ಸಾರಾಂಶ
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ನೀಡುವ ಅಶ್ರಫ್ ಶಾ ಮಂತೂರು ದತ್ತಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಪತ್ರಕರ್ತ ಅನಿಲ್ ಎಚ್.ಟಿ. ಆಯ್ಕೆಯಾಗಿದ್ದಾರೆ.ಕಾಸರಗೋಡಿನ ಉದ್ಯಮಿ, ಸಮಾಜಸೇವಕ ಅಶ್ರಫ್ ಶಾ ಮಂತೂರು ಈ ದತ್ತನಿಧಿ ಪ್ರಶಸ್ತಿ ಸ್ಥಾಪಿಸಿದ್ದಾಗಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕತ೯ರ ಕ್ಷೇಮಾಭಿವೖದ್ದಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ

ಅನಿಲ್ ಎಚ್.ಟಿ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಈವರೆಗೆ 60 ಪ್ರಶಸ್ತಿಗಳನ್ನು ಪಡೆದಿದ್ದು, ಈ ಸಾಧನೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ರವಿ ಮಾಹಿತಿ ನೀಡಿದ್ದಾರೆ.ಪ್ರಶಸ್ತಿ 10 ಸಾವಿರ ರು, ನಗದು, ಪ್ರಶಸ್ತಿ ಪತ್ರವನ್ನು ಹೊಂದಿದ್ದು, ಜು.13 ರಂದು ಬೆಳಗ್ಗೆ 10.30ಕ್ಕೆ ಕಾಸರಗೋಡು ಬಳಿಯ ಸೀತಂಗೋಳಿ ಗ್ರಾಮದ ಅಲಯನ್ಸ್ ಸಭಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.
ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಅರಣ್ಯ ಸಚಿವ ಈಶ್ವರಖಂಡ್ರೆ, ಉಸಭಾಪತಿ ಎಂ.ಕೆ. ಪ್ರಾಣೇಶ್, ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಅನೇಕ ಗಣ್ಯರು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ, ಸಮಾರಂಭದಲ್ಲಿ ಇತರ ದತ್ತಿನಿಧಿ ಪ್ರಶಸ್ತಿಗಳಿಗೆ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್, ಚೇತನಾ ಬೆಳೆಗೆರೆ, ಎಚ್. ಮದನ್ ಗೌಡ, ಸುಬ್ರಾಯ ಭಟ್ ಬಕ್ಕಳ ಆಯ್ಕೆಯಾಗಿದ್ದಾರೆ.ಕಳೆದ ಎರಡು ದಶಕಗಳಿಂದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘವು ಕನ್ನಡ ಭಾಷೆ, ಸಂಸ್ಕೖತಿ, ಕಲೆಗಳ ಸಂರಕ್ಷಣೆಗಾಗಿ ಕರ್ನಾಟಕ - ಕೇರಳದ ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘವು ಕನ್ನಡ ಮತ್ತು ಮಲಯಾಳ ಪತ್ರಕರ್ತರ ಸ್ನೇಹಸೇತುವಾಗಿಯೂ ಖ್ಯಾತಿ ಪಡೆದಿದೆ.