ಬಾಲಗೌರವ ಪ್ರಶಸ್ತಿ ಬೆಳಗಾವಿಯ ಸುವರ್ಣಸೌಧದ ಸಭಾಂಗಣದ ಭವ್ಯ ವೇದಿಕೆಯಲ್ಲಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ
ಕೊಪ್ಪಳ: ಕೊಪ್ಪಳದ ಅನಿಕೇತ ರಾಜೇಶ ಬಳ್ಳಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯಿಂದ ನೀಡಲಾಗುವ ೨೦೨೩-೨೪ನೇ ಸಾಲಿನ ಪ್ರತಿಷ್ಠಿತ ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿ ಬೆಳಗಾವಿಯ ಸುವರ್ಣಸೌಧದ ಸಭಾಂಗಣದ ಭವ್ಯ ವೇದಿಕೆಯಲ್ಲಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಮಾರಂಭದ ವೇದಿಕೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮತ್ತು ಇತರ ಗಣ್ಯರು,ಅಧಿಕಾರಿಗಳು ಉಪಸ್ಥಿತರಿದ್ದರು.ನಗರದ ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ೭ನೇ ತರಗತಿ ಓದುತ್ತಿರುವ ಅನಿಕೇತ ಬಳ್ಳಾರಿ ನಮ್ಮಭಾಷೆ - ನಮ್ಮ ಕನ್ನಡ ಸಿನಿಮಾದಲ್ಲಿ ಬಾಲನಟನಾಗಿ ನಟಿಸಿದ್ದಾನೆ. ಉತ್ತಮ ಈಜುಪಟು ಮತ್ತು ನೃತ್ಯ ಪಟುವಾಗಿದ್ದಾನೆ. ಅನೀಕೇತ ಬಳ್ಳಾರಿಯ ಬಹುಮುಖ ಪ್ರತಿಭೆ ಗುರುತಿಸಿ ಕ್ರೀಡಾ ಕ್ಷೇತ್ರದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.