾ ನಿರೂಪಣಾಧಿಕಾರಿ ಅಣ್ಣಪ್ಪ ಹೆಗಡೆ, ಲೋಕಾಯುಕ್ತ ಇನ್ಸಪೆಕ್ಟರ್‌ಗಳಾದ ಮಂಜುನಾಥ ಹಾಗೂ ಆಂಜನೇಯ, ಜಿಲ್ಲೆಯ ಎಲ್ಲ ಶಿಶು ಅಭಿವೃಧ್ಧಿಯೋಜನಾಧಿಕಾರಿಗಳು, ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.