ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರು ಶನಿವಾರ ಉಡುಪಿಯ ಯಕ್ಷಗಾನ ಕಲಾರಂಗಕ್ಕೆ ಭೇಟಿ ನೀಡಿದ್ದು ಕಟ್ಟಡ ಮತ್ತು ಮನೆ ಹಸ್ತಾಂತರದ ವಿಡಿಯೋ ತುಣುಕು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.

ಉಡುಪಿ: ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರು ಶನಿವಾರ ಉಡುಪಿಯ ಯಕ್ಷಗಾನ ಕಲಾರಂಗಕ್ಕೆ ಭೇಟಿ ನೀಡಿದ್ದು ಕಟ್ಟಡ ಮತ್ತು ಮನೆ ಹಸ್ತಾಂತರದ ವಿಡಿಯೋ ತುಣುಕು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಸಂಸ್ಥೆಯ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಅಗಾಧತೆ ಮತ್ತು ಸಾಮಾಜಿಕ ಕಳಕಳಿಗೆ ಮೆಚ್ಚುಗೆ ಸೂಚಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಅವರು, ಉಡುಪಿ ಬಿಟ್ಟಮೇಲೂ ಅಣ್ಣಮಲೈ ಅವರು ಕಲಾರಂಗವನ್ನು ನಿರಂತರ ಪ್ರೋತ್ಸಾಹಿಸುತ್ತ ಬಂದಿರುವುದನ್ನು ಕೃತಜ್ಞತೆಯಿಂದ ಸ್ಮರಿಸಿಕೊಂಡರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಶಾಲು, ಸ್ಮರಣಿಕೆಯೊಂದಿಗೆ ಗೌರವಿಸಿದರು.