ಬಡವರ ಹಸಿವು ನೀಗಲು ಅನ್ನಭಾಗ್ಯ: ಶಾಸಕ ಬಣಕಾರ

| Published : Mar 27 2025, 01:03 AM IST

ಸಾರಾಂಶ

ಸರ್ಕಾರದ ಯೋಜನೆಗಳು ರಾಜ್ಯದ ಕಟ್ಟಕಡೆಯ ಪ್ರಜೆಗೂ ತಲುಪಿಸಬೇಕು ಹಾಗೂ ರಾಜ್ಯವನ್ನು ಹಸಿವುಮುಕ್ತ ರಾಜ್ಯವನ್ನಾಗಿ ಮಾಡಬೇಕೆನ್ನುವುದೇ ಕಾಂಗ್ರೆಸ್ ಸರ್ಕಾರದ ಉದ್ದೇಶವಾಗಿದೆ.

ಹಿರೇಕೆರೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರ ಹಸಿವನ್ನು ಅರಿತಿದ್ದಾರೆ. ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲಬಾರದು ಎಂಬ ಕಾಳಜಿಯಿಂದ ರಾಜ್ಯದ ಜನತೆಗೆ ಅನ್ಯಭಾಗ್ಯದ ಮೂಲಕ ಹಸಿವನ್ನು ನೀಗಿಸುತ್ತಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಬುಧವಾರ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಸ್ಥಳೀಯ ಟಿಎಪಿಸಿಎಎಂಎಸ್ ಹಿರೇಕೆರೂರು ಮತ್ತು ರಟ್ಟೀಹಳ್ಳಿ ತಾಲೂಕಿನ ನ್ಯಾಯಬೆಲೆ ಅಂಗಡಿ ಪಡಿತರ ವಿತರಕರ ಸಹಯೋಗದಲ್ಲಿ ಗ್ಯಾರಂಟಿ ಯೋಜನೆಯಡಿ ಪಡಿತರ ಚೀಟಿದಾರರಿಗೆ ಡಿಬಿಟಿ ಮೂಲಕ ಹಣ ಸಂದಾಯದ ಬದಲಾಗಿ ಅಕ್ಕಿ ವಿತರಣೆ ಮತ್ತು ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಸರ್ಕಾರದ ಯೋಜನೆಗಳು ರಾಜ್ಯದ ಕಟ್ಟಕಡೆಯ ಪ್ರಜೆಗೂ ತಲುಪಿಸಬೇಕು ಹಾಗೂ ರಾಜ್ಯವನ್ನು ಹಸಿವುಮುಕ್ತ ರಾಜ್ಯವನ್ನಾಗಿ ಮಾಡಬೇಕೆನ್ನುವುದೇ ಕಾಂಗ್ರೆಸ್ ಸರ್ಕಾರದ ಉದ್ದೇಶವಾಗಿದೆ. ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನತೆಗೆ ನೀಡಿದ 5 ಗ್ಯಾರಂಟಿಗಳ ಭರವಸೆಗಳನ್ನು ಅಧಿಕಾರಕ್ಕೆ ಬಂದ 100 ದಿನಗೊಳಗಾಗಿ ಜಾರಿಗೊಳಿದ ಸರ್ಕಾರ ನಮ್ಮದು ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಿಲ್ಲಾ ಉಪನಿರ್ದೇಶಕ ರಮೇಶ ಎಂ.ಎಸ್. ಮಾತನಾಡಿ, 2023ರ ಜುಲೈದಿಂದ 2024ರ ಡಿಸೆಂಬರ್‌ ವರೆಗೆ ಪ್ರತಿ ಫಲಾನುಭವಿಗೆ ₹170 ಹಣವನ್ನು ಡಿಬಿಟಿ ಮೂಲಕ ಜಮಾ ಮಾಡಲಾಗಿದೆ. ಫೆಬ್ರವರಿ ತಿಂಗಳಿನಿಂದ ಹಣದ ಬದಲಾಗಿ ಅಕ್ಕಿ ವಿತರಣೆಗೆ ಸರ್ಕಾರ ಆದೇಶ ಮಾಡಿದೆ. ಸರ್ಕಾರ ಉತ್ತಮ ಪೋಷಕಾಂಶಗಳನ್ನು ಹೊಂದಿದ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆ ಮಾಡುತ್ತಿದ್ದು, ಅದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಎಂ.ಎಸ್. ರಮೇಶ, ಹಿರೇಕೆರೂರು ತಹಸೀಲ್ದಾರ್ ಎಚ್. ಪ್ರಭಾಕರಗೌಡ, ರಟ್ಟೀಹಳ್ಳಿ ತಹಸೀಲ್ದಾರ್ ಶ್ವೇತಾ ಅಮರಾವತಿ, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಎಸ್. ಪಾಟೀಲ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬುರಡೀಕಟ್ಟಿ, ನಾರಾಯಣಪ್ಪ ಗೌರಕ್ಕನವರ, ಜಿಲ್ಲಾ ಉಪಾಧ್ಯಕ್ಷ ರಮೇಶ ಮಡಿವಾಳರ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಧಾ ಚಿಂದಿ, ಉಪಾಧ್ಯಕ್ಷ ರಾಜು ಕರಡಿ, ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಂದ್ರ ಬಡಳ್ಳಿ, ಸದಸ್ಯರಾದ ಕಂಠಾಧರ ಅಂಗಡಿ, ಸನಾವುಲ್ಲಾ ಮಕಾನ್ದಾರ್, ರಮೇಶ ಕೋಡಿಹಳ್ಳಿ, ಕವಿತಾ ಹರ‍್ನಳ್ಳಿ, ನೌಕರರ ರಾಜ್ಯ ಪರಿಷತ್ ಸದಸ್ಯರಾದ ನಾಗರಾಜ ಕಟ್ಟಿಮನಿ, ಹರೀಶ ದಾಸರ್ ಸ್ವಾಗತಿಸಿದರು. ಗೀತಾ ಪುಜಾರ ನಿರೂಪಿಸಿದರು. ಹರೀಶ ವಂದಿಸಿದರು..