ಅಂಗನವಾಡಿ ಕಾರ್ಯಕರ್ತೆಯರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ: ಆನಂದ್‌

| Published : Jul 11 2024, 01:35 AM IST

ಅಂಗನವಾಡಿ ಕಾರ್ಯಕರ್ತೆಯರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ: ಆನಂದ್‌
Share this Article
  • FB
  • TW
  • Linkdin
  • Email

ಸಾರಾಂಶ

ಕಡೂರು, ತಾಯಿ ಸ್ವರೂಪದಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ ಅಂಗನವಾಡಿ ಕಾರ್ಯಕರ್ತೆಯರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಕನ್ನಡಪ್ರಭ ವಾರ್ತೆ,ಕಡೂರು

ತಾಯಿ ಸ್ವರೂಪದಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ ಅಂಗನವಾಡಿ ಕಾರ್ಯಕರ್ತೆಯರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು. ಪೋಷಣ್ ಅಭಿಯಾನದಡಿ ಪಟ್ಟಣದ ಶ್ರೀಪ್ರಸನ್ನ ಗಣಪತಿ ಪೆಂಡಾಲಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್ ಮತ್ತು ಗ್ರೋತ್ ಮಾನಿಟರಿಂಗ್ ಯಂತ್ರಗಳನ್ನು ವಿತರಿಸಿ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ಅನೇಕ ಸೌಲಭ್ಯ ನೀಡಿದೆ. ಅಲ್ಲದೆ ಗ್ರಾಚ್ಯುಯಿಟಿ ಸೌಲಭ್ಯ ನೀಡಿರುವುದು ಅವರ ಆತ್ಮಸ್ಥೈರ್ಯ ಹೆಚ್ಚಿಸಿದೆ. ಒತ್ತಡಗಳ ನಡುವೆ ಕಡಿಮೆ ಸಂಭಾವನೆ ದೊರೆಯುತ್ತಿದ್ದರೂ ಸರ್ಕಾರದ ಸೌಲಭ್ಯವನ್ನು ಅರ್ಹರಿಗೆ ತಲುಪಿಸಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಲೋಕೇಶ್ ಮಾತನಾಡಿ, ಹೆಣ್ಣು ಮಕ್ಕಳ ಮತ್ತು ಅಂಗನ ವಾಡಿ ಕಾರ್ಯಕರ್ತೆಯರ ಸಬಲೀಕರಣಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮ ರೂಪಿಸಿದೆ. ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಕಾರ್ಯನಿರ್ವಹಣೆಗೆ ಅನುಕೂಲವಾಗುವಂತೆ ಸ್ಮಾರ್ಟ್ ಫೋನ್ ಮತ್ತು ಹಲವಾರು ಕಾರ್ಯಕ್ರಮಗಳ ಪ್ರಗತಿ ಗಮನಿಸಲು ಯಂತ್ರಗಳನ್ನು ವಿತರಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದಿದ ಇಲಾಖೆ ಪ್ರಥಮ ದರ್ಜೆ ಸಹಾಯಕಿ ಹೇಮಾವತಿ ಸೇರಿದಂತೆ ಉತ್ತಮವಾಗಿ ಕಾರ್ಯ ನಿರ್ವಹಿಸಿದ 16 ಅಂಗನವಾಡಿ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. 462 ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 12 ಸಾವಿರ ವೆಚ್ಚದ ಮೊಬೈಲ್ ಫೋನ್ ಗಳನ್ನು ವಿತರಿಸಲಾಯಿತು. ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್, ಸಿಡಿಪಿಒ ಶಿವಪ್ರಕಾಶ್, ಕೆ.ಜಿ.ಶ್ರೀನಿವಾಸಮೂರ್ತಿ, ಎನ್.ಎಚ್. ನಂಜುಂಡ ಸ್ವಾಮಿ ಸೇರಿದಂತೆ ಇಲಾಖೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು. -- ಬಾಕ್ಸ್ ---ಬಡವರಿಗೆ ಸೌಲಭ್ಯ ನೀಡಿದ ಮಾತ್ರಕ್ಕೆ ಇತರೆ ಅಭಿವೃದ್ಧಿಗೆ ಹಣವಿಲ್ಲದೆ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ವಿರೋಧ ಪಕ್ಷದವರು ಹುರುಳಿಲ್ಲದ ಆರೋಪ ಮಾಡುತ್ತಾರೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ನೀಡುವುದಕ್ಕೂ ಆಕ್ಷೇಪಿಸುವ ಇವರು ತಮ್ಮ ಅವಧಿಯಲ್ಲಿ ಯಾವುದೇ ಗ್ಯಾರಂಟಿಗಳಿಲ್ಲದೆ ಉಳಿತಾಯವಾಗುತ್ತಿದ್ದ ಹಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸೌಲಭ್ಯ ನೀಡಲು ಆಗುತ್ತಿರಲಿಲ್ಲವೆ? ಈಗ ನಮ್ಮ ಸರ್ಕಾರ ಗ್ರಾಚ್ಯುಯಿಟಿ ಸೌಲಭ್ಯ ನೀಡಿದೆ.

10ಕೆಕೆಡಿಯು3.

ಕಡೂರಿನ ಶ್ರೀಗಣಪತಿ ಪೆಂಡಾಲಿನಲ್ಲಿ ಪೋಷಣ್ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್ ಮತ್ತು ಗ್ರೋತ್ ಮಾನಿಟರಿಂಗ್ ಯಂತ್ರಗಳನ್ನು ವಿತರಿಸಲಾಯಿತು.