ಅಂಜಲಿ, ನೇಹಾ ಹಂತಕರನ್ನು ಎನ್‌ಕೌಂಟರ್‌ ಮಾಡಿ

| Published : May 18 2024, 12:40 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಹುಬ್ಬಳ್ಳಿಯಲ್ಲಿ ನಡೆದ ಯುವತಿ ಅಂಜಲಿ ಅಂಬಿಗೇರ ಕೊಲೆಗಾರರನಿಗೆ ಗಲ್ಲು ‌ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಶುಕ್ರವಾರ ಬೆಳಗಾವಿ ಜಿಲ್ಲಾ ಕೋಳಿ ಬೆಸ್ತ ಸಮಾಜ ಸಂಘದಿಂದ ಚನ್ನಮ್ಮ ವೃತ್ತದಲ್ಲಿ ಬೃಹತ್‌ ಮಾನವ ಸರಪಳಿ ನಿರ್ಮಿಸಿ ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.ಚನ್ನಮ್ಮ ವೃತ್ತದಿಂದ ಪ್ರತಿಭಟನಾ ರ್‍ಯಾಲಿ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಹುಬ್ಬಳ್ಳಿಯಲ್ಲಿ ನಡೆದ ಯುವತಿ ಅಂಜಲಿ ಅಂಬಿಗೇರ ಕೊಲೆಗಾರರನಿಗೆ ಗಲ್ಲು ‌ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಶುಕ್ರವಾರ ಬೆಳಗಾವಿ ಜಿಲ್ಲಾ ಕೋಳಿ ಬೆಸ್ತ ಸಮಾಜ ಸಂಘದಿಂದ ಚನ್ನಮ್ಮ ವೃತ್ತದಲ್ಲಿ ಬೃಹತ್‌ ಮಾನವ ಸರಪಳಿ ನಿರ್ಮಿಸಿ ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.ಚನ್ನಮ್ಮ ವೃತ್ತದಿಂದ ಪ್ರತಿಭಟನಾ ರ್‍ಯಾಲಿ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಅಂಜಲಿ ಹಂತಕ ಕೊಲೆ ಬೆದರಿಕೆ ಹಾಕಿದ್ದು, ಈ ಬಗ್ಗೆ ಪೊಲೀಸರಿಗೆ ಮೌಖಿಕ ದೂರು ನೀಡಿದರೂ ಕ್ರಮಕೈಗೊಂಡಿಲ್ಲ. ಇವರ ನಿರ್ಲಕ್ಷ್ಯ ತೋರಿದ್ದರಿಂದ ಅಂಜಲಿ ಹತ್ಯೆ ನಡೆದಿದೆ. ನೇಹಾ ಹಿರೇಮಠ ಹತ್ಯೆ ಸಂದರ್ಭದಲ್ಲೇ ಪೊಲೀಸರು ಕಠಿಣ ಕ್ರಮಕೈಗೊಂಡಿದ್ದರೇ ಇಂತಹ ಘಟನೆಗಳು ಮರುಕಳಿಸುತ್ತಿರಲಿಲ್ಲ ಎಂದು ಆರೋಪಿಸಿದರು.

ನೇಹಾ ಹಾಗೂ ಅಂಜಲಿ ಹಂತಕರನ್ನು ಗಲ್ಲಿಗೇರಿಸಿ, ಎನ್‌ಕೌಂಟರ್‌ ಮಾಡಿ, ಸಾಧ್ಯವಾಗದಿದ್ದರೇ ನಮ್ಮ ಕೈಗೆ ಅವರನ್ನು ಕೊಟ್ಟು ಬಿಡಿ ನಾವು ನೋಡಿಕೊಳ್ಳುತ್ತೇವೆ ಎಂದು ಒತ್ತಾಯ ಮಾಡಿದರು.

ಈ ವೇಳೆ ವಿಧಾನ ಪರಿಷತ್‌ ಸದಸ್ಯ ಸಾಬಣ್ಣ ತಳವಾರ ಮಾತನಾಡಿ, ಹುಬ್ಬಳ್ಳಿಯಲ್ಲಿ ಅಮಾಯಕ ಯುವತಿಯರ ಮೇಲೆ ನಡೆದಿರುವ 2ನೇ ಘಟನೆ ಇದಾಗಿದೆ. ಈಗಲೂ ಕೂಡಾ ವಿದ್ಯಾರ್ಥಿನಿ ಮೇಲೆ ಹಲ್ಲೆ‌ ಮಾಡಿ ಬಳಿಕ ಕೊಲೆ ಮಾಡಲಾಗಿದೆ. ಯಾವುದೋ ಕಾರಣವಿಟ್ಟುಕೊಂಡು ಕೊಲೆ ಮಾಡಿದ್ದಾನೆ. ನೇಹಾ ಕೊಲೆ ಮಾಸುವ ಮುನ್ನವೇ ಈಗ ಮತ್ತೊಂದು ಕೊಲೆ ಆಗಿದೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಅಂಜಲಿ ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಮೃತ ಅಂಜಲಿ ಕುಟುಂಬದ ಸದಸ್ಯರಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ಸಂಘದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಧುಶ್ರೀ ಪೂಜಾರಿ ಮಾತನಾಡಿ, ನೇಹಾ ಕೊಲೆ ಇನ್ನೂ ಜನರು ಮರೆತ್ತಿಲ್ಲ ಅಷ್ಟರೊಳಗೆ ಮತ್ತೊಂದು ಕೊಲೆಯಾಗಿದೆ. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಇದರ ಬಗ್ಗೆ ಗಮನ ಸರಿಸಬೇಕು. ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.ಕೋಳಿ ಬೆಸ್ತ ಸಮಾಜದ ಜಿಲ್ಲಾಧ್ಯಕ್ಷ ದಿಲೀಪ ಕುರಂದವಾಡೆ, ಪ್ರಧಾನ ಕಾರ್ಯದರ್ಶಿ ಸಂಜಯ ಪಾಟೀಲ, ನಗರ ಅಧ್ಯಕ್ಷ ಸಿದ್ದಗೌಡ ಸುಣಗಾರ, ಯುವ ಅಧ್ಯಕ್ಷ ಅಪ್ಪಯ್ಯ ರಾಮರಾವ್, ತಾಲೂಕು ಅಧ್ಯಕ್ಷೆ ಗೀತಾ ಕೋಳಿ, ಹುಕ್ಕೇರಿ ತಾಲೂಕಾಧ್ಯಕ್ಷ ಅಶೋಕ್ ಶಿರಗೆ, ಲಕ್ಷ್ಮಣ ಯಮಕನಮರಡಿ, ಕಾಶಪ್ಪ ಕೋಳಿ, ಮಲ್ಲಪ್ಪ ಮುರಗೋಡ, ಸಾಗರ ಕೋಳಿ, ರವಿ ಪೂಜಾರ, ವಿಎಚ್‌ಪಿ ಮುಖಂಡ ಕೃಷ್ಣ ಭಟ್, ವಿಜಯ ಜಾಧವ್, ಅಪ್ಪಾಸಾಹೇಬ ಪೂಜಾರ, ರಮೇಶ ಧರೆನ್ನವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಎಬಿವಿಪಿ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು‌.

--------------------

ಕೋಟ್‌...

ಹುಬ್ಬಳ್ಳಿಯಲ್ಲಿ ಅಮಾಯಕ ಯುವತಿಯರ ಮೇಲೆ ನಡೆದಿರುವ 2ನೇ ಘಟನೆ ಇದಾಗಿದೆ. ಈಗಲೂ ಕೂಡಾ ವಿದ್ಯಾರ್ಥಿನಿ ಮೇಲೆ ಹಲ್ಲೆ‌ ಮಾಡಿ ಬಳಿಕ ಕೊಲೆ ಮಾಡಲಾಗಿದೆ. ಯಾವುದೋ ಕಾರಣ ಇಟ್ಟುಕೊಂಡು ಕೊಲೆ ಮಾಡಿದ್ದಾನೆ. ನೇಹಾ ಕೊಲೆ ಮಾಸುವ ಮುನ್ನವೇ ಈಗ ಮತ್ತೊಂದು ಕೊಲೆ ಆಗಿದೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಅಂಜಲಿ ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಮೃತ ಅಂಜಲಿ ಕುಟುಂಬದ ಸದಸ್ಯರಿಗೆ ಸರ್ಕಾರ ಪರಿಹಾರ ನೀಡಬೇಕು.

- ಸಾಬಣ್ಣ ತಳವಾರ, ವಿಧಾನ ಪರಿಷತ್‌ ಸದಸ್ಯ.