₹1.89 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಜಪ್ತಿ

| Published : May 29 2024, 12:53 AM IST

ಸಾರಾಂಶ

ಇಂಡಿ: ಅಕ್ರಮವಾಗಿ ಅಕ್ಕಿ ಸಂಗ್ರಹಿಸಿಡಲಾಗಿದ್ದ ಅಡ್ಡೆಯ ಮೇಲೆ ಆಹಾರ ಇಲಾಖೆಯ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಹಾಗೂ ಪೊಲೀಸರು ದಾಳಿ ನಡೆಸಿದ್ದು, ಲಕ್ಷಾಂತರ ಮೌಲ್ಯದ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ತಾಲೂಕಿನ ಶಿರಶ್ಯಾಡ ಗ್ರಾಮದ ಹಣಮಂತರಾಯಗೌಡ ಪಾಟೀಲ ಅವರ ಜಮೀನದಲ್ಲಿ ಅನ್ನಭಾಗ್ಯ ಯೋಜನೆಯ ಪಡಿತರ ವಿತರಿಸಲಾದ ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಖರೀದಿ ಮಾಡಿಕೊಂಡಿದ್ದ ಆರೋಪಿ ತೆಗ್ಗಿಹಳ್ಳಿ ಗ್ರಾಮದ ಅಸುದುಲ್ಲಾ ಮುಜಾವರ ಸಂಗ್ರಹಿಸಿಟ್ಟಿದ್ದ. ಈ ಖಚಿತ ಮಾಹಿತಿ ಆಧರಿಸಿ ಆಹಾರ ಇಲಾಖೆ ಅಧಿಕಾರಿ ಹಾಗೂ ಪೊಲೀಸರು ದಾಳಿ ಮಾಡಿ ₹ 1,89,290 ಮೌಲ್ಯದ 171 ಚೀಲಗಳಲ್ಲಿನ 8,230 ಕೆಜಿ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಇಂಡಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಸುದುಲ್ಲಾ ಮುಜಾವರನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತು ತನಿಖೆಯನ್ನು ಮುಂದುವರಿಸಿದ್ದಾರೆ