26 ರಂದು ಶ್ರೀ ಕೃಷ್ಣ ಜಯಂತ್ಯುತ್ಸವ ಕಾರ್ಯಕ್ರಮ

| Published : Aug 24 2024, 01:16 AM IST

ಸಾರಾಂಶ

Anjaneya idol installation today

ಯಾದಗಿರಿ: ಜಿಲ್ಲಾಡಳಿತ, ಜಿ.ಪಂ., ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶ್ರೀಕೃಷ್ಣ ಜಯಂತ್ಯುತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಡಳಿತ ಭವನ ಆಡಿಟೋರಿಯಂ ಸಭಾಂಗಣದಲ್ಲಿ 26ರಂದು ಬೆಳಿಗ್ಗೆ 11.30 ಕ್ಕೆ ಶ್ರೀಕೃಷ್ಣ ಜಯಂತ್ಯುತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಶ್ರೀಕೃಷ್ಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷ ನಾಯಕ ಟಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು. ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅಧ್ಯಕ್ಷತೆ ವಹಿಸುವರು. ಶಾಸಕರು, ಸದಸ್ಯರು, ಗಣ್ಯರು ಆಗಮಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ. ಸುಶೀಲಾ, ಜಿಪಂ ಸಿಇಓ ಗರಿಮಾ ಪನ್ವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮುಂತಾದವರು ಉಪಸ್ಥಿತರಿರುವರು.

-----