ಸಾರಾಂಶ
ಉತ್ತಮ ಆರೋಗ್ಯದ ದೃಷ್ಟಿಯಿಂದ ಗರ್ಭಿಣಿಯರು ಬೇಕರಿ ತಿಂಡಿಗಳನ್ನು ತ್ಯಜಿಸಿ ದಿನನಿತ್ಯ ಆಹಾರದಲ್ಲಿ ಬೇಯಿಸಿದ ಮೊಟ್ಟೆ ವಿವಿಧ ಬಗೆಯ ಸೊಪ್ಪು ತರಕಾರಿ ಸೇರಿದಂತೆ ನಾರಿನಂಶ ಹೆಚ್ಚಿರುವ ಆಹಾರ ಪದಾರ್ಥಗಳನ್ನು ಸೇವಿಸಬೇಕು
ಕನ್ನಡಪ್ರಭ ವಾರ್ತೆ ಮಲ್ಕುಂಡಿ
ಪ್ರೋಟಿನ್ ಯುಕ್ತ ಆಹಾರ ಪದಾರ್ಥಗಳ ಸೇವನೆಯಿಂದ ಮನುಷ್ಯನ ಆರೋಗ್ಯ ಉತ್ತಮವಾಗಿರುತ್ತದೆ ಎಂದು ತಾಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್ ಹೇಳಿದರು.ಸಮೀಪದ ಆಂಜನಪುರ ಗ್ರಾಮದಲ್ಲಿ ಅಯೋಜಿಸಿದ ಪೋಷಣ್ ಮಾಸಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತಮ ಆರೋಗ್ಯದ ದೃಷ್ಟಿಯಿಂದ ಗರ್ಭಿಣಿಯರು ಬೇಕರಿ ತಿಂಡಿಗಳನ್ನು ತ್ಯಜಿಸಿ ದಿನನಿತ್ಯ ಆಹಾರದಲ್ಲಿ ಬೇಯಿಸಿದ ಮೊಟ್ಟೆ ವಿವಿಧ ಬಗೆಯ ಸೊಪ್ಪು ತರಕಾರಿ ಸೇರಿದಂತೆ ನಾರಿನಂಶ ಹೆಚ್ಚಿರುವ ಆಹಾರ ಪದಾರ್ಥಗಳನ್ನು ಸೇವಿಸಬೇಕು ಎಂದು ಸಲಹೆ ನೀಡಿದರು.ಗ್ರಾಪಂ ಮಾಜಿ ಅಧ್ಯಕ್ಷ ಸಿದ್ದರಾಜು, ಗ್ರಾಪಂ ಸದಸ್ಯ ಸತೀಶ್, ವಿಠಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೇಲ್ವಿಚಾರಕಿ ಆರತಿ, ತಾಲೂಕು ಸಂಯೋಜಕರಾದ ಶಿವಕುಮಾರ್ ಇದ್ದರು.