ಸಾರಾಂಶ
ತಾಲೂಕು ಕಚೇರಿಗೆ ತೆರಳಿ ಗ್ರೇಡ್ 2 ತಹಸೀಲ್ದಾರ್ ಬಿ.ವಿ.ಕುಮಾರ್ ಹಾಗೂ ಸಿಡಿಪಿಒ ಕಚೇರಿಯ ಪ್ರಜ್ವಲ್ ರವರಿಗೆ ವಿವಿಧ ಹಕ್ಕೊತ್ತಾಯಗಳ ಮನವಿ ಸಲ್ಲಿಸಿದರು.
ಕೊಳ್ಳೇಗಾಲ: ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತರು ಬುಧವಾರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಪಟ್ಟಣದ ಮುರಡಿಗುಡ್ಡದ ಮುಂಭಾಗದಲ್ಲಿ ಜಮಾಯಿಸಿದ್ದ ಸಿಐಟಿಯು ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಘೋಷಣೆ ಮೂಲಕ ಪ್ರಮುಖ ರಸ್ತೆಗಳಲ್ಲಿ ತೆರಳಿ ಪ್ರತಿಭಟಿಸಿದರು. ಬಳಿಕ ತಾಲೂಕು ಕಚೇರಿಗೆ ತೆರಳಿ ಗ್ರೇಡ್ 2 ತಹಸೀಲ್ದಾರ್ ಬಿ.ವಿ.ಕುಮಾರ್ ಹಾಗೂ ಸಿಡಿಪಿಒ ಕಚೇರಿಯ ಪ್ರಜ್ವಲ್ ರವರಿಗೆ ವಿವಿಧ ಹಕ್ಕೊತ್ತಾಯಗಳ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸಿಐಟಿಯು ಸಂಘಟನೆಯ ಅಧ್ಯಕ್ಷೆ ಉಮಾದೇವಿ, ಉಪಾಧ್ಯಕ್ಷೆ ಮರಿಯಮ್ಮ, ಕಾರ್ಯದರ್ಶಿ ಶಾಂತಮ್ಮ , ಸಹಕಾರ್ಯದರ್ಶಿ ಜಿ.ಶೋಭ, ಸವಿತ, ನಳಿನಿ, ವಿಜಯ, ಸುನೀತ, ಜಯಮ್ಮ, ಲತಾ ಇನ್ನಿತರರಿದ್ದರು